ಕೇಂದ್ರದ ಯೋಜನೆಗಳನ್ನು ರಾಜ್ಯದ ಜನರಿಗೆ ತಲುಪಿಸುವಲ್ಲಿ ರಾಜಕಾರಣ ಮಾಡಿದರೆ ರಾಜ್ಯಕ್ಕೆ ನಷ್ಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು (ಮೇ.30) : ಕೇಂದ್ರದ ಯೋಜನೆಗಳನ್ನು ರಾಜ್ಯದ ಜನರಿಗೆ ತಲುಪಿಸುವಲ್ಲಿ ರಾಜಕಾರಣ ಮಾಡಿದರೆ ರಾಜ್ಯಕ್ಕೆ ನಷ್ಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ(PM Narendra Modi) ನೇತೃತ್ವದ ಕೇಂದ್ರ ಸರ್ಕಾರ ಒಂಬತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದರು.

ವಿಶ್ವಮಾನ್ಯ ನಾಯಕರಾದಂತಹ ನರೇಂದ್ರ ಮೋದಿ ನೇತೃತ್ವದ ಸರ್ಕಾರ 9 ವರ್ಷ ಪೂರ್ಣಗೊಳಿಸಿದೆ. ಒಂಭತ್ತು ವರ್ಷದಲ್ಲಿ ಸಾಕಷ್ಟುಬದಲಾಗಿದೆ. ಪ್ರತಿಯೊಬ್ಬ ನಾಗರಿಕನ ಬದುಕಿನಲ್ಲಿ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಉನ್ನತೀಕರಣ ಆಗಿರುವುದನ್ನು ನಾವು ನೋಡಿದ್ದೇವೆ ಎಂದರು.

ನಿಷೇಧ ಮಾಡುವ ಬದಲು ಆರೆಸ್ಸೆಸ್‌ನಲ್ಲಿರುವ ಶೂದ್ರ, ದಲಿತರನ್ನ ಸೆಳೆಯಬೇಕು: ಜಾರಕಿಹೊಳಿ

ಪ್ರಧಾನಿ ಮೋದಿ ಅಧಿಕಾರ ತೆಗೆದುಕೊಂಡಾಗ ಆರ್ಥಿಕ ಪರಿಸ್ಥಿತಿ ಸರಿಯಾಗಿರಲಿಲ್ಲ. ಭಾರತದ ವಿಶ್ವಾಸಾರ್ಹತೆ ಕುಸಿತ ಕಂಡಿತ್ತು. ಇಂತಹ ಸಂದರ್ಭದಲ್ಲಿ ಮೋದಿಯವರು ತಾವು ಗುಜರಾತಿನ ಮುಖ್ಯಮಂತ್ರಿಯಾಗಿ ಪಡೆದಿದ್ದ ಅನುಭವ ಹಾಗೂ ಇಡೀ ದೇಶ ಅರಿತಿದ್ದರಿಂದ ದೇಶದ ಆಂತರಿಕ ಮತ್ತು ಬಾಹ್ಯ ಸುರಕ್ಷತೆಗೆ ಒತ್ತು ಕೊಟ್ಟಿದ್ದಾರೆ ಎಂದು ತಿಳಿಸಿದರು.

ಯುಪಿಎ ಅವಧಿಯಲ್ಲಿ ಭಯೋತ್ಪಾದಕ ಚಟುವಟಿಕೆ ಹೆಚ್ಚಾಗಿತ್ತು. ರಾಷ್ಟ್ರದ ಸುರಕ್ಷತೆ ಮತ್ತು ಏಕತೆ ಅಖಂಡತೆಯನ್ನು ಕಾಪಾಡುವ ಕೆಲಸ ಮಾಡಿದರು. ಆರ್ಟಿಕಲ… 370 ರದ್ದು ಮಾಡುವ ಮೂಲಕ ದೇಶದ ಏಕತೆ ಕಾಪಾಡಿದರು. ಪ್ರಧಾನಿಯಾದ ಮೇಲೆ ಮೋದಿಯವರು ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಎಸ್‌ಟಿ ಜಾರಿಗೆ ತಂದರು. ಇದರಿಂದ ದೇಶ ಹಾಗೂ ರಾಜ್ಯಗಳ ಆರ್ಥಿಕ ಪ್ರಗತಿ ಹೆಚ್ಚಾಯಿತು. ಮೊದಲ ಐದು ರಾಜ್ಯಗಳಿಗೆ 14% ಗ್ಯಾರಂಟಿ ಫಂಡ್‌ ಬರುವಂತೆ ಮಾಡಿದರು ಎಂದರು.

ನರೇಂದ್ರ ಮೋದಿ ಅವರು ನೀತಿ ಆಯೋಗ ಜಾರಿಗೆ ತಂದು ರಾಜ್ಯಗಳಿಗೆ 40 ರಷ್ಟುಫಂಡ್‌ ಡೆವ್ಯಲೂಸನ್‌ ಮಾಡಿದರು. ಶಿಕ್ಷಣ ಪದ್ಧತಿಯಲ್ಲಿ ಅಮೂಲಾಗ್ರ ಬದಲಾವಣೆ ತರಲು ಎನ್‌ಇಪಿ ಜಾರಿಗೆ ತಂದಿದ್ದಾರೆ. ಕರ್ನಾಟಕ ಎನ್‌ಇಪಿ ಜಾರಿಗೆ ತಂದಿರುವ ಮೊದಲ ರಾಜ್ಯವಾಗಿದೆ. ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ಹೇಳಿದರು.

ತಾಳ್ಮೆಯಿಂದ ಇರಿ, ಗ್ಯಾರಂಟಿ ಭರವಸೆ ಈಡೇರಿಸುತ್ತೇವೆ: ಲಕ್ಷ್ಮೀ ಹೆಬ್ಬಾಳ್ಕರ್

ಕಳೆದ 70 ವರ್ಷದಲ್ಲಿ ನಾಲ್ಕೂವರೆ ಸಾವಿರ ಕಿ.ಮೀ. ರಸ್ತೆ ನಿರ್ಮಾಣ ಮಾಡಲಾಗಿತ್ತು. ಕಳೆದ ಒಂಬತ್ತು ವರ್ಷದಲ್ಲಿ 5 ಸಾವಿರ ಕಿ.ಮೀ ರಸ್ತೆ ನಿರ್ಮಾಣ ಮಾಡಲಾಗಿದೆ. ಬೆಂಗಳೂರು ಸಬ… ಅರ್ಬನ್‌ ರೈಲು ಯೋಜನೆಗೆ ವಿಶೇಷ ಅನುದಾನ ನೀಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5 ಸಾವಿರ ಕೋಟಿ ನೀಡಿದ್ದಾರೆ. ಮೆಟ್ರೋ ಯೋಜನೆಗೆ ಐದು ಸಾವಿರ ಕೋಟಿ ನೀಡಿದ್ದಾರೆ. ನಾಲ್ಕು ಮೆಡಿಕಲ… ಕಾಲೇಜು, ಐಐಟಿ, ಕರಾವಳಿ ಅಭಿವೃದ್ಧಿಗೆ 1250 ಕೋಟಿ ರು. ನೀಡಿದ್ದಾರೆ. ಕರಾವಳಿಯಲ್ಲಿ ಸಿಆರ್‌ಝಡ್‌ಗೆ ಅನುಮತಿ ನೀಡಿದ್ದಾರೆ. ಕಲಬುರ್ಗಿಯಲ್ಲಿ ಒಂದು ಲಕ್ಷ ಉದ್ಯೋಗ ನೀಡುವ ಜವಳಿ ಪಾರ್ಕ್ಗೆ ಅನುಮತಿ ನೀಡಿದ್ದಾರೆ ಎಂದು ವಿವರಿಸಿದರು.