Breaking: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ: ನಾಳೆ ಶಾಲಾ-ಕಾಲೇಜಿಗೆ ರಜೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಡಿಸೆಂಬರ್ 27 ರಂದು ರಾಜ್ಯ ಸರ್ಕಾರ ರಜೆ ಘೋಷಿಸಿದೆ. ಶಾಲಾ-ಕಾಲೇಜುಗಳು, ಬ್ಯಾಂಕ್‌ಗಳು ಮತ್ತು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುವುದಿಲ್ಲ. ಏಳು ದಿನಗಳ ಶೋಕಾಚರಣೆಯನ್ನು ಸಹ ಘೋಷಿಸಲಾಗಿದೆ.

Manmohan Singh passes away State Holiday announced in Karnaraka san

ಬೆಂಗಳೂರು (ಡಿ.26): ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಗುರುವಾರ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ನಾಳೆ ಅಂದರೆ ಡಿಸೆಂಬರ್ 27 ರಂದು ಸರ್ಕಾರಿ ರಜೆ ಘೋಷಣೆ ಮಾಡಿದ್ದು, ಶಾಲಾ-ಕಾಲೇಜುಗಳು, ಬ್ಯಾಂಕ್‌ಗಳು ಹಾಗೂ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸುವುದಿಲ್ಲ. ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮನಮೋಹನ್‌ ಸಿಂಗ್‌ ಅವರನ್ನು ಇಂದು ಸಂಜೆ ದೆಹಲಿಯ ಏಮ್ಸ್‌ ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲು ಮಾಡಲಾಗಿತ್ತು. ರಾತ್ರಿಯ ವೇಳೆಗೆ ಅವರು ಚಿಕಿತ್ಸೆಗೆ ಸ್ಪಂದಿಸದೆ ವಿಧಿವಶರಾಗಿದ್ದಾರೆ. ರಾತ್ರಿ 8.06 ನಿಮಿಷಕ್ಕೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ರಾತ್ರಿ 9.51ಕ್ಕೆ ಅವರು ಅಸುನೀಗಿದ್ದಾರೆ ಎಂದು ದೆಹಲಿ ಏಮ್ಸ್‌ ಆಸ್ಪತ್ರೆಯ ವೈದ್ಯರು ಬುಲೆಟಿನ್‌ನಲ್ಲಿ ತಿಳಿಸಿದ್ದಾರೆ.

ಇನ್ನು ಕೇಂದ್ರ ಸರ್ಕಾರ ಕೂಡ,  ನಾಳೆ ನಡೆಯಲಿರುವ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗುವುದು ಎಂದಿದೆ.. 7 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗುವುದು. ನಾಳೆ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಡಾ. ಮನಮೋಹನ್ ಸಿಂಗ್ ಅವರಿಗೆ ಸಂಪೂರ್ಣ ರಾಜ್ಯ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿಸಿದೆ.

ಮನಮೋಹನ್‌ ಸಿಂಗ್‌ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. 'ಡಾ. ಮನಮೋಹನ್ ಸಿಂಗ್ ಜಿ ಮತ್ತು ನಾನು ಅವರು ಪ್ರಧಾನಿಯಾಗಿದ್ದಾಗ ಮತ್ತು ನಾನು ಗುಜರಾತ್ ಸಿಎಂ ಆಗಿದ್ದಾಗ ನಿಯಮಿತವಾಗಿ ಸಂವಹನ ನಡೆಸುತ್ತಿದ್ದೆವು. ಆಡಳಿತಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ನಾವು ವ್ಯಾಪಕವಾದ ಚರ್ಚೆಗಳನ್ನು ನಡೆಸುತ್ತಿದ್ದೆವು. ಅವರ ಬುದ್ಧಿವಂತಿಕೆ ಮತ್ತು ನಮ್ರತೆ ಯಾವಾಗಲೂ ನನಗೆ ಕಾಣುತ್ತಿತ್ತು. ಈ ದುಃಖದ ಸಮಯದಲ್ಲಿ, ಮನಮೋಹನ್ ಸಿಂಗ್ ಜಿ ಅವರ ಕುಟುಂಬ, ಅವರ ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳೊಂದಿಗೆ ನಾನೂ ಭಾಗಿಯಾಗಿದ್ದೇನೆ' ಎಂದಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಗಣ್ಯರ ಸಂತಾಪ, 'ಅತ್ಯಂತ ಮೇರು ನಾಯಕ' ಎಂದ ನರೇಂದ್ರ ಮೋದಿ!

'ಭಾರತವು ತನ್ನ ಅತ್ಯಂತ ಮೇರು ನಾಯಕರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಜಿ ಅವರನ್ನು ಕಳೆದುಕೊಂಡು ದುಃಖಿಸುತ್ತದೆ. ವಿನಮ್ರ ಮೂಲದಿಂದ ಏರಿದ ಅವರು ಗೌರವಾನ್ವಿತ ಅರ್ಥಶಾಸ್ತ್ರಜ್ಞವರೆಗಿನ ಹಾದಿಯನ್ನು ಏರಿದ್ದರು. ಅವರು ಹಣಕಾಸು ಸಚಿವರಾಗಿ ಸೇರಿದಂತೆ ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದರು,  ನಮ್ಮ ಆರ್ಥಿಕ ನೀತಿಯ ಮೇಲೆ ಬಲವಾದ ಮುದ್ರೆ ಹಾಕಿದರು. ಸಂಸತ್ತಿನಲ್ಲಿ ಅವರ ಮಧ್ಯಸ್ಥಿಕೆಗಳು ಸಹ ಅದ್ಭುತವಾಗಿದ್ದವು. ನಮ್ಮ ಪ್ರಧಾನಿಯಾಗಿ, ಅವರು ಜನರ ಜೀವನವನ್ನು ಸುಧಾರಿಸಲು ವ್ಯಾಪಕ ಪ್ರಯತ್ನಗಳನ್ನು ಮಾಡಿದರು' ಎಂದಿದ್ದಾರೆ.

ಆಧಾರ್‌, ನರೇಗಾ, ಆರ್‌ಟಿಐ... ದೇಶ ಕಂಡ ವಿಚಾರವಾದಿ ಪ್ರಧಾನಿ ಮನಮೋಹನ್‌ ಸಿಂಗ್‌ ಸಾಧನೆಗಳು!

Latest Videos
Follow Us:
Download App:
  • android
  • ios