ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ತಾಲೂಕಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಅತಿ ಉತ್ಸಾಹದಿಂದ ಆಚರಿಸಿದರು ಕಾಂಗ್ರೆಸ್ ಮುಖಂಡ ಚೀರಣಕುಪ್ಪೆ ಮಹೇಶ್ ಹಾಗೂ ಡಿಕೆಶಿ ಅಭಿಮಾನಿಗಳು ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಸಿ, ಆದಷ್ಟು ಬೇಗ ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿದರು.

ಕನಕಪುರ (ಮೇ.16): ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ತಾಲೂಕಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಅತಿ ಉತ್ಸಾಹದಿಂದ ಆಚರಿಸಿದರು ಕಾಂಗ್ರೆಸ್ ಮುಖಂಡ ಚೀರಣಕುಪ್ಪೆ ಮಹೇಶ್ ಹಾಗೂ ಡಿಕೆಶಿ ಅಭಿಮಾನಿಗಳು ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಸಿ, ಆದಷ್ಟು ಬೇಗ ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿದರು.

ನಗರಸಭಾಧ್ಯಕ್ಷೆ ಹೇಮರಾಜು ಹಾಗೂ ನಗರಸಭಾ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕಾರ್ಯಕರ್ತರು, ಅಭಿಮಾನಿಗಳು ಒಳಕೋಟಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶಿವಕುಮಾರ್ ಆರೋಗ್ಯ, ಆಯಸ್ಸು ನೀಡಿ ರಾಜ್ಯದ ಜನಸೇವೆಯನ್ನು ಮಾಡುವ ಅವಕಾಶ ದೊರಕಲಿ ಎಂದು ಶುಭ ಹಾರೈಸಿ, ನಗರಸಭೆಯ ಮುಂದೆ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಸರಳವಾಗಿ ಆಚರಿಸಿ ಸಾರ್ವಜನಿಕರಿಗೆ ಅನ್ನದಾನ ಏರ್ಪಡಿಸಿದ್ದರು.

ನಗರಸಭಾ ಅಧ್ಯಕ್ಷೆ ಹೇಮರಾಜು ಮಾತನಾಡಿ, ನಮ್ಮ ನೆಚ್ಚಿನ ನಾಯಕರಾದ ಡಿ ಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಬೇಕು ಎಂಬ ಉದ್ದೇಶದಿಂದ, ಅವರ 63ನೇ ಹುಟ್ಟು ಹಬ್ಬದ ದಿನದಂದು ನಾಯಕರು, ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರಲ್ಲಿ ಪ್ರಾರ್ಥಿಸಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಡಿಕೆಶಿ @63: ಅಪ್ಪನ ನೆಚ್ಚಿನ ಹಾಡು ರಿವೀಲ್​ ಮಾಡಿ ವಿಶ್​ ಮಾಡಿದ ಮುದ್ದಿನ ಪುತ್ರಿ ಐಶ್ವರ್ಯಾ

ನಗರಸಭಾ ಸದಸ್ಯೆ ಸರಳಾ ಶ್ರೀನಿವಾಸ್, ಮುಖಂಡ ರಾಜು, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುತ್ತುರಾಜ್‌ ಸೇರಿದಂತೆ ಯೂತ್ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೆ ಕೆ ಪಿ ಸುದ್ದಿ 01:
ಕನಕಪುರ ತಾಲೂಕಿನ ಹಲವು ದೇವಾಲಯಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪೂಜೆ ಸಲ್ಲಿಸಿದರು.