ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ಕಿಲ್ಲರ್ ಕೊರೋನಾಗೆ ಬಲಿಯಾಗಿದ್ದಾರೆ. 

ರಾಯಚೂರು, (ಏ.30): ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ಸುಯಮೀಂದ್ರ ಆಚಾರ್ ಅವರು ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸುಯಮೀಂದ್ರ ಆಚಾರ್ ಅವರು ಕಳೆದ ಕೆಲ ದಿನಗಳ ಹಿಂದೆ ಕೊರೋನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಅವರು ದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಶುಕ್ರವಾರ) ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಕೊರೋನಾ ಬರಸಿಡಿಲಿಗೆ ತತ್ತರಿಸಿದ ಕರ್ನಾಟಕ: ಕರುಣಾಜನಕ ಸ್ಥಿತಿ ಅಂತ್ಯ ಯಾವಾಗ? 

ಇನ್ನು ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂತ್ರಾಲಯ ಮಠದಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಮೇ 1 ರಿಂದ ಪ್ರತ್ಯಕ್ಷದರ್ಶನ ,ತೀರ್ಥಪ್ರಸಾದ ವ್ಯವಸ್ಥೆಯಿರುವುದಿಲ್ಲ. ಭಕ್ತರು ಆನ್‌ಲೈನ್ ಮೂಲಕ ಸೇವೆಯಲ್ಲಿ ಪಾಲ್ಗೊಳ್ಳಬಹುದು ಎಂದು ಮಠವು ಪ್ರಕಟಣೆ ಹೊರಡಿಸಿದೆ.