ಬೆಂಗಳೂರು: ಇನ್ನು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿರುವ ನಟ ಪ್ರಕಾಶ್ ರೈ ಅವರಿಗೆ ಕಾಂಗ್ರೆಸ್ ಪರೋಕ್ಷ ಬೆಂಬಲ ನೀಡುವ ಸಾಧ್ಯತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. 

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಕಾಶ್ ರೈ ಅವರು ಈ ವಿಚಾರದ ಬಗ್ಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದಾರೆ. 

ನನ್ನೊಂದಿಗೆ ಈ ವಿಚಾರ ಚರ್ಚೆಗೆ ಬಂದಿಲ್ಲ ಎಂದು ತಿಳಿಸಿದರು.