Covid Crisis: ಸೆಪ್ಟೆಂಬರ್‌ ಅಂತ್ಯದವರೆಗೂ ಕರ್ನಾಟಕದಲ್ಲಿ ಮಾಸ್ಕ್‌ ಕಡ್ಡಾಯ

ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಮುಂಬರುವ ಸೆಪ್ಟೆಂಬರ್‌ ಅಂತ್ಯದವರೆಗೆ ವಿವಿಧ ಹಬ್ಬಗಳಲ್ಲಿ ಕೊರೋನಾ ಮುಂಜಾಗ್ರತಾ ಕ್ರಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಆರೋಗ್ಯ ಇಲಾಖೆ ಜಿಲ್ಲಾಡಳಿತಗಳಿಗೆ ಸುತ್ತೋಲೆ ಹೊರಡಿಸಿದೆ. 

Mask are mandatory in Karnataka till the end of September gvd

ಬೆಂಗಳೂರು (ಆ.30): ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಮುಂಬರುವ ಸೆಪ್ಟೆಂಬರ್‌ ಅಂತ್ಯದವರೆಗೆ ವಿವಿಧ ಹಬ್ಬಗಳಲ್ಲಿ ಕೊರೋನಾ ಮುಂಜಾಗ್ರತಾ ಕ್ರಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಆರೋಗ್ಯ ಇಲಾಖೆ ಜಿಲ್ಲಾಡಳಿತಗಳಿಗೆ ಸುತ್ತೋಲೆ ಹೊರಡಿಸಿದೆ. ಸದ್ಯ ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯ ನಿಯಮ ಜಾರಿಯಲ್ಲಿದೆ. 

ಆದರೂ, ಜೂನ್‌ ಆರಂಭದಿಂದ ಸೋಂಕು ಹೆಚ್ಚಳವಾಗುತ್ತಿದ್ದು, ಮುಂಬರುವ ಗೌರಿ-ಗಣೇಶ ಹಬ್ಬ, ಓಣಂ, ಅನಂತ ಪದ್ಮನಾಭ ವ್ರತ, ವಿಶ್ವಕರ್ಮ ಜಯಂತಿ, ಮಹಾಲಯ ಅಮಾವಾಸ್ಯೆ ವೇಳೆ ಮತ್ತಷ್ಟುಹೆಚ್ಚುವ ಸಾಧ್ಯತೆಗಳಿವೆ. ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್‌ ಅಂತ್ಯದವರೆಗೂ ಸಾರ್ವಜನಿಕ ಸ್ಥಳಗಳು, ಹೋಟೆಲ್‌, ಬಾರ್‌ ರೆಸ್ಟೋರೆಂಟ್‌ಗಳು, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ, ಪ್ರಯಾಣ ಸಂದರ್ಭದಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ಜತೆಗೆ ಗುಂಪು ಸೇರುವುದನ್ನು ನಿರ್ಬಂಧಿಸುವಂತೆ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. 

ಕೋವಿಡ್ ಸೋಂಕಿನಿಂದ ಆಸ್ಪತ್ರೆ ದಾಖಲಾಗುವವರ ಸಂಖ್ಯೆ ಏರಿಕೆ, ಭಾರತದಲ್ಲಿ ಮತ್ತೆ ಆತಂಕ!

ಈ ಬಾರಿಯ ಗಣೇಶ ಹಬ್ಬದ ಸಂದರ್ಭದಲ್ಲಿ ಉತ್ಸವ, ಮೂರ್ತಿ ಪ್ರತಿಷ್ಠಾಪನೆಯನ್ನು ಹೊರಾಂಗಣ ಪ್ರದೇಶದಲ್ಲಿ ಆಯೋಜಿಸಲು ಪ್ರೋತ್ಸಾಹಿಸಬೇಕು. ಸ್ಥಳದಲ್ಲಿ ಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟೈಸರ್‌ ವ್ಯವಸ್ಥೆ ಮಾಡಬೇಕು. ಒಂದು ಮೀಟರ್‌ ಅಂತರ, ಮಾಸ್ಕ್‌ ಧರಿಸುವುದಕ್ಕೆ ಸೂಚಿಸಬೇಕು. ಸೋಂಕು ಲಕ್ಷಣ ಉಳ್ಳವರು ಉತ್ಸವಗಳಿಂದ ಅಂತರ ಕಾಯ್ದುಕೊಳ್ಳುವಂತೆ ಸ್ಥಳೀಯ ಮಟ್ಟದಲ್ಲಿ ಕ್ರಮಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಮತ್ತಷ್ಟು ತಗ್ಗಿದ ಕೋವಿಡ್‌: ರಾಜ್ಯದಲ್ಲಿ ಕೊರೋನಾ ಸೋಂಕು ಪರೀಕ್ಷೆಗಳು ಕಡಿಮೆಯಾಗಿದ್ದು, ಸೋಮವಾರ 659 ಜನರಲ್ಲಿ ಪ್ರಕರಣಗಳು ಪತ್ತೆಯಾಗಿವೆ. 1192 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸಾವಿಗೀಡಾಗಿದ್ದಾರೆ. 12 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.5.3 ರಷ್ಟುದಾಖಲಾಗಿದೆ. ಬೆಂಗಳೂರು, ದಾವಣಗೆರೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. 

ಸದ್ಯ ಸಕ್ರಿಯ ಸೋಂಕಿತರ ಸಂಖ್ಯೆ 7,324 ಇದೆ. ಭಾನುವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆ 11 ಸಾವಿರ ಕಡಿಮೆಯಾಗಿದೆ. ಹೀಗಾಗಿ, ಹೊಸ ಪ್ರಕರಣಗಳು 270 ಇಳಿಕೆಯಾಗಿವೆ (ಭಾನುವಾರ 929 ಪ್ರಕರಣಗಳು, ಐದು ಸಾವು). ಈ ಪೈಕಿ 74 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 5 ಮಂದಿ ಐಸಿಯು, 4 ಮಂದಿ ಆಕ್ಸಿಜನ್‌, 65 ಮಂದಿ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 7,250 ಮಂದಿ ಮನೆಯಲ್ಲಿ ಆರೈಕೆಯಲ್ಲಿದ್ದಾರೆ.

ಎಲ್ಲಿ, ಎಷ್ಟು ಪ್ರಕರಣ?: ಸೋಮವಾರದ ಬೆಂಗಳೂರಿನಲ್ಲಿ 450 ಪ್ರಕರಣ ಪತ್ತೆಯಾಗಿವೆ. ಉಳಿದಂತೆ ಶಿವಮೊಗ್ಗ 32, ಚಾಮರಾಜನಗರ 27 ಮಂದಿಗೆ ಸೋಂಕು ತಗುಲಿದೆ. 12 ಜಿಲ್ಲೆಗಳಲ್ಲಿ ಬೆರಳೆಣಿಕೆ, ಬೀದರ್‌, ಚಿತ್ರದುರ್ಗ, ಗದಗ, ಹಾಸನ, ಹಾವೇರಿ, ಕೊಪ್ಪಳ ಹಾಗೂ ವಿಜಯಪುರದಲ್ಲಿ ಶೂನ್ಯ ಪ್ರಕರಣ ವರದಿಯಾಗಿವೆ.

ಬೆಂಗಳೂರಿನಲ್ಲಿ 500ರ ಒಳಗೆ ಇಳಿದ ಕೊರೋನಾ ಕೇಸ್‌: ನಗರದಲ್ಲಿ ಸೋಮವಾರ 450 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ.4.66 ದಾಖಲಾಗಿದೆ. 637 ಜನರು ಗುಣಮುಖರಾಗಿದ್ದು, ಸೋಂಕಿಗೆ ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಕೊರೋನಾ ಸೋಂಕಿನಿಂದ ಮೃತರಾದವರ ಸಂಖ್ಯೆ 16,983ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸದ್ಯ 4,723 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 57 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Covid Crisis: ಮಾಸ್ಕ್‌ ಧರಿಸದವರಿಗೆ ದಂಡ ಹಾಕಿ: ತಜ್ಞರು

ಇಬ್ಬರು ಐಸಿಯು ವೆಂಟಿಲೇಟರ್‌, 14 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5 ಎಚ್‌ಡಿಯು ಮತ್ತು 36 ಮಂದಿ ಸಾಮಾನ್ಯ ವಾರ್ಡ್‌ಗೆ ದಾಖಲಾಗಿದ್ದಾರೆ. ಉಳಿದವರು ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1516 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದು ಕೊಂಡಿದ್ದಾರೆ. ನಗರದಲ್ಲಿ 9 ಕ್ಲಸ್ಟರ್‌ಗಳಿದ್ದು, 5ಕ್ಕಿಂತ ಹೆಚ್ಚು ಸೋಂಕಿತರಿರುವ ಕ್ಲಸ್ಟರ್‌ಗಳು ಇಲ್ಲ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

Latest Videos
Follow Us:
Download App:
  • android
  • ios