Asianet Suvarna News Asianet Suvarna News

ರಾಷ್ಟ್ರಧ್ವಜ, ಸಂವಿಧಾನ ಇಷ್ಟವಿಲ್ಲದಿದ್ರೆ ಪಾಕಿಸ್ತಾನಕ್ಕೆ ಹೋಗಿ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬಿಜೆಪಿಯವರು ಇಷ್ಟು ದಿನ ಕರಾವಳಿಯನ್ನು ಬಿಜೆಪಿ ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದರು. ಇದೀಗ ಬಿಜೆಪಿ ಹಾಗೂ ಸಂಘಪರಿವಾರ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

Mandya Hanumdhwaja removal case minister priyanka kharge outraged againsst bjp rav
Author
First Published Jan 29, 2024, 11:15 AM IST

ಬೆಂಗಳೂರು (ಜ.29): ಬಿಜೆಪಿಯವರು ಇಷ್ಟು ದಿನ ಕರಾವಳಿಯನ್ನು ಬಿಜೆಪಿ ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದರು. ಇದೀಗ ಬಿಜೆಪಿ ಹಾಗೂ ಸಂಘಪರಿವಾರ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆಗೆದ ಪ್ರಕರಣ ಸಂಬಂಧ ಟ್ವೀಟ್ ಮಾಡಿರುವ ಅವರು, ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲ ಎನಿಸುತ್ತದೆ. ಹೀಗಾಗಿ ಧರ್ಮಗಳ ಮಧ್ಯೆ ಬೆಂಕಿ ಹತ್ತಿಸಿ ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ನಾಯಕರು ಅತ್ಯಂತ ಕೀಳುಮಟ್ಟಕ್ಕೆ ಇಳಿದಿದ್ದಾರೆ. ವಿರೋಧ ಪಕ್ಷದ ನಾಯಕನೆಂದರೆ ಘನತೆಯುಕ್ತ ಸ್ಥಾನ. ಆ ಸ್ಥಾನದ ಗೌರವವನ್ನೂ ಮಣ್ಣುಪಾಲು ಮಾಡುತ್ತಿದ್ದಾರೆ ಎಂದು ವಿರೋಧಪಕ್ಷ ನಾಯಕ ಆರ್.ಅಶೋಕ್ ವಿರುದ್ಧವೂ ಕಿಡಿಕಾರಿದ್ದಾರೆ. 

ಬಿವೈ ವಿಜಯೇಂದ್ರ ನಿಮ್ಮ ಗಮನಕ್ಕೆ ಈ ಪೋಸ್ಟ್ ತಿಳಿಸಿರುವ ಪ್ರಿಯಾಂಕ್ ಖರ್ಗೆ,

29/12/2023 ರಂದು ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ   ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಮಾತ್ರ ಹಾರಿಸುತ್ತೇವೆ ಎಂದು ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ನವರು ಧ್ವಜ ಸ್ಥಂಭಕ್ಕೆ ಅನುಮತಿ ಕೇಳಿದ್ದಾರೆ. 17/01/2024ರಂದು ಧ್ವಜ ಸ್ಥಂಭದಲ್ಲಿ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಬಿಟ್ಟು ಇನ್ನಿತರ ಯಾವುದೇ ರಾಜಕೀಯ, ಧಾರ್ಮಿಕ ಧ್ವಜವವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟು ಸಹಿ ಮಾಡಿದ್ದಾರೆ. ಅದರಂತೆಯೇ 18/01/2024ರಂದು ಕೆರೆಗೋಡು ಗ್ರಾಮ ಪಂಚಾಯ್ತಿಯ ಅಧಿಕಾರಿಗಳು ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜಾರೋಹಣಕ್ಕೆ ಮಾತ್ರ ಶರತ್ತುಗಳೊಂದಿಗೆ ಅನುಮತಿ ಪತ್ರ ನೀಡಿದ್ದಾರೆ. ನೀಡುವ ವೇಳೆ ಧ್ವಜಾರೋಹಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾಡುವ ಮಾರ್ಪಾಡುಗಳಿಗೆ ಬದ್ಧರಾಗಿರಬೇಕು, ಯಾವುದೇ ಗಲಭೆಗಳಿಗೆ ಅವಕಾಶ ಮಾಡಿಕೊಡದಂತೆ ಷರತ್ತು ವಿಧಿಸಲಾಗಿದೆ. ಧ್ವಜಾರೋಹಣ ಮಾಡುವ 6,7 ದಿನ ಮುಂಚಿತವಾಗಿ ಗ್ರಾಮ ಪಂಚಾಯ್ತಿ ಹಾಗೂ ಪೊಲೀಸರಿಗೆ ತಿಳಿಸುವಂತೆ ಸೂಚಿಸಲಾಗಿದೆ. ಹೀಗಿರುವಾಗ ಎಲ್ಲ ನಿಯಮಗಳನ್ನು ಮೀರಿ ಕೇಸರಿ ಧ್ವಜ ಹಾರಿಸಿದ್ದೇಕೆ? ಬಿಜೆಪಿ ಉತ್ತರಿಸಲೇಬೇಕಾದ ಪ್ರಶ್ನೆಗಳು ಎಂದು ಕಿಡಿಕಾರಿರುವ ಪ್ರಿಯಾಂಕ್ ಖರ್ಗೆ.

ಸರ್ಕಾರಿ ಕಟ್ಟಡಗಳ ಮೇಲೆ ಕೇಸರಿ ಧ್ವಜ ಹಾರಿಸುವುದು ಅಕ್ಷಮ್ಯ, ಸಹಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್

ಈ ಪ್ರಶ್ನೆಗಳಿಗೆ ಬಿಜೆಪಿ ಉತ್ತರಿಸಬೇಕು

ರಾಷ್ಟ್ರ ಧ್ವಜದ ಬದಲು ಏಕಾಏಕಿ ಭಾಗವಾಧ್ವಜ ಹಾರಿಸುವ ಷಡ್ಯಂತ್ರ ರೂಪಿಸಿದ್ದು ಯಾರು? ಅನುಮತಿ ಪತ್ರದ ಷರತ್ತುಗಳನ್ನು ಉಲ್ಲಂಘಿಸಲು ಪ್ರೇರೇಪಿಸಿದ್ದು ಯಾರು? ಬಿಜೆಪಿ ಅದೆಷ್ಟು ದಿನಗಳಿಂದ ಶಾಂತಿ ಕೆಡಿಸುವ ಸಂಚು ರೂಪಿಸಿತ್ತು? ಕಾನೂನು, ನೀತಿ ನಿಯಮಗಳೇನು ಬಿಜೆಪಿ ಕಾಲ ಕೆಳಗಿನ ಕಸದಂತೆ ನೋಡುವುದೇಕೆ? ತ್ರಿವರ್ಣ ಧ್ವಜವನ್ನು ವಿರೋಧಿಸಿದ್ದ RSS ಹೇಳಿಕೊಟ್ಟ ಪಾಠದಂತೆ ಬಿಜೆಪಿಯೂ ತಿರಂಗಾ ಕಂಡರೆ ಉರಿದು ಬೀಳುತ್ತಿದೆಯೆ? ರಾಷ್ಟ್ರ ಧ್ವಜಕ್ಕೆ ಕೈ ಮುಗಿಯುವ ಬದಲು ಕೆಂಡ ಕಾರುತ್ತಿದೆ ಕಾರುತ್ತಿರುವುದೇಕೆ?

ಬಿವೈ ವಿಜಯೇಂದ್ರ, ಆರ್. ಅಶೋಕ್ ಅವರೆ ಸರ್ಕಾರ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ಆ ಧ್ವಜ ಸ್ಥಂಭದ ಉದ್ದೇಶವನ್ನು ಈಡೇರಿಸಿದೆ. ಹೀಗಿದ್ದೂ ನಿಮಗೆ ಇಷ್ಟೊಂದು ಉರಿ, ತಾಪವೇಕೆ? ರಾಷ್ಟ್ರ ಧ್ವಜವನ್ನು ದ್ವೇಷಿಸುವ ಮೂಲಕ ಬಿಜೆಪಿಗರು ತಮಗೆ ತಾವೇ ದೇಶದ್ರೋಹಿಗಳು ಎಂದು ಸರ್ಟಿಫಿಕೇಟ್ ಕೊಟ್ಟುಕೊಂಡಿದ್ದಾರೆ. ಬಿಜೆಪಿಗರಿಗೆ ದೇಶದ ಧ್ವಜ, ದೇಶದ ಸಂವಿಧಾನ, ದೇಶದ ಐಕ್ಯತೆ ಇಷ್ಟವಿಲ್ಲವೆಂದರೆ ಅವರ ಪ್ರೀತಿಪಾತ್ರವಾದ ಪಾಕಿಸ್ತಾನಕ್ಕೆ ಹೋಗಲಿ. ಬಿಜೆಪಿಯ ಯಾವುದೇ ತಂತ್ರ, ಕುತಂತ್ರಗಳಿಗೆ ನಾವು ಬಗ್ಗುವುದಿಲ್ಲ, ಬಗ್ಗುಬಡಿಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. 

 

ಕಾಂಗ್ರೆಸ್‌ನಿಂದಲೇ ರಾಜ್ಯದಲ್ಲಿ ಕೋಮುಗಲಭೆಗೆ ಯತ್ನ? ಬಿವೈ ವಿಜಯೇಂದ್ರ ಹೇಳಿದ್ದೇನು?

Follow Us:
Download App:
  • android
  • ios