ಕಲಬುರಗಿಯ ಯಡ್ರಾಮಿ ತಾಲೂಕಿನಲ್ಲಿ ಬಸವ ವಸತಿ ಯೋಜನೆಯ ಸಹಾಯಧನ ಮಂಜೂರು ಮಾಡಲು ₹20,000 ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಪಂಚಾಯತಿ ಕಂಪ್ಯೂಟರ್ ಆಪರೇಟರ್‌ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಫಲಾನುಭವಿಯೊಬ್ಬರ ದೂರಿನ ಮೇರೆಗೆ ಈ ದಾಳಿ ನಡೆದಿದೆ. 

ಬಸವ ವಸತಿ ಯೋಜನೆಯ ಸಹಾಯಧನ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ

ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಗ್ರಾಮ ಪಂಚಾಯತಿ ಕಂಪ್ಯೂಟರ್ ಆಪರೇಟರ್ ಲೋಕಾ ಬಲೆಗೆ ಬಿದ್ದಿದ್ದಾರೆ. ಬಸವ ವಸತಿ ಯೋಜನೆಯ ಸಹಾಯಧನ ಮಂಜೂರು ಮಾಡುವುದಕ್ಕೆ 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಪಂಚಾಯತ್ ಕಂಪ್ಯೂಟರ್ ಆಪರೇಟರ್‌ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮ ಪಂಚಾಯತಿ ಕಂಪ್ಯೂಟರ್ ಆಪರೇಟರ್ ಬಂದೇನವಾಜ್ ಲೋಕಾ ಬಲೆಗೆ ಬಿದ್ದವ.

Add Asianetnews Kannada as a Preferred SourcegooglePreferred

ಗ್ರಾ.ಪಂ. ಕಂಪ್ಯೂಟರ್ ಆಪರೇಟರ್ ಲೋಕಾಬಲೆಗೆ

ಕಂಪ್ಯೂಟರ್ ಆಪರೇಟರ್ ಬಂದೇನವಾಜ್ ಮಲ್ಲಿಕಾರ್ಜುನ ಮಳ್ಳಿ ಎನ್ನುವ ಫಲಾನುಭವಿ ಬಳಿ ಬಸವ ವಸತಿ ಯೋಜನೆಯ ಸಹಾಯಧನ ಮಂಜೂರು ಮಾಡಲು 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಡಿದ್ದ. ಮುಂಗಡವಾಗಿ 5 ಸಾವಿರ ರೂ. ನಗದು ಹಾಗೂ 3 ಸಾವಿರ ರೂಪಾಯಿ ಫೋನ್ ಪೇ ಮೂಲಕ ಲಂಚ ಪಡೆದಿದ್ದ. ಈ ಸಂಬಂಧ ಮಲ್ಲಿಕಾರ್ಜುನ ಮಳ್ಳಿ ಲೋಕಾಯುಕ್ತಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಂಪ್ಯೂಟರ್ ಆಪರೇಟರ್ ಬಂದೇನವಾಜ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಲೋಕಾಯುಕ್ತ ಎಸ್ ಪಿ ಸಿದ್ದರಾಜು ಸಿ ಮಾರ್ಗದರ್ಶನದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಮನೆಯಲ್ಲೇ ಲೈಂ*ಗಿಕ ದೌರ್ಜನ್ಯವೆಸಗಿ ಐಆರ್‌ಎಸ್ ಅಧಿಕಾರಿಯ 22ರ ಹರೆಯದ ಪುತ್ರಿಯ ಭೀಕರ ಹತ್ಯೆ