ಹನುಮ ಜಯಂತಿ ಪ್ರಯುಕ್ತ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾ ಸಂಕೀರ್ತನ ಯಾತ್ರೆಯನ್ನು ಆಯೋಜಿಸಲಾಗಿದೆ. ನಿಮಿಷಾಂಬ ದೇವಾಲಯದಿಂದ ಆರಂಭವಾಗುವ ಈ ಯಾತ್ರೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ, ಶ್ರೀರಂಗನಾಥಸ್ವಾಮಿ ಮೈದಾನದಲ್ಲಿ ಮುಕ್ತಾಯ ಈ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ 

ಶ್ರೀರಂಗಪಟ್ಟಣ (ಡಿ.3) : ಹನುಮ ಜಯಂತಿ ಅಂಗವಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಡಿ.3ರಂದು ಹನುಮ ಮಾಲಾ ಸಂಕೀರ್ತನ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಮಂಗಳವಾರ ಪೊಲೀಸರು ಪಟ್ಟಣ ಹಾಗೂ ಗಂಜಾಂನಲ್ಲಿ ಪಥ ಸಂಚಲನ ನಡೆಸುವ ಮೂಲಕ ಭದ್ರತೆ ಕೈಗೊಂಡರು. 

ಮಾಲಾಧಾರಿಗಳ ಸಾರ್ವಜನಿಕ ಸಭೆ:

ಬುಧವಾರ ಬೆಳಗ್ಗೆ 10 ಗಂಟೆಗೆ ಶ್ರೀರಂಗಪಟ್ಟಣದ ನಿಮಿಷಾಂಬ ದೇವಾಲಯದ ಆವರಣದಲ್ಲಿ ಮಾಲಾಧಾರಿಗಳ ಸಾರ್ವಜನಿಕ ಸಭೆ ನಡೆಯಲಿದೆ. ನಂತರ ಮೆರವಣಿಗೆ ಪ್ರಾರಂಭಗೊಂಡು ಪಟ್ಟಣದ ಕೋಟೆ ದ್ವಾರದ ಮೂಲಕ ಮೂಡಲ ಬಾಗಿಲು ಆಂಜನೇಯಸ್ವಾಮಿ ದರ್ಶನ ಪಡೆದು ಶ್ರೀರಂಗನಾಥಸ್ವಾಮಿ ಮೈದಾನದಲ್ಲಿ ಮುಕ್ತಾಯಗೊಳ್ಳಲಿದೆ. 

ಮಾಲಾಧಾರಿಗಿಗೆ ಪ್ರಸಾದ ವಿತರಣೆ:

ಅದೇ ಮೈದಾನದಲ್ಲಿ ಮಾಲಾ ವಿಸರ್ಜನೆ ಹಾಗೂ ಪ್ರಸಾದ ವಿತರಣೆ ಜರುಗಲಿದೆ. ಮಂಡ್ಯ, ವಿವಿಧ ತಾಲೂಕುಗಳು ಸೇರಿದಂತೆ ಮೈಸೂರು, ಹಾಸನ, ಚಾಮರಾಜನಗರ, ರಾಮನಗರ ಮತ್ತು ಬೆಂಗಳೂರು ಜಿಲ್ಲೆಯಿಂದ ಮಾಲಾಧಾರಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ.

 ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಹನುಮ ಮಾಲಾಧಾರಿಗಳು ಯಾತ್ರೆ ತೆರಳಲಿರುವ ಮಾರ್ಗದಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು.