ಕಾವೇರಿ ನದಿ ಮಾಲಿನ್ಯ ತಡೆಯಲು, ಮಂಡ್ಯ ಜಿಲ್ಲಾಡಳಿತವು ಅಸ್ಥಿ ವಿಸರ್ಜನೆ ವೇಳೆ ಬಟ್ಟೆ ಮತ್ತು ಪೂಜಾ ಸಾಮಗ್ರಿಗಳನ್ನು ನದಿಗೆ ಎಸೆಯುವುದನ್ನು ನಿಷೇಧಿಸಿದೆ. ನದಿಯ ಪಾವಿತ್ರ್ಯತೆ ಕಾಪಾಡಲು ಸಿಸಿಟಿವಿ ಅಳವಡಿಕೆ ಹಾಗೂ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮಂಡ್ಯ (ಫೆ.12): ಕಾವೇರಿ ನದಿ ಪಾತ್ರದಲ್ಲಿ ಅಸ್ಥಿ ವಿಸರ್ಜನೆ ವೇಳೆ ಬಟ್ಟೆ ಮತ್ತು ಪೂಜಾ ಸಾಮಗ್ರಿಗಳನ್ನು ನದಿಗೆ ಎಸೆಯುವುದನ್ನು ಜಿಲ್ಲಾಡಳಿತ ನಿಷೇಧಿಸಿದೆ. ಅಸ್ಥಿ ವಿಸರ್ಜನೆಯ ಜೊತೆಗೆ ಬಟ್ಟೆ ಮತ್ತು ಪೂಜಾ ಸಾಮಗ್ರಿಗಳನ್ನು ನದಿಗೆ ಎಸೆಯುವುದರಿಂದ ಮಾಲಿನ್ಯ ಹೆಚ್ಚಾಗುತ್ತಿದೆ. ಧಾರ್ಮಿಕ ವಿಧಿ-ವಿಧಾನಗಳ ಆಚರಣೆ ಹಾಗೂ ಅಸ್ಥಿ ವಿಸರ್ಜನೆ ಮಾಡುವಾಗ ನೈರ್ಮಲ್ಯ ಕಾಪಾಡುವ ಕ್ರಮಗಳನ್ನು ಕೈಗೊಳ್ಳುವಂತೆ ಶ್ರೀರಂಗಪಟ್ಟಣ ಪುರಸಭೆ ಮುಖ್ಯಾಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಡೆಸಲು ಪುರೋಹಿತರಿಗೆ ನಿರ್ದಿಷ್ಟ ದರ ನಿಗದಿಪಡಿಸಬೇಕು. ಅಸ್ಥಿ ವಿಸರ್ಜನೆ ಮಾಡುವ ಸ್ಧಳಗಳಲ್ಲಿ ಸಿಸಿ ಟೀವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ತಿಳಿಸಿದ್ದಾರೆ.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಸಂಗೀತ ನಿರ್ದೇಶಕ ಸಾಧು ಕೋಕಿಲ, ನಟ ಮಂಡ್ಯ ರಮೇಶ್‌ಗೆ ಬಿಗ್ ರಿಲೀಫ್

ವೈಜ್ಞಾನಿಕ ರೀತಿಯಲ್ಲಿ

ನದಿಯ ಪಾವಿತ್ರ್ಯತೆ ಮತ್ತು ಪರಿಸರ ರಕ್ಷಣೆಗಾಗಿ ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಸ್ಥಳಕ್ಕೆ ಭೇಟಿ ನದಿ ಪಾತ್ರವು ಮಲಿನ ಆಗದಂತೆ ಕ್ರಮ ಕೈಗೊಳ್ಳಬೇಕು. ನದಿಯ ಪಾವಿತ್ರ್ಯತೆ ಮತ್ತು ಪರಿಸರ ರಕ್ಷಣೆಗಾಗಿ ಪ್ರತ್ಯೇಕವಾದ ಮಾರ್ಗಸೂಚಿ ಸಿದ್ಥಪಡಿಸಿ ಹಾಗೂ ನದಿ ಪಾತ್ರವು ಮಲೀನವಾಗದಂತೆ ಅಗತ್ಯಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

YouTube video player