ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್ (58) ಅವರು, ಪೊಲೀಸ್ ಸಿಬ್ಬಂದಿಯ ಬೀಳ್ಕೊಡುಗೆ ಸಮಾರಂಭದಲ್ಲಿ ಹಾಡುತ್ತಿದ್ದಾಗ ಹೃದಯಾಘಾತದಿಂದ ಕುಸಿದುಬಿದ್ದು ನಿಧನರಾಗಿದ್ದಾರೆ. ವೇದಿಕೆಯಲ್ಲೇ ಎದೆನೋವು ಕಾಣಿಸಿಕೊಂಡು ಕುಸಿದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖ, ಚಿಕಿತ್ಸೆ ಫಲಕಾರಿಯಾಗದೆ ಮೃತ.
ಉಡುಪಿ ನವೆಮಬರ್ 3): ಇಲ್ಲಿನ ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್ (58) ಕಾರ್ಯಕ್ರಮವೊಂದರಲ್ಲಿ ಹಾಡುತಿದ್ದಾಗಲೇ ಕುಸಿದುಬಿದ್ದು ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.
ಹಾಡುವಾಗಲೇ ಎದೆನೋವು:
ರಾತ್ರಿ ಮಲ್ಪೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದು, ವೇದಿಕೆಯಲ್ಲಿ ಹಾಡುತಿದ್ದಾಗ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಬಳಿಕ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅದಾಗಲೇ ಹೃದಯಾಘಾತದಿಂದ ವಿಶ್ವನಾಥ್ ಮೃತಪಟ್ಟಿದ್ದರೆಂದು ವೈದ್ಯರು ತಿಳಿಸಿದ್ದಾರೆ.
ಮಲ್ಪೆ ಪೊಲೀಸ್ ಠಾಣೆಗ ಇತ್ತೀಚೆಗೆ ವರ್ಗಾವನೆ
ವಿಶ್ವನಾಥ್ ಇತ್ತೀಚೆಗಷ್ಟೇ ಮಲ್ಪೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ವಿಶ್ವನಾಥ್ ಅವರು ಜನಸಾಮಾನ್ಯರಿಗೆ ಹತ್ತಿರವಾಗಿದ್ದರು.
