Asianet Suvarna News Asianet Suvarna News

ಕೋಟಿ ಕೋಟಿ ಒಡೆಯನಾದರೂ ಮೀಸಲಾತಿಯಡಿ ಸಿಎ ನಿವೇಶನ ಪಡೆದ ಖರ್ಗೆ ಪುತ್ರ!

ಕೋಟಿ ಕೋಟಿ ಒಡೆಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರಿಗೆ ಕೆಐಎಡಿಬಿ ಮೀಸಲಾತಿ ಅಡಿಯಲ್ಲಿ ಸಿಎ ನಿವೇಶನ ನೀಡಲಾಗಿದೆ. 

Mallikarjun Kharge son got CA site under SC reservation sat
Author
First Published Aug 26, 2024, 3:51 PM IST | Last Updated Aug 26, 2024, 3:51 PM IST

ಬೆಂಗಳೂರು (ಆ.26): ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರಿಗೆ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ನಿಯಮಾನುಸಾದ ಪರಿಶಿಷ್ಟ ಜಾತಿಗೆ ನೀಡಲಾಗುವ ಮೀಸಲಾತಿ ಅಡಿಯಲ್ಲಿ ಬೆಲೆಗೆ ಸಿಎ ನಿವೇಶನವನ್ನು ನೀಡಲಾಗಿದೆ. ರಾಜ್ಯದಲ್ಲಿ ಲಕ್ಷಾಂತರ ಬಡಜನರು, ಮಧ್ಯಮವರ್ಗದವರು ಮೀಸಲಾತಿ ಅಡಿಯಲ್ಲಿ ಸೌಲಭ್ಯಗಳನ್ನು ಪಡೆಯಲಾಗದೇ ಒದ್ದಾಡುತ್ತಿರುವಾಗ, ಕೋಟಿ ಕೋಟಿ ಹಣದ ಒಡೆಯನಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರನಿಗೆ ಸರ್ಕಾರದಿಂದ ಮೀಸಲಾತಿಯ ನಿವೇಶನ ಹಂಚಿಕೆ ಮಾಡಿರುವುದಕ್ಕೆ ವಿಪಕ್ಷ ನಾಯಕರಿಂದ ಆಕ್ರೋಶ ವ್ಯಕ್ತವಾಗಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರಕಟಣೆ ಮೂಲಕ ಸ್ಪಷ್ಟೀಕರಣ ನೀಡಿರುವ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಪುತ್ರ ರಾಹುಲ್ ಖರ್ಗೆ ಅವರ ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ ಗೆ ಏರೋಸ್ಪೇಸ್ ಪಾರ್ಕ್ ನಲ್ಲಿ ಸಿ.ಎ. ನಿವೇಶನವನ್ನು ಕಾನೂನಿನ ಪ್ರಕಾರವೇ ನಿಗದಿತ ಬೆಲೆಗೆ ಕೊಡಲಾಗಿದೆ. ಅವರು ಅಲ್ಲಿ ಸಂಶೋಧನೆ ಮತ್ತು ತರಬೇತಿ ಕೇಂದ್ರ ಸ್ಥಾಪಿಸುವುದಾಗಿ ಹೇಳಿದ್ದಾರೆ. ಇದರಲ್ಲಿ ಬಿಜೆಪಿ ನಾಯಕ ಲೆಹರ್ ಸಿಂಗ್ ಆರೋಪಿಸಿರುವಂತೆ ಯಾವ ನಿಯಮವೂ ಉಲ್ಲಂಘನೆ ಆಗಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ದರ್ಶನ್ ಇರೋ ಸೆಂಟ್ರಲ್ ಜೈಲಿನಲ್ಲಿ ಪಂಚತಾರ ಹೋಟೆಲ್ ವ್ಯವಸ್ಥೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಖರ್ಗೆ ಅವರು ಐಐಟಿ ಪದವೀಧರರಾಗಿದ್ದಾರೆ. ಅವರ ಕುಟುಂಬವು ನಾನಾ ಬಗೆಯ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ. ಕೆಐಎಡಿಬಿ ನಿಯಮಗಳ ಪ್ರಕಾರ ಸಿ.ಎ ನಿವೇಶನಗಳಲ್ಲಿ ಆರ್ & ಡಿ ಕೇಂದ್ರಗಳು, ಉತ್ಕೃಷ್ಟತಾ ಕೇಂದ್ರಗಳು, ತಾಂತ್ರಿಕ ಸಂಸ್ಥೆಗಳು, ಕೌಶಲ್ಯಾಭಿವೃದ್ಧಿ, ಸರಕಾರಿ ಕಚೇರಿಗಳು, ಬ್ಯಾಂಕು, ಆಸ್ಪತ್ರೆ, ಹೋಟೆಲ್, ಪೆಟ್ರೋಲ್ ಬಂಕ್, ಕ್ಯಾಂಟೀನ್, ವಸತಿ ಸೌಲಭ್ಯ ಇತ್ಯಾದಿಗಳ ಅಭಿವೃದ್ಧಿಗೆ ಅವಕಾಶವಿದೆ. ಆಸಕ್ತರು ಯಾರು ಬೇಕಾದರೂ ಇದಕ್ಕೆ ಪ್ರಯತ್ನಿಸಬಹುದು. 

ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯ ಶಿಫಾರಸಿನ ನಂತರವಷ್ಟೇ ಇವುಗಳ ಹಂಚಿಕೆಯಾಗುತ್ತದೆ. ಏರೋಸ್ಪೇಸ್ ಪಾರ್ಕಿನಲ್ಲಿ ರಾಹುಲ್ ಅವರಿಗೆ ಕೈಗಾರಿಕಾ ನಿವೇಶನವನ್ನೇನೂ ಕೊಟ್ಟಿಲ್ಲ. ಬದಲಿಗೆ, ಸಿ.ಎ.ನಿವೇಶನವನ್ನು ಆರ್ ಆ್ಯಂಡ್ ಡಿ ಕೇಂದ್ರ ಸ್ಥಾಪನೆಗಾಗಿ ನಿಗದಿತ ಬೆಲೆಗೇ ಕೊಡಲಾಗಿದೆ. ಇದರಲ್ಲಿ ಅವರಿಗೆ ಯಾವ ರಿಯಾಯಿತಿಯನ್ನೂ ನೀಡಿಲ್ಲ. ಈ ಹಿಂದೆ ಬಿಜೆಪಿ ಸರಕಾರದಲ್ಲಿ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೈಗಾರಿಕಾ ಪ್ರದೇಶದಲ್ಲೇ 116 ಎಕರೆಯನ್ನು ಬರೀ 50 ಕೋಟಿ ರೂ.ಗೆ ಕೊಡಲಾಗಿದೆ. ಅದರಿಂದ 137 ಕೋಟಿ ರೂ. ಬೊಕ್ಕಸಕ್ಕೆ ನಷ್ಟವಾಗಿದೆ. ಲೆಹರ್ ಸಿಂಗ್ ಅವರು ಈ ಬಗ್ಗೆಯೂ ಚಕಾರ ಎತ್ತಬಹುದಲ್ಲವೇ ಎಂದು ಪ್ರಶ್ನಿಸಿದರು.

ನಟ ದರ್ಶನ್‌ನ ಐಷಾರಾಮಿ ಜೀವನ ದರ್ಶನಕ್ಕೆ ಜೈಲಿಗೆ ಹೊರಟ ಗೃಹ ಸಚಿವ ಡಾ.ಜಿ. ಪರಮೇಶ್ವರ!

ಹಿಂದೆಲ್ಲ ಕೆಐಎಡಿಬಿ ಮಂಡಳಿಯೇ ಸಿ.ಎ. ನಿವೇಶನಗಳನ್ನು ಹಂಚುತ್ತಿತ್ತು. ಆದರೆ, ನಾನು ಸಚಿವನಾದ ಮೇಲೆ ರಾಜ್ಯಮಟ್ಟದ ಏಕ ಗವಾಕ್ಷಿ ಸಮಿತಿ ಅನುಮೋದನೆ ನೀಡುವ ಹಾಗೆ ಪಾರದರ್ಶಕ ವ್ಯವಸ್ಥೆ ಜಾರಿ‌ ಮಾಡಲಾಗಿದೆ. ಅಲ್ಲದೆ, ಮೊದಲ ಬಾರಿಗೆ ಸಿ.ಎ ನಿವೇಶನಗಳ ಹಂಚಿಕೆಯಲ್ಲೂ ಪರಿಶಿಷ್ಟರಿಗೆ ಶೇ 24.10ರಷ್ಟು ಮೀಸಲಾತಿ‌ ಕಲ್ಪಿಸಲಾಗಿದೆ. ಲೆಹರ್ ಸಿಂಗ್ ಈ ಸತ್ಯವನ್ನು ಅರಿತು ಮಾತನಾಡುವುದು ಒಳ್ಳೆಯದು ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

Latest Videos
Follow Us:
Download App:
  • android
  • ios