ಲೋಕಸಭಾ ಚುನಾವಣೆ ಹೊತ್ತಲ್ಲಿ ಮತ್ತೆ ಮುನ್ನಲೆಗೆ ಬಂದ ಪಂಚಮಸಾಲಿ ಹೋರಾಟ; ಮಾ.12 ರಂದು ಕಲಬುರಗಿಯಲ್ಲಿ ಬೃಹತ್ ಸಮಾವೇಶ!
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಇದೇ ಮಾರ್ಚ್ 12 ರಂದು ಕಲಬುರಗಿಯಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ಚಿಕ್ಕೋಡಿ (ಮಾ.8): ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಇದೇ ಮಾರ್ಚ್ 12 ರಂದು ಕಲಬುರಗಿಯಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ಇಂದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರುಗೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಗಳು, ಕಲಬುರಗಿಯಲ್ಲಿ ಬೃಹತ್ ಸಮಾವೇಶ ನಡೆಸಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೇಲೆ ಒತ್ತಡ ಹೇರಲಾಗುವುದು. ಹೀಗಾಗಿ ಪಂಚಮಸಾಲಿ ಸಮುದಾಯದ ಮುಖಂಡರು, ಬಾಂಧವರು ಕಲಬುರಗಿಯಲ್ಲಿ ನಡೆಯಲಿರುವ ಸಮಾವೇಶಕ್ಕೆ ಬರುವಂತೆ ಕರೆ ನೀಡಿದರು.
ಪಂಚಮಸಾಲಿ ಮೀಸಲಿಗೆ ಸರ್ಕಾರದ ನಿರ್ಲಕ್ಷ್ಯ: ಜಯಮೃತ್ಯುಂಜಯ ಶ್ರೀ ಕಿಡಿ
ಕಲಬುರಗಿಯಲ್ಲಿ ಪಂಚಮಸಾಲಿ ಬೃಹತ್ ಸಮಾವೇಶ ನಡೆಸುವುದರ ಜೊತೆಗೆ ಸಮಾಜದ ಶಾಸಕರು, ಸಚಿವರು ದೆಹಲಿಗೆ ಹೋಗಿ ವರಿಷ್ಠರ ಮೇಲೆ ಒತ್ತಡ ಹೇರಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುತ್ತೇವೆ ಎಂದು ಮಾತು ಕೊಟ್ಟಿದ್ದರು. ಆದರೆ ಅಧಿಕಾರಕ್ಕೆ ಒಂಬತ್ತು ತಿಂಗಳು ಕಳೆದರೂ ಇದುವರೆಗೆ ಸರ್ಕಾರದಿಂದ ಸರಿಯಾದ ರೀತಿಯಲ್ಲಿ ಸ್ಪಂದನೆ ಸಿಗುತ್ತಿಲ್ಲ. ಹೀಗಾಗಿ ಮಾರ್ಚ್ 12 ರಂದು ಕಲಬುರಗಿಯಲ್ಲಿ ಪಂಚಮಸಾಲಿಗಳ ಬೃಹತ್ ಸಮಾವೇಶ ಏರ್ಪಡಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಡ ಹೇರುತ್ತೇವೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಭರವಸೆ ಈಡೇರಿಸಿಲ್ಲ: ಬಸವಜಯ ಮೃತ್ಯುಂಜಯ ಶ್ರೀ