Asianet Suvarna News Asianet Suvarna News

ಡಿನೋಟಿಫೈ ಕೇಸ್: ಕುಮಾರಸ್ವಾಮಿಗೆ ಲೋಕಾ 1 ತಾಸು ವಿಚಾರಣೆ

ಲೋಕಾಯುಕ್ತ ಪೊಲೀಸರ ನೋಟಿಸ್‌ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಹಾಜರಾಗಿ ಪ್ರಕರಣ ಸಂಬಂಧ ಹೇಳಿಕೆ ನೀಡಿದರು. 1 ತಾಸುಗಿಂತ ಹೆಚ್ಚಿನ ಸಮಯ ವಿಚಾರಣೆ ಎದುರಿಸಿದರು. ಗಂಗೇನಹಳ್ಳಿಯ 7/1ಬಿ, ಸಿ ಮತ್ತು ಡಿ ಸರ್ವೇ ನಂಬರ್‌ನಲ್ಲಿ 1.11 ಎಕರೆಯನ್ನು ಕುಮಾರಸ್ವಾಮಿ ಸಿಎಂ ಆಗಿದ್ದ ಅವಧಿಯಲ್ಲಿ ಡಿನೋಟಿಫೈ ಮಾಡಿರುವ ಬಗ್ಗೆ ಪ್ರಶ್ನೆ ಕೇಳಿ ಹೇಳಿಕೆ ಪಡೆದುಕೊಳ್ಳಲಾಯಿತು. 

Lokayukta 1 hour interrogation for HD Kumaraswamy on Illegal denotification case grg
Author
First Published Sep 28, 2024, 4:45 AM IST | Last Updated Sep 28, 2024, 4:45 AM IST

ಬೆಂಗಳೂರು(ಸೆ.28): ಗಂಗೇನಹಳ್ಳಿಯ 1.11 ಎಕರೆ ಭೂಮಿ ಅಕ್ರಮ ಡಿನೋಟಿಫಿಕೇಷನ್ ಆರೋಪದ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾದ ಬೆನ್ನಲ್ಲೇ ಇದೀಗ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ.

ಲೋಕಾಯುಕ್ತ ಪೊಲೀಸರ ನೋಟಿಸ್‌ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಹಾಜರಾಗಿ ಪ್ರಕರಣ ಸಂಬಂಧ ಹೇಳಿಕೆ ನೀಡಿದರು. 1 ತಾಸುಗಿಂತ ಹೆಚ್ಚಿನ ಸಮಯ ವಿಚಾರಣೆ ಎದುರಿಸಿದರು. ಗಂಗೇನಹಳ್ಳಿಯ 7/1ಬಿ, ಸಿ ಮತ್ತು ಡಿ ಸರ್ವೇ ನಂಬರ್‌ನಲ್ಲಿ 1.11 ಎಕರೆಯನ್ನು ಕುಮಾರಸ್ವಾಮಿ ಸಿಎಂ ಆಗಿದ್ದ ಅವಧಿಯಲ್ಲಿ ಡಿನೋಟಿಫೈ ಮಾಡಿರುವ ಬಗ್ಗೆ ಪ್ರಶ್ನೆ ಕೇಳಿ ಹೇಳಿಕೆ ಪಡೆದುಕೊಳ್ಳಲಾಯಿತು.

ಎಚ್‌ಡಿಕೆ ಭಾಮೈದ ಹೆಸರಿಗೆ ನೋಂದಣಿ, ಅತ್ತೆ ಹೆಸರಿಗೆ ಡಿನೋಟಿಫಿಕೇಶನ್‌: ಸಿದ್ದರಾಮಯ್ಯ

ಕಳೆದ ಶನಿವಾರ ಯಡಿಯೂರಪ್ಪ ಅವರು ಸಹ ಇದೇ ಪ್ರಕರಣದ ಸಂಬಂಧ ಲೋಕಾಯುಕ್ತ ಪೊಲೀಸರಮುಂದೆ ಹಾಜರಾಗಿ ಹೇಳಿಕೆ ನೀಡಿದ್ದರು. ಅವರ ಆಡಳಿತಾವಧಿಯಲ್ಲಿ ಡಿನೋಟಿಫೈ ಆಗಿರುವಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಯಿತು. 
ಇತ್ತೀಚೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೇರಿದಂತೆ ಕಾಂಗ್ರೆಸ್‌ನ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಗಂಗೇನಹಳ್ಳಿಯಲ್ಲಿ 7/1ಬಿ, ಸಿ ಹಾಗೂ ಡಿ ಸರ್ವೆ ನಂಬರ್‌ನಲ್ಲಿ 1.11 ಎಕರೆ ಜಮೀನು ಬಿಡಿಎಗೆ ಭೂಸ್ವಾಧೀನಗೊಂಡಿತ್ತು. ಇದನ್ನು ಡಿನೋಟಿಫೈ ಮಾಡಬೇಕೆಂದು ರಾಜಶೇಖರಯ್ಯ ಎಂಬುವರು ಅರ್ಜಿ ಹಾಕಿದ್ದರು.

2007 ರಲ್ಲಿ ಅರ್ಜಿ ಬಂದ ದಿನವೇ ಮುಖ್ಯಮಂತ್ರಿ ಯಾಗಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಡಿನೋಟಿಫೈ ಮಾಡಲು ಸೂಚಿಸಿದ್ದರು ಎಂದು ಆರೋಪಿಸಿದ್ದರು. ಸರ್ಕಾರಬದಲಾಗಿಬಿ.ಎಸ್. ಯಡಿಯೂರಪ ಮುಖ್ಯ ಮಂತ್ರಿಯಾದ ಬಳಿಕ ಅದೇ ಕಡತ ಅವರ ಮುಂದೆ ಬರಲಿದ್ದು,2009- 10ರಲ್ಲಿ ಭೂಸ್ವಾಧೀನದಿಂದ ಕ್ಕೆಬಿಡಲಾಗುತ್ತದೆ. ಡಿನೋಟಿಫಿ ಕೇಷನ್‌ ಆದ ಒಂದೇ ತಿಂಗಳಿಗೆ ಕುಮಾರಸ್ವಾಮಿ ಬಾಮೈದ ಚನ್ನಪ ಎಂಬುವರಿಗೆ ಕ್ರಯಪತ್ರವಾಗುತ್ತದೆ. ಹೀಗೆ ಅಕ್ರಮವಾಗಿ ಡಿನೋಟಪ್ಪ ಆದ ಜಮೀನ ಆದ ಜಮೀನು ಕುಮಾರಸ್ವಾಮಿ ಕುಟುಂಬಕ್ಕೆ ಸೇರಿದೆ. ಇದು ವ್ಯವಸ್ಥಿತ ವಂಚನೆ ಎಂದು ದೂರಿದ್ದರು. 

ಎಚ್‌ಡಿಕೆ ವಿರುದ್ಧ ಕಾಂಗ್ರೆಸ್‌ ನಿತ್ಯ ದಾಖಲೆ ಹುಡುಕುತ್ತಿದೆ: ನಿಖಿಲ್‌ ಕುಮಾರಸ್ವಾಮಿ

ಗಂಡಾಂತರ ತಂದುಕೊಳ್ಳುವ ಕೆಲಸ ಮಾಡಿಲ್ಲ: 

ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನನಗೆ ಭೂ ಗಂಡಾಂತರ ಎಂದು ಚರ್ಚೆ ನಡೆ ಯುತ್ತಿದ್ದು, ರಾಜಕೀಯ ಜೀವನದಲ್ಲಿ ಗಂಡಾಂತರ ತಂದುಕೊಳ್ಳುವ ಯಾವುದೇ ಕೆಲಸವನ್ನೂ ಮಾಡಿಲ್ಲ ಎಂದು ಸಮಜಾಯಿಷಿ ನೀಡಿದರು. ರಾಜಕೀಯ ಒತ್ತಡದಿಂದ ನನ್ನ ಮೇಲಿನ ಈ ಪ್ರಕರಣವನ್ನು ಮುನ್ನೆಲೆಗೆ ತರಲಾಗಿದೆ. ಈ ಪ್ರಕರಣದಲ್ಲಿ ಕಾನೂನು ಬಾಹಿರವಾಗಿನನ್ನಿಂದ ಆದೇಶವಾಗಿಲ್ಲ.ಈಗಾಗಲೇ ಪ್ರಕರಣದ ಬಗ್ಗೆ ಲೋಕಾಯುಕ್ತರು ಹೇಳಿಕೆ ದಾಖಲಿಸಿಕೊಂಡಿದ್ದರು. ಈಗ ಮತ್ತೆ ಹೇಳಿಕೆ ನೀಡಿದ್ದೇನೆ. ಪ್ರಕರಣದ ವಿಚಾರದಲ್ಲಿ ನನಗೆ ಯಾವ ಆತಂಕವೂ ಇಲ್ಲ ಎಂದರು. ನಾನೇನು ತಪ್ಪು ಮಾಡಿ ಇಲ್ಲಿಗೆ ಬಂದಿಲ್ಲ. ಸ್ವಯಂಪ್ರೇರಿತವಾಗಿ ಬಂದಿದ್ದೇನೆ. ನನಗೆ ಯಾವ ನೋಟಿಸ್ ಕೂಡ ಬಂದಿಲ್ಲ. ಶನಿವಾರ ಬೆಳಗ್ಗೆ 11 ಗಂಟೆಗೆ ದಾಖಲಾತಿಗಳನ್ನು ಬಿಡುಗಡೆಮಾಡುತ್ತೇನೆ. ಈಸರ್ಕಾರದಲ್ಲಿರುವ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು ದರೋಡೆಕೋರರು. ಆ ದಾಖಲೆಗಳನ್ನು ನೋಡಿದ ಮೇಲೆ ಕಾಂಗ್ರೆಸ್ ಸರ್ಕಾರದ ಸಚಿವರು ಮಾತನಾಡಲಿ ಎಂದು ಕುಮಾರಸ್ವಾಮಿ ತಿಳಿಸಿದರು. 

ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳುಹಿಸಬೇಕು ಎಂದು ಹಿಂದಿನ ಐದು ವರ್ಷದ ಕಾಂಗ್ರೆಸ್ ಸರ್ಕಾರದಲ್ಲಿ ಸಂಚು ರೂಪಿಸಿದ್ದರು. ಅವರ ಆಸೆ ಈಡೇರಲಿಲ್ಲ. ಯಾಕೆಂದರೆ ಆ ಸಂದರ್ಭದಲ್ಲಿಯೂ ದಿನವೂ ಕಾಂಗ್ರೆಸ್ ನಾಯಕರ ಭ್ರಷ್ಟ ಮುಖವನ್ನು ಬಯಲು ಮಾಡುತ್ತಿದ್ದೆ. ನನ್ನ ಕಾಟ ತಡೆಯಲಾಗುತ್ತಿಲ್ಲ, ಒಂದು ದಿನವಾದರೂ ಇವನನ್ನು ಜೈಲಿಗೆ ಕಳಿಸಬೇಕು ಎಂದು ಹೊಂಚು ಹಾಕಿದ್ದರು. ಆಗಲೂ ಇವರಿಗೆ ನನ್ನನ್ನು ಏನೂ ಮಾಡಲು ಆಗಲಿಲ್ಲ, ಈಗಲೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

Latest Videos
Follow Us:
Download App:
  • android
  • ios