ರೇಬಿಸ್‌ ಕಾಯಿಲೆಯಿಂದ ಬಳಲುತ್ತಿದ್ದ ಯುವಕನೊಬ್ಬ ಪ್ರಿಯತಮೆಗೆ ವಿಡಿಯೋ ಮಾಡಿ, ತನ್ನ ಅಂತ್ಯಕ್ರಿಯೆಗೆ ಆಹ್ವಾನಿಸಿ, ಲೈವ್‌ನಲ್ಲೇ ಪ್ರಾಣ ಬಿಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದಾಬಸ್‌ಪೇಟೆ (ಆ.15): ರೇಬಿಸ್‌ ಕಾಯಿಲೆಯಿಂದ ಬಳಲುತ್ತಿದ್ದ ಯುವಕನೊಬ್ಬ ಪ್ರಿಯತಮೆಗೆ ವಿಡಿಯೋ ಮಾಡಿ, ತನ್ನ ಅಂತ್ಯಕ್ರಿಯೆಗೆ ಆಹ್ವಾನಿಸಿ, ಲೈವ್‌ನಲ್ಲೇ ಪ್ರಾಣ ಬಿಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸೋಂಪುರ ಹೋಬಳಿಯ ದಾಸೇನಹಳ್ಳಿ ಗ್ರಾಮದ ಕಿರಣ್‌ (22) ಮೃತ ಯುವಕ. ಈತನಿಗೆ ಎರಡು ತಿಂಗಳ ಹಿಂದೆ ನಾಯಿ ಕಚ್ಚಿದ್ದು ಅದಕ್ಕೆ ಚಿಕಿತ್ಸೆ ಪಡೆದಿರಲಿಲ್ಲ. 

ಕೊನೆಗೆ ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರು ಎಳೆದಿದ್ದಾನೆ. ಈತನ್ಮಧ್ಯೆ ಸಾವು ಸಮೀಪಿಸುತ್ತಿದೆ ಎನಿಸಿ ಪ್ರಿಯತಮೆಗಾಗಿ ವಿಡಿಯೋ ಮಾಡಿದ್ದಾನೆ. ‘ನಿಮ್ಮನ್ನೆಲ್ಲ ಬಿಟ್ಟು ಹೋಗುತ್ತಿದ್ದೇನೆ ಕಣೆ, ನಿಮ್ಮ ಅಪ್ಪ ಹೇಳಿದ ಹಾಗೆ ಒಳ್ಳೆಯ ಹುಡುಗನನ್ನು ನೋಡಿ ಮದುವೆ ಆಗು. ನಿನಗೆ ಹುಟ್ಟಿದ ಮಗುವಿಗೆ ನನ್ನ ಹೆಸರೇ ಇಡಬೇಕು, ಇದು ನನ್ನ ಆಕಸ್ಮಿಕ ಸಾವು. ದಯವಿಟ್ಟು ಅಂತ್ಯಕ್ರಿಯೆಗೆ ಬಂದು ಹೋಗಬೇಕು, ಒಳ್ಳೆಯದಾಗಲಿ ನಿಮ್ಮ ಕುಟುಂಬಕ್ಕೆ. ಹೀಗೆ ಚೆನ್ನಾಗಿರಿ’ ಎಂದು ಲೈವ್‌ನಲ್ಲೇ ಕೈ ಮುಗಿದು ಪ್ರಾಣಬಿಟ್ಟಿದ್ದಾನೆ.

ರೈಲು ನಿಲ್ದಾಣದಲ್ಲಿ ಸೇಫ್ ಡಿಜಿಟಲ್ ಲಾಕರ್: ಇದು ಉತ್ತರ ಕರ್ನಾಟಕದಲ್ಲಿಯೇ ಮೊದಲ ಪ್ರಯೋಗ!

ಆಸ್ತಿ ಹಣಕ್ಕಾಗಿ ಮನಸ್ತಾಪ: ಆಸ್ತಿ ಮಾರಾಟದಿಂದ ಬಂದ ಹಣದ ವಿಚಾರವಾಗಿ ನಡೆದ ಮನಸ್ತಾಪ ಇಬ್ಬರ ಕೊಲೆಯಲ್ಲಿ ಅಂತ್ಯವಾದ ಘಟನೆ ಬಾಳೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಮಧುಗುಂಡಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಮಧುಗುಂಡಿ ಗ್ರಾಮದ ಸಂತೋಷ್‌ ಎಂಬಾತ ಆಸ್ತಿ ಮಾರಾಟ ಮಾಡಿದ ಹಣದ ವಿಚಾರದಲ್ಲಿ ಮಾತುಕತೆಗೆ ಬಂದಿದ್ದ ಅದೇ ಗ್ರಾಮದ ಕಾರ್ತಿಕ್‌ (45) ನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು, ಬಿಡಿಸಲು ಮಧ್ಯೆ ಪ್ರವೇಶಿಸಿದ ತನ್ನ ತಂದೆ, ತಾಯಿಯ ಮೇಲೆಯೂ ಸಂತೋಷ್‌ ಮಚ್ಚು ಬೀಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ತಂದೆ ಬಾಸ್ಕರಗೌಡ (70) ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತಾಯಿ ಪ್ರೇಮ (52) ಅವರ ಸ್ಥಿತಿಯೂ ಗಂಭೀರವಾಗಿದೆ. ಕೃತ್ಯದ ಬಳಿಕ ಆರೋಪಿ ಸಂತೋಷ್‌ ಬಾಳೂರು ಪೊಲೀಸ್‌ ಠಾಣೆಗೆ ತಾನಾಗಿಯೇ ಬಂದು ಶರಣಾಗಿದ್ದಾನೆ.

ಈ ಬಾರಿಯೂ ಅದ್ಧೂರಿ ದಸರಾ ಉತ್ಸವ ಆಚರಣೆ: ಸಚಿವ ಮಹದೇವಪ್ಪ

ಘಟನೆಯ ವಿವರ: ಮೃತ ಕಾರ್ತಿಕ್‌ ಅವರು, ಭಾಸ್ಕರ್‌ ಗೌಡ ರವರ ಜಮೀನನ್ನು ಬೆಂಗಳೂರು ಮೂಲದ ಉದ್ಯಮಿಗೆ ಮಾರಾಟ ಮಾಡಲು ಮಧ್ಯವರ್ತಿಯಾಗಿದ್ದರು ಎನ್ನಲಾಗಿದೆ. ಜಮೀನು ವ್ಯಾಪಾರದ ಮುಂಗಡವಾಗಿ ಭಾಸ್ಕರಗೌಡರ ಕುಟುಂಬಕ್ಕೆ 12 ಲಕ್ಷ ಹಣ ಕೊಡಿಸಿದ್ದು, ಆ ಹಣವನ್ನು ಭಾಸ್ಕರ್‌ ಗೌಡ ರವರ ಮೊದಲ ಮಗ ಶಿವು ಕುಮಾರ್‌ ರವರು ತೆಗೆದುಕೊಂಡು ಹೋಗಿದ್ದು, ಈ ವಿಚಾರದಲ್ಲಿ ಮನಸ್ತಾಪ ಗೊಂಡಿದ್ದ ಎರಡನೇ ಮಗ ಸಂತೋಷ್‌, ಕಾರ್ತಿಕ್‌ನನ್ನು ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಭಾನುವಾರ ರಾತ್ರಿ ತನ್ನ ಮನೆಗೆ ಬಂದಿದ್ದ ಕಾರ್ತಿಕ್‌ ಅವರೊಂದಿಗೆ ಹಣಕಾಸಿನ ವಿಚಾರವಾಗಿ ಮಾತಿಗೆ ಮಾತು ಬೆಳೆಸಿದ ಸಂತೋಷ್‌ ಏಕಾಏಕಿ ಮನೆಯೊಳಗಿನಿಂದ ಮಚ್ಚು ತಂದು ಕಾರ್ತಿಕ್‌ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಕಾರ್ತಿಕ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರ್ತಿಕ್‌ ಮಧುಗುಂಡಿ ಗ್ರಾಮದ ಉಪೇಂದ್ರಗೌಡ ಎಂಬುವವರ ಪುತ್ರ.