ಹೆಚ್ಚಿನ ಹಣ ವಸೂಲಿ: ರಾಜ್ಯಾದ್ಯಂತ ಮಧ್ಯರಾತ್ರಿ ಆರ್‌ಟಿಒ ಚೆಕ್‌ಪೋಸ್ಟ್‌ ಮೇಲೆ ಲೋಕಾಯುಕ್ತ ದಾಳಿ

ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಮೊಳಕೇರಾ ಬಳಿ ಇರುವ ಆರ್‌ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗೂಡ್ಸ್ ವಾಹನಗಳಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಲೋಕಾಯುಕ್ತ ಎಸ್‌ಪಿ ಬಿ.ಕೆ.ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ. 

Lokayukta Raid on RTO checkpost across the Karnataka grg

ಬೆಂಗಳೂರು(ಅ.08):  ರಾಜ್ಯದ ಬೀದರ್‌, ಕೋಲಾರ, ಬಳ್ಳಾರಿ, ಚಿಕ್ಕೋಡಿ ಹಾಗೂ ವಿಜಯಪುರ ಮಧ್ಯರಾತ್ರಿ ಆರ್‌ಟಿಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಮೊಳಕೇರಾ ಬಳಿ ಇರುವ ಆರ್‌ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗೂಡ್ಸ್ ವಾಹನಗಳಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಲೋಕಾಯುಕ್ತ ಎಸ್‌ಪಿ ಬಿ.ಕೆ.ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ. 

ಲೋಕಾಯುಕ್ತ ದಾಳಿ : ಚಿನ್ನದ ಮೂಟೆಯನ್ನು ಪಕ್ಕದ ಮನೆಗೆ ಎಸೆದ ಸರ್ಕಾರಿ ಅಧಿಕಾರಿ ಅತ್ಹರ್ ಅಲಿ

ಬಳ್ಳಾರಿ: ಇನ್ನು ಬಳ್ಳಾರಿ ತಾಲೂಕಿನ ಪಿಡಿ‌ ಹಳ್ಳಿ ಆರ್ ಟಿಓ‌ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಮಧ್ಯರಾತ್ರಿ 2 ಗಂಟೆಗೆ ದಾಳಿ ನಡೆದಿದೆ. ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ಲೋಕಾಯುಕ್ತ ಸಿಬ್ಬಂದಿ ದಾಳಿ ನಡೆಸಿದ್ದಾರೆ. 
ರಾಜ್ಯಾದ್ಯಂತ ಆರ್ಟಿಓ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿದ್ದಾರೆ. ಚೆಕ್ ಪೋಸ್ಟ್ ನಲ್ಲಿದ್ದ ಹೆಚ್ಚಿನ ಹಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಲೋಕಾಯುಕ್ತ ತಂಡದಿಂದ ಪರಿಶೀಲನಾ ಕಾರ್ಯ ಮುಂದುವರೆದಿದೆ. 

ಕೋಲಾರ: ಕೋಲಾರದಲ್ಲಿ ಬೆಳ್ಳಂಬೆಳಿಗ್ಗೆ RTO ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ RTO ಚೆಕ್ ಪೋಸ್ಟ್ ಮೇಲೆ ದಾಳಿ ಮಾಡಲಾಗಿದೆ. ಮುಳಬಾಗಿಲು ತಾಲೂಕಿನ ನಂಗಲಿ RTO ಚೆಕ್ ಪೋಸ್ಟ್ ಮೇಲೂ ದಾಳಿ ನಡೆದಿದೆ. RTO ಚೆಕ್ ಪೋಸ್ಟ್ ಗಳ ವಿರುದ್ಧ ಅತಿಯಾದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. 

ಈ ಸಂಬಂಧ ಸೂಮೋಟೋ ಕೇಸ್ ದಾಖಲಿಸಿಕೊಂಡು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.  ಎರಡು ಚೆಕ್ ಪೋಸ್ಟ್ ಗಳಲ್ಲಿ ದಾಖಲೆಗಿಂತ ಅಧಿಕ ಹಣ ಪತ್ತೆಯಾಗಿದೆ. ಸುಮಾರು 20 ಸಾವಿರಕ್ಕೂ ಅಧಿಕ ಹಣ ಪತ್ತೆಯಾಗಿದೆ. ಅಧಿಕಾರಿಗಳು ತನಿಖೆಯನ್ನ ಮುಂದುವರೆಸಿದ್ದಾರೆ. 

ಬೆಳ್ಳಂ ಬೆಳಗ್ಗೆ ಭ್ರಷ್ಟರ ಚಳಿ ಬಿಡಿಸಿದ ಲೋಕಾಯುಕ್ತ ಅಧಿಕಾರಿಗಳು: ರಾಜ್ಯಾದ್ಯಂತ ಲೋಕಾ ರೇಡ್‌..!

ಚಿಕ್ಕೋಡಿ: ಬೆಳ್ಳಂಬೆಳಗ್ಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ಬಳಿಯ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್‌ಪಿ ಹನುಮಂತರಾಯ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಚೆಕ್ ಪೋಸ್ಟ್‌ನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನನ್ನ ಪರಿಶೀಲಿಸುತ್ತಿದ್ದಾರೆ. ಸುಮಾರು ಆರು ಜನ ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆಸಲಾಗುತ್ತಿದೆ.  ಲಾರಿ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.  

ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ್ ಬಳಿ ಇರುವ ಆರ್ ಟಿ ಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲೇಶ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ. 

Latest Videos
Follow Us:
Download App:
  • android
  • ios