ಪ್ರತಿಪಕ್ಷಗಳು, ರೈತರ ಆಗ್ರಹಕ್ಕೆ ಮಣಿದ ರಾಜ್ಯ ಸರ್ಕಾರ, ಪ್ರತಿ ರೈತರಿಂದ ಬೆಂಬಲ ಬೆಲೆಯಲ್ಲಿ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿ 20 ಕ್ವಿಂಟಲ್‌ನಿಂದ 50 ಕ್ವಿಂಟಲ್‌ಗೆ ಹೆಚ್ಚಿಸಿ ಆದೇಶ ಹೊರಡಿಸಿದೆ.

ಬೆಂಗಳೂರು : ಪ್ರತಿಪಕ್ಷಗಳು, ರೈತರ ಆಗ್ರಹಕ್ಕೆ ಮಣಿದ ರಾಜ್ಯ ಸರ್ಕಾರ, ಪ್ರತಿ ರೈತರಿಂದ ಬೆಂಬಲ ಬೆಲೆಯಲ್ಲಿ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿ 20 ಕ್ವಿಂಟಲ್‌ನಿಂದ 50 ಕ್ವಿಂಟಲ್‌ಗೆ ಹೆಚ್ಚಿಸಿ ಆದೇಶ ಹೊರಡಿಸಿದೆ.

ಪ್ರತಿ ಎಕರೆಗೆ 12 ಕ್ವಿಂಟಲ್ ಲೆಕ್ಕ

ಪ್ರತಿ ಎಕರೆಗೆ 12 ಕ್ವಿಂಟಲ್ ಲೆಕ್ಕದಲ್ಲಿ ಗರಿಷ್ಠ 20 ಕ್ವಿಂಟಲ್ ಮೆಕ್ಕೆಜೋಳ ಮಾತ್ರ ಪ್ರತಿ ಕ್ವಿಂಟಲ್‌ಗೆ 24 ಸಾವಿರ ರುಪಾಯಿಯಂತೆ ಖರೀದಿಸಲು ಈ ಹಿಂದೆ ಆದೇಶ ಹೊರಡಿಸಲಾಗಿತ್ತು. ಖರೀದಿ ಪ್ರಮಾಣ ಹೆಚ್ಚಿಸಬೇಕು ಎಂದು ರೈತರು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ಆಗ್ರಹಿಸಿದ್ದವು. ಇದೀಗ ಈ ಮಿತಿಯನ್ನು 50 ಕ್ವಿಂಟಲ್‌ಗೆ ಏರಿಕೆ ಮಾಡಲಾಗಿದೆ.

ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಖರೀದಿ

ಫ್ರೂಟ್ಸ್‌ ತಂತ್ರಾಂಶದಲ್ಲಿ ನೋಂದಾಯಿತ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪ್ರತಿ ಎಕರೆಗೆ 12 ಕ್ವಿಂಟಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 50 ಕ್ವಿಂಟಲ್‌ ಮೆಕ್ಕೆಜೋಳವನ್ನು ಡಿಸ್ಟಿಲರಿಗಳ ಸಮೀಪದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಖರೀದಿಗೆ ಆದ್ಯತೆ ನೀಡಲಾಗುವುದು ಎಂದು ತಿದ್ದುಪಡಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಇತ್ತೀಚೆಗೆ ಮೆಕ್ಕೆಜೋಳಕ್ಕೆ ಮಾರುಕಟ್ಟೆ ಸಿಗದೇ ರೈತರು ಕಂಗಾಲು

ಹೀಗಾಗಿ ಉತ್ತರ ಕರ್ನಾಟಕದ ಅನೇಕ ಕಡೆ ಪ್ರತಿಭಟನೆ ನಡೆಸಿದ್ದರು

ಈ ಮುನ್ನ ತಲಾ ರೈತರಿಂದ 20 ಕ್ವಿಂಟಲ್ ಮೆಕ್ಕೆಜೋಳ ಖರೀದಿ

ಖರೀದಿ ಪ್ರಮಾಣ ಹೆಚ್ಚಿಸಬೇಕು ಎಂದು ರೈತರು, ವಿಪಕ್ಷ ಕೇಳಿದ್ದವು

ಇದಕ್ಕೆ ಮಣಿದ ಸರ್ಕಾರ, ಈಗ 50 ಕ್ವಿಂಟಲ್‌ ಖರೀದಿಗೆ ನಿರ್ಧಾರ