Asianet Suvarna News Asianet Suvarna News

'ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ'

* "ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ"
* ಮಂಗಳೂರಿನಲ್ಲಿ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ
* ದೇವಸ್ಥಾನ ಕೆಡವಿದ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ

Mangaluru hindu-mahasabha-leader-dharmendra-controversial statement on gandhij rbj
Author
Bengaluru, First Published Sep 18, 2021, 4:56 PM IST
  • Facebook
  • Twitter
  • Whatsapp

ಮಂಗಳೂರು, (ಸೆ.18): ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಇನ್ನು ನೀವು ಯಾವ ಲೆಕ್ಕ? ಎಂದು ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಮಂಗಳೂರಿನಲ್ಲಿ ಮಾತನಾಡಿದ ಧರ್ಮೇಂದ್ರ ಅವರು, ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮಿ, ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಹೀಗಿರುವಾಗ ನಿಮ್ಮ ವಿಚಾರದಲ್ಲಿ ಅಲೋಚನೆ ಮಾಡಕ್ಕೆ ಅಗಲ್ಲ ಅಂತೀರಾ? ಯಾವ ತುಘಲಕ್ ಸರ್ಕಾರ ನಡೆಸುತ್ತಿದ್ದಿರಾ? ಎಂದು ಪ್ರಶ್ನಿಸಿದರು.

ಮೈಸೂರಿನಲ್ಲಿ ದೇಗುಲ ತೆರವು ವಿರುದ್ಧ ಆಕ್ರೋಶ, ಸರ್ಕಾರಕ್ಕೆ ಹಿಂಜಾವೇ ಎಚ್ಚರಿಕೆ.

ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ಇದ್ಯಾ ? ತಾಲಿಬಾನ್ ಆದ್ರೂ ಪರ್ವಾಗಿಲ್ಲ, ಇದಕ್ಕಿಂತ ಕೀಳು ಮಟ್ಟದ ಸರ್ಕಾರ ನಡೆಸುತ್ತಿದ್ದೀರಾ ನೀವು. ನಾಚಿಕೆ ಇಲ್ಲದ ಮುಖ್ಯಮಂತ್ರಿ, ನೈತಿಕತೆ ಇಲ್ಲದ ಮಂತ್ರಿ ಮಂಡಲ. ಭಾರತೀಯ ಜನತಾ ಪಕ್ಷವೇ ಬೆನ್ನು ಮೂಳೆ ಇಲ್ಲದ ಪಕ್ಷ ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
"

Follow Us:
Download App:
  • android
  • ios