ಡಾ.ರಾಜ್‌ಕುಮಾರ್ ಅವರ ಅಭಿನಯದ ‘ಆಕಸ್ಮಿಕ’ ಚಲನ ಚಿತ್ರದ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡಿಗೆ ಮೇಯರ್ ಗೌತಮ್ ಕುಮಾರ್, ಆಯುಕ್ತ ಬಿ. ಎಚ್.ಅನಿಲ್‌ಕುಮಾರ್ ಸೇರಿದಂತೆ ಅನೇಕರು ಭರ್ಜರಿ ನೃತ್ಯ ಮಾಡಿದ್ದಾರೆ.
ಬೆಂಗಳೂರು(ಜ.26): ಸ್ವಚ್ಛಸರ್ವೇಕ್ಷಣ ಜಾಗೃತಿ ಜಾಥಾದ ವೇಳೆಯಲ್ಲಿ ಡಾ.ರಾಜ್‌ಕುಮಾರ್ ಅವರ ಅಭಿನಯದ ‘ಆಕಸ್ಮಿಕ’ ಚಲನ ಚಿತ್ರದ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡಿಗೆ ಮೇಯರ್ ಗೌತಮ್ ಕುಮಾರ್, ಆಯುಕ್ತ ಬಿ. ಎಚ್.ಅನಿಲ್‌ಕುಮಾರ್ ಸೇರಿದಂತೆ ಅನೇಕರು ಭರ್ಜರಿ ನೃತ್ಯ ಮಾಡಿ ಜಾಥಾದಲ್ಲಿ ಭಾಗಿಯಾದವರನ್ನು ಹುರಿದುಂಬಿಸಿದ್ದಾರೆ.
ನಗರದ ಸ್ವಚ್ಛತಾ ಕಾಳಜಿ ಕೇವಲ ಸ್ವಚ್ಛ ಸರ್ವೇ ಕ್ಷಣ ಅಭಿಯಾನಕ್ಕೆ ಸೀಮಿತವಾಗಬಾರದು, ಪಾಲಿಕೆ ಜೊತೆ ನಾಗರಿಕರು ಕೈ ಜೋಡಿಸಿದರೆ ಮಾತ್ರ ನಗರಕ್ಕೆ ಉತ್ತಮ ರ‌್ಯಾಂಕ್ ಬರಲು ಸಾಧ್ಯ ಎಂದು ಬಿಬಿಎಂಪಿ ಮೇಯರ್ ಗೌತಮ್‌ಕುಮಾರ್ ಅಭಿಪ್ರಾಯಪಟ್ಟರು.
ಮತ್ತೆ ವಕೀಲಿಕೆ ಆರಂಭಿಸ್ತಾರಾ ಮಾಜಿ ಸಿಎಂ ಸಿದ್ದರಾಮಯ್ಯ?
ಶನಿವಾರ ‘ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ’ ಹಡ್ಸನ್ ವೃತ್ತದ ಕಬ್ಬನ್ ಪಾರ್ಕ್ ಮುಖ್ಯದ್ವಾರದ ಬಳಿ ಆಯೋಜಿಸಿದ್ದ ‘ಸ್ವಚ್ಛ ಸರ್ವೇಕ್ಷಣ ಅಭಿ ಯಾನ’ದಲ್ಲಿ ಸಾರ್ವಜನಿಕರು ಭಾಗವಹಿಸುವ ಕುರಿತು ಏರ್ಪಡಿಸಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಸಮುಕ್ತ ಬೆಂಗಳೂರು ಮಾಡಲು ಪಾಲಿಕೆ ಈಗಾಗಲೇ ಅನೇಕ ಕ್ರಮ ಕೈಗೊಂಡಿದೆ.
ರಸ್ತೆ ಬದಿ, ಪಾದಚಾರಿ ಮಾರ್ಗಗಳಲ್ಲಿ ಕಸ ಬಿದ್ದಿ ರುವುದು ಕಂಡು ಬಂದರೆ ಪಾಲಿಕೆ ನಿಯಂತ್ರಣ ಕೊಠಡಿ ಹಾಗೂ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರೆ ಕೂಡಲೇ ಕಸವನ್ನು ತೆರವುಗೊಳಿಸಲಿದ್ದಾರೆ ಎಂದು ತಿಳಿಸಿದರು. ಬಿಬಿಎಂಪಿ ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತ ಡಿ.ರಂದೀಪ್ ಮಾತನಾಡಿ, ಸ್ವಚ್ಛ ಸರ್ವೇಕ್ಷಣ ಅಭಿಯಾನಕ್ಕೆ ಈವರೆಗೆ ಒಟ್ಟು ೪೦ ಸಾವಿರ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಕ್ರಿಯೆ ನೀಡುವ ಮೂಲಕ ನಗರಕ್ಕೆ ಉತ್ತಮ ಅಂಕ ಸಿಗುವಂತೆ ಮಾಡಬೇಕು ಎಂದು ಮನವಿ ಮಾಡಿದರು.
https://www.swachhsurvekshan2020.org/CitizenFeedback%2c/StateWiseSummary ವೆ
