Asianet Suvarna News Asianet Suvarna News

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕೇಸ್; 4 ಬಾರಿ ಸಮನ್ಸ್ ನೀಡಿದ್ರೂ ಹಾಜರಾಗದ ಶ್ರೀರಾಮುಗೆ ಕೋರ್ಟ್ ತರಾಟೆ!

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ನಾಲ್ಕು ಬಾರಿ ಸಮನ್ಸ್‌ ನೀಡಿದ್ದರೂ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರಾಗದ ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್‌, ಮುಂದಿನ ವಿಚಾರಣೆಗೆ ಹಾಜರಾಗದಿದ್ದರೆ ಬಂಧನದ ಆದೇಶದ ಹೊರಡಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

Magistrate Court Warn to Ex-Minister Sriramulu at Bengaluru rav
Author
First Published Feb 24, 2024, 6:58 AM IST

ಬೆಂಗಳೂರು (ಫೆ.24) : ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ನಾಲ್ಕು ಬಾರಿ ಸಮನ್ಸ್‌ ನೀಡಿದ್ದರೂ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರಾಗದ ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್‌, ಮುಂದಿನ ವಿಚಾರಣೆಗೆ ಹಾಜರಾಗದಿದ್ದರೆ ಬಂಧನದ ಆದೇಶದ ಹೊರಡಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಖಾಸಗಿ ದೂರು ಮತ್ತು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಿಚಾರಣೆ ರದ್ದುಪಡಿಸಲು ಕೋರಿ ಬಿ. ಶ್ರೀರಾಮುಲು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠ ಈ ಎಚ್ಚರಿಕೆ ನೀಡಿದೆ.

ವಿಚಾರಣೆ ವೇಳೆ ನ್ಯಾಯಮೂರ್ತಿಗಳು ಶ್ರೀರಾಮುಲು(Sriramulu) ಅವರು ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ ಹಾಜರಾಗದಿರುವ ಬಗ್ಗೆ ಹಾಗೂ ಈವರೆಗೆ ನಾಲ್ಕು ಸಮನ್ಸ್‌ ಕಳಿಸಲಾಗಿದೆ ಎಂಬ ಮಾಹಿತಿಯನ್ನು ಶ್ರೀರಾಮುಲು ಪರ ವಕೀಲ ಗೌತಮ್‌ ಹಾಗೂ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್.ಜಗದೀಶ್ ಅವರಿಂದ ಪಡೆದುಕೊಂಡರು.

ಈ ಮಾಹಿತಿ ಕೇಳಿ ತೀವ್ರ ಆಕ್ರೋಶಗೊಂಡ ನ್ಯಾಯಮೂರ್ತಿಗಳು, ಮ್ಯಾಜಿಸ್ಟ್ರೇಟ್ ಕೋರ್ಟ್ ಎಂದರೆ‌ ನಿಮಗೆ ಅಷ್ಟೊಂದು ಸದರವೆ? ಮ್ಯಾಜಿಸ್ಟ್ರೇಟ್ ಮುಂದೆ ನಿಂತುಕೊಳ್ಳಲು ನಿಮ್ಮ ಅರ್ಜಿದಾರರಿಗೆ ಯಾವ ಅಂತಸ್ತು ಅಡ್ಡಿಯಾಗಿದೆ? ಮ್ಯಾಜಿಸ್ಟ್ರೇಟ್ ಕೋರ್ಟ್ ಎಂದರೆ ಏನೆಂದುಕೊಂಡಿದ್ದೀರಿ? ವಿಚಾರಣಾ ಕೋರ್ಟ್ ನಾಲ್ಕು ಬಾರಿ ಸಮನ್ಸ್ ಹೊರಡಿಸಿದ್ದರೂ ಏಕೆ ಹಾಜರಾಗಿಲ್ಲ ಎಂದು ಶ್ರೀರಾಮುಲು ಪರ ವಕೀಲರನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು.

ಸಚಿವ ಹಾಗೂ ಮಾಜಿ ಸಚಿವ ಅಥವಾ ಯಾರೇ ಜನಪ್ರತಿನಿಧಿ ಆಗಿರಲಿ, ನ್ಯಾಯಾಲಯ ಎಂದರೆ ಹುಷಾರಾಗಿರಬೇಕು. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ರೂಪುಗೊಂಡಿರುವ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ರಚನೆಯಾಗಿರುವ ವಿಶೇಷ ನ್ಯಾಯಪೀಠ ಇದಾಗಿದೆ ಎಂಬುದನ್ನು ಮರೆಯಬೇಡಿ. ನಿಮ್ಮ ವರ್ತನೆಗೆ ಈ ವಿಶೇಷ ನ್ಯಾಯಪೀಠ ಸೂಕ್ತ ಮತ್ತು ಕಠಿಣ ಕಾನೂನು ಕ್ರಮ‌ ಕೈಗೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿತು.

ಅಂತಿಮವಾಗಿ, ಮ್ಯಾಜಿಸ್ಟ್ರೇಟ್ ಕೋರ್ಟ್‌ನ ಮುಂದಿನ ವಿಚಾರಣೆಗೆ ಅರ್ಜಿದಾರ ಶ್ರೀರಾಮುಲು ಖುದ್ದು ಹಾಜರಾಗಬೇಕು. ತಪ್ಪಿದರೆ ಅವರ ವಿರುದ್ಧ ಬಂಧನ ಆದೇಶ ಹೊರಡಿಸಲಾಗುವುದು ಎಂದು ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.

ಪ್ರಕರಣದ ಹಿನ್ನೆಲೆ:

ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೇ 2023ರ ಏ.28ರಂದು ಸಂಜೆ 4.15ರ ಸಮಯದಲ್ಲಿ ಚಿತ್ರದುರ್ಗದ ಚಳ್ಳಕೆರೆ ವಿಧಾನಭಾ ಕ್ಷೇತ್ರದ ತುರವನೂರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಆರ್‌.ಅನಿಲ್‌ ಕುಮಾರ್‌ ಪರ ಬಿ.ಶ್ರೀರಾಮುಲು ಚುನಾವಣಾ ಪ್ರಚಾರದ ರ್‍ಯಾಲಿ ನಡೆಸಿದ್ದರು. ಇದರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ಫ್ಲೈಯಿಂಗ್‌ ಸ್ಕ್ವಾಡ್‌ ತಂಡದ ಅಧಿಕಾರಿಯಾಗಿದ್ದ ಎಂ. ತಿಪ್ಪೇಸ್ವಾಮಿ ಚಿತ್ರದುರ್ಗದ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ 2023ರ ಏ.29ರಂದು ಖಾಸಗಿದ ದೂರು ಸಲ್ಲಿಸಿದ್ದರು. ಪ್ರಕರಣ ಕುರಿತು ಮೇ 4ರಂದು ಬಿ.ಶ್ರೀರಾಮುಲು ವಿರುದ್ಧ ಕಾಗ್ನಿಜೆನ್ಸ್‌ ತೆಗೆದುಕೊಂಡಿದ್ದ ಮ್ಯಾಜಿಸ್ಟ್ರೇಟ್‌ ಕೋರ್ಟ್‌, 2023ರ ಮೇ 5ರಂದು ಸಮನ್ಸ್‌ ಜಾರಿಗೊಳಿಸಿತ್ತು. ಇದರಿಂದ ಶ್ರೀರಾಮುಲು ಹೈಕೋರ್ಟ್‌ ಮೊರೆ

Follow Us:
Download App:
  • android
  • ios