Ramanagara battery warehouse fire: ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಿಎನ್‌ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ ಬ್ಯಾಟರಿ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು ಬೆಂಕಿಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಕರಕಲಾಗಿವೆ.
ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಬೆಂಕಿ ಅನಾಹುತ
ರಾಮನಗರ: ರಾಮನಗರ ತಾಲೂಕಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಬೆಂಕಿ ಅನಾಹುತ ಸಂಭವಿಸಿದೆ. ಇಲ್ಲಿನ ಬ್ಯಾಟರಿ ಗೋದಾಮಿಗೆ ಬೆಂಕಿ ಬಿದ್ದ ಪರಿಣಾಮ ಧಗಧಗನೇ ಹೊತ್ತಿ ಉರಿಯುತ್ತಿದ್ದು, ದಟ್ಟ ಹೊಗೆ ಆಕಾಶದೆತ್ತರಕ್ಕೆ ವ್ಯಾಪಿಸಿದೆ. ಬ್ಯಾಟರಿ, ಲೈಟರ್ , ಎಲೆಕ್ಟ್ರಾನಿಕ್ ಐಟಮ್ ಶೇಖರಿಸಿದ್ದ ಗೋದಾಮಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂ ಮೌಲ್ಯದ ಎಲೆಕ್ಟ್ರಾನಿಕ್ ಐಟಮ್ ಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಘಟನೆ ನಡೆದು 1 ಗಂಟೆ ಕಳೆದರೂ ಯಾವುದೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದಿಲ್ಲ ಎಂದು ವರದಿಯಾಗಿದೆ.
ಈ ಬೆಂಕಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಘಟನೆಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕ್ ವಸ್ತುಗಳು ನಾಶವಾಗಿವೆ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಈ ಘಟನೆ ನಡೆದಿದೆ. ಜಿಎನ್‌ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ ಬ್ಯಾಟರಿ ಗೋದಾಮು ಇದಾಗಿದೆ.
ಇದನ್ನೂ ಓದಿ: ಮದುವೆ ಪತ್ರಿಕೆ ಹಂಚಲು ಹೋದಾಗ ಟ್ರ್ಯಾಕ್ಟರ್ ಡಿಕ್ಕಿಯಾಗಿ ವರ ಸಾವು: ಮದುವೆ ನಡೆಯಬೇಕಾದ ಮನೆಯಲ್ಲಿ ಸೂತಕದ ಛಾಯೆ


