Asianet Suvarna News Asianet Suvarna News

ಕೆಕೆಆರ್‌ಟಿಸಿ ಬಸ್ ಗೆ ಬೆಂಕಿ; ಮಹಾರಾಷ್ಟ್ರಕ್ಕೆ ಸಂಚಾರ ತಾತ್ಕಲಿಕ ಸ್ಥಗಿತ

ಮಹಾರಾಷ್ಟ್ರದಲ್ಲಿ ಮೀಸಲಾತಿ ಸಂಬಂಧ ಹೋರಾಟ ನಡೆಯುತ್ತಿದ್ದು, ಸೋಮವಾರ ಕಾರ್ಯಚರಣೆಯಲ್ಲಿದ್ದ  ಕರ್ನಾಟಕಕ್ಕೆ ಸೇರಿದ ಕೆಕೆಆರ್‌ಟಿಸಿ ಬಸ್ಸಿಗೆ ಬೆಂಕಿ ಹಚ್ಚಿದ ಪರಿಣಾಮ ಅಂತರ ರಾಜ್ಯ ಬಸ್ ಕಾರ್ಯಾಚರಣೆಯನ್ನು ತಾತ್ಮಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆ.ಕೆ.ಆರ್.ಟಿ.ಸಿ(KKRTC) ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ತಿಳಿಸಿದ್ದಾರೆ

Maharashtra reservation struggle turned violent KKRTC bus temporarily stopped at kalaburagi rav
Author
First Published Oct 31, 2023, 12:36 PM IST

ಕಲಬುರಗಿ (ಅ.31): ಮಹಾರಾಷ್ಟ್ರದಲ್ಲಿ ಮೀಸಲಾತಿ ಸಂಬಂಧ ಹೋರಾಟ ನಡೆಯುತ್ತಿದ್ದು, ಸೋಮವಾರ ಕಾರ್ಯಚರಣೆಯಲ್ಲಿದ್ದ  ಕರ್ನಾಟಕಕ್ಕೆ ಸೇರಿದ ಕೆಕೆಆರ್‌ಟಿಸಿ ಬಸ್ಸಿಗೆ ಬೆಂಕಿ ಹಚ್ಚಿದ ಪರಿಣಾಮ ಅಂತರ ರಾಜ್ಯ ಬಸ್ ಕಾರ್ಯಾಚರಣೆಯನ್ನು ತಾತ್ಮಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆ.ಕೆ.ಆರ್.ಟಿ.ಸಿ(KKRTC) ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ತಿಳಿಸಿದ್ದಾರೆ

ಸೋಮವಾರ ಬೀದರ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಬಸ್ ಸಂಖ್ಯೆ ಕೆ.ಎ-38 ಎಫ್-1201 ಬಸ್ ಮಹಾರಾಷ್ಟ್ರದ ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ಪ್ರತಿಭಟನಾಕಾರರು ಬಸ್ ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸಿಗೆ ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ತುಳಜಾಪುರ ಯಾತ್ರೆ ಸೇರಿದಂತೆ ಮಹಾರಾಷ್ಟ್ರಕ್ಕೆ ಅಂತರಾಜ್ಯ ಕಾರ್ಯಾಚರಣೆಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಮೀಸಲು ಹೋರಾಟ; ಕರ್ನಾಟಕದ ಬಸ್‌ಗೆ ಬೆಂಕಿ!

ಸ್ಥಳೀಯ ಪೊಲೀಸರ ನೆರವಿನಿಂದ  ಬಸ್ ನಲ್ಲಿದ್ದ 39 ಪ್ರಯಾಣಿಕರನ್ನು ಸುರಕ್ಷಿತವಾಗಿ ಅವರ ತಲುಪುವ ಸ್ಥಳಕ್ಕೆ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಮಹಾರಾಷ್ಟ್ರದಲ್ಲಿ ಕಾರ್ಯಚರಣೆಯಲ್ಲಿರುವ ಬಸ್ ಗಳನ್ನು ಹತ್ತಿರ ಪೊಲೀಸ್ ಠಾಣೆ, ಬಸ್ ಡೀಪೋ ಗಳಲ್ಲಿ ಪಾರ್ಕ್ ಮಾಡಲು ಸಂಸ್ಥೆ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow Us:
Download App:
  • android
  • ios