BIG BREAKING: ಬೆಳ್ಳಂಬೆಳಗ್ಗೆ ಬೆಂಗಳೂರು, ಮಂಡ್ಯ, ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ಲೋಕಾ ದಾಳಿ!

ಅಕ್ರಮ ಆಸ್ತಿ ಸಂಪಾದನೆ ದೂರು ಹಿನ್ನೆಲೆ ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಸುಮಾರು 25 ಕಡೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Lokayukta raid in few district of Karnataka including Bengaluru mangaluru mandya rav

ಬೆಂಗಳೂರು (ನ.21): ಅಕ್ರಮ ಆಸ್ತಿ ಸಂಪಾದನೆ ದೂರು ಹಿನ್ನೆಲೆ ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಸುಮಾರು 25 ಕಡೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು, ಮಂಡ್ಯ, ಮಂಗಳೂರು ಸೇರಿದಂತೆ ಸೇರಿ ಕರ್ನಾಟಕದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸುವ ಮೂಲಕ ಭ್ರಷ್ಟರ ವಿರುದ್ಡ ಲೋಕಾಯುಕ್ತ ಅಧಿಕಾರಿಗಳು ಸಮರ ಸಾರಿದ್ದಾರೆ. ಇತ್ತೀಚೆಗೆ ಅಬಕಾರಿ ಭ್ರಷ್ಟಾಚಾರದ ಬಗ್ಗೆ ದೂರು ಕೇಳಿಬಂದಿತ್ತು ಹಿನ್ನೆಲೆ ಅಬಕಾರಿ ಇಲಾಖೆ ಅಧಿಕಾರಿಗಳ ಮನೆಗಳ ಮೇಲೂ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು. ನೀರಾವರಿ ನಿಗಮ, ಗಣಿ ಭೂ ಇಲಾಖೆ, ಟೌನ್ ಪ್ಲಾನಿಂಗ್ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ.

Bhatkal: 50 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೆಸ್ತಾ

ಬೆಂಗಳೂರು ಟೌನ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ, ಅಬಕಾರಿ ಇಲಾಖೆ ಎಸ್ಪಿ ಮೋಹನ್, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಯಾಗಿರುವ ಕೃಷ್ಣವೇಣಿ  ಅವರ ಮಂಗಳೂರು ನಿವಾಸ, ಕಾವೇರಿ ನಿಗಮ ಎಂಡಿ ಮಹೇಶ್ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಲ್ಲೆಡೆ ದಾಖಲೆ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು.

ಮಹೇಶ್ ಸಂಬಂಧಿಕರ ನಿವಾಸದ ಮೇಲೆ ದಾಳಿ:

ಅಕ್ರಮ ಆಸ್ತಿ ಸಂಪಾದನೆ ದೂರು ಬಂದ ಹಿನ್ನೆಲೆ ಮಂಡ್ಯ ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ನೇತೃತ್ವದಲ್ಲಿ  ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ ಮನೆ, ಅವರ ಸಂಬಂಧಿಕರ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ದಳವಾಯಿ‌‌ ಕೋಡಿಹಳ್ಳಿಯಲ್ಲಿರುವ ಮಹೇಶ್ ಅತ್ತೆ ಮನೆ ಮೇಲೆಯೂ ದಾಳಿ ನಡೆಸಿ ಮನೆಯಲ್ಲಿರುವ ದಾಖಲೆಗಳು, ಆಸ್ತಿ‌ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.

ನನ್ನ ಅವಧಿಯಲ್ಲಿ ಸಿಎಂ ಪತ್ನಿಗೆ ಬದಲಿ ಭೂಮಿ ಕೊಡಲು ಸಿದ್ದರಾಮಯ್ಯ ಒಪ್ಪಲಿಲ್ಲ: ಮುಡಾ ಮಾಜಿ ಅಧ್ಯಕ್ಷ ಧ್ರುವಕುಮಾರ್

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಸಮೀಪದ ‌ಪಂಪ್ ಹೌಸ್, ನಮೃತ ಪೆಟ್ರೋಲ್ ಬಂಕ್‌ ಮೇಲೆಯೂ ಲೋಕಾಯುಕ್ತ ದಾಳಿ ನಡೆಸಿದರು. ಎಂಡಿ ಮಹೇಶ್ ಪತ್ನಿ ಹೆಸರಿನಲ್ಲಿರುವ ಪೆಟ್ರೋಲ್ ಬಂಕ್. ಪೆಟ್ರೋಲ್ ಬಂಕ್ ದಾಖಲೆ ಸಹಿತ ಇತರೆ ದಾಖಲೆಗಳನ್ನು ಜಾಲಾಡುತ್ತಿರುವ ಪೊಲೀಸರು.
 

Latest Videos
Follow Us:
Download App:
  • android
  • ios