ಮಂಡ್ಯ ಬಾಲಕಿ ರೇಪ್ ಕೇಸ್: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ‘ನಿರ್ಭಯಾ’ ಕಾಯ್ದೆಯನುಸಾರ ಪ್ರಕರಣ ದಾಖಲಿಸಬೇಕು ಮತ್ತು ಆದಷ್ಟು ಬೇಗ ಎಫ್‌ಎಸ್‌ಎಲ್ ವರದಿಯನ್ನು ತರಿಸಿಕೊಳ್ಳಬೇಕು ಎಂದು ಕೇಂದ್ರ ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಬೆಂಗಳೂರು (ಅ.16): ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ‘ನಿರ್ಭಯಾ’ ಕಾಯ್ದೆಯನುಸಾರ ಪ್ರಕರಣ ದಾಖಲಿಸಬೇಕು ಮತ್ತು ಆದಷ್ಟು ಬೇಗ ಎಫ್‌ಎಸ್‌ಎಲ್ ವರದಿಯನ್ನು ತರಿಸಿಕೊಳ್ಳಬೇಕು ಎಂದು ಕೇಂದ್ರ ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಬಾಲಕಿ ಮೇಲೆ ನಡೆದಿರುವ ಘಟನೆಯು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ನಿರ್ಭಯಾ ಪ್ರಕರಣದ ನಂತರ ದೇಶದಲ್ಲಿ ಬಲವಾದ ಕಾನೂನು ಬಂದ ಮೇಲೂ ಇಂತಹ ನೀಚ ಮಾನಸಿಕತೆಯ ಜನರಿಗೆ ಭಯ ಇಲ್ಲದಿರುವುದು ಪ್ರಕರಣದಿಂದ ಮತ್ತೊಮ್ಮೆ ಸಾಬೀತಾಗಿದೆ. ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ದೇಶದ ಕಾನೂನಿನ ಬಗ್ಗೆ ಭಯ ಮೂಡಬೇಕು.
ಮಂಡ್ಯ: ಮಳವಳ್ಳಿಯಲ್ಲಿ ಮತ್ತೊಂದು ರೇಪ್: SSLC ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ವೃದ್ಧ
ಅಂತಹ ಕಠಿಣವಾದ ಶಿಕ್ಷೆಯಿಂದ ಮಾತ್ರ ಸಮಾಜಕ್ಕೆ ಒಳ್ಳೆಯ ಸಂದೇಶ ಹೋಗಲು ಸಾಧ್ಯ ಎಂದು ಹೇಳಿದ್ದಾರೆ. ತನಿಖೆಯನ್ನು ತೀವ್ರಗತಿಗೊಳಿಸಿ, ಆರೋಪಪಟ್ಟಿಯನ್ನು ಸಲ್ಲಿಸಬೇಕು. ಸರ್ಕಾರವು ಈ ಪ್ರಕರಣಕ್ಕಾಗಿಯೇ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಬೇಕು. ಪ್ರಕರಣವನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಬೇಕು. ಈ ನಿರ್ಧಾರವನ್ನು ಸರ್ಕಾರ ತಕ್ಷಣವೇ ತೆಗೆದುಕೊಳ್ಳಬೇಕು. ಪೋಷಕರಿಗೆ ತಕ್ಷಣ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪಿಎಫ್‌ಐ ನಿಷೇಧ ಬಳಿಕ ಶೋಭಾ ಕರಂದ್ಲಾಜೆಗೆ ಬೆದರಿಕೆ ಕರೆ: ಕೇಂದ್ರ ಸರ್ಕಾರ ಪಿಎಫ್‌ಐ ಮತ್ತು ಇತರ ಸಹಸಂಘಟನೆಗಳನ್ನು ನಿಷೇಧಿಸಿದ ಮೇಲೆ ತನಗೆ ನಿರಂತರವಾಗಿ ವಿದೇಶಗಳಿಂದ ಇಂಟರ್‌ನೆಟ್ ಕರೆ ಮಾಡಿ ಜೀವ ಬೆದರಿಕೆ ಹಾಕಲಾಗುತ್ತಿದೆ. ಆದರೆ ಈ ಬೆದರಿಕೆ ಕರೆಗಳಿಗೆ ನಾವು ಹೆದರುವುದೂ ಇಲ್ಲ, ಜಗ್ಗುವುದೂ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ಸಂಖ್ಯೆಯ ವಿದೇಶಿ ನಂಬರ್‌ಗಳಿಂದ ತನಗೆ ಬೆದರಿಕೆ ಕರೆಗಳು ಬರುತ್ತಿದ್ದು, ಈ ಬಗ್ಗೆ ಪೊಲೀಸ್ ಇಲಾಖೆಯ ಗಮನಕ್ಕೆ ತರಲಾಗಿದೆ.
ಮಂಡ್ಯ :ಸುಮಲತಾ ವಿರುದ್ಧ ಪರೋಕ್ಷ ಅಸಮಾಧಾನ ಹೊರಹಾಕಿದ ನಿಖಿಲ್
ವಿದೇಶದಲ್ಲಿ ಕುಳಿತು ಇಂಟರ್‌ನೆಟ್ ಮೂಲಕ ಕರೆ ಮಾಡುತ್ತಿರುವುದರಿಂದ ಪೊಲೀಸರಿಗೆ ಈ ಕರೆಗಳನ್ನು ಯಾರು ಮಾಡುತ್ತಿದ್ದಾರೆಂಬುದನ್ನು ಪತ್ತೆ ಹಚ್ಚುವುದು ಕಷ್ಟವಾಗಿದೆ ಎಂದರು. ಹಿಂದುತ್ವದ ವಿಚಾರವಾಗಿ ಮಾತನಾಡಿದಾಗಲೆಲ್ಲಾ ಈ ಹಿಂದೆಯೂ ನನಗೆ ಬೆದರಿಕೆ ಕರೆಗಳು ಬಂದಿದೆ. ಅವುಗಳಿಗೆ ನಾನು ಮಣಿಯುವುದಿಲ್ಲ. ಆದರೆ ದೇಶದಲ್ಲಿ ಭಯೋತ್ಪಾದನೆ ನಿರ್ಮೂಲನೆ ಮತ್ತು ಭಯೋತ್ಪಾದಕರಿಗೆ ಬೆಂಬಲ ನೀಡುವವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಶೋಭಾ ಕರಂದ್ಲಾಜೆ ಹೇಳಿದರು.