ಬೆಂಗಳೂರು[ಜ.24]: ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಕಂಪ್ಲಿ ಶಾಸಕ ಗಣೇಸ್‌ರನ್ನು ಅಗತ್ಯ ಬಿದ್ದರೆ ರೌಡಿ ಶೀಟರ್ ಪಟ್ಟಿಗೆ ಸೇರಿಸುವ ಬಗ್ಗೆ ಪೊಲೀಸ್ ಇಸ್ಖೆಯು ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಪೊಲೀಸರು ತನಿಖೆ ಕೈಗೊಂಡಿದ್ದು, ಶೀಘ್ರದಲ್ಲಿಯೇ ಬಂಧಿಸಲಿದ್ದಾರೆ. ಪ್ರಕರಣ ಸಂಬಂಧ ಯಾವುದೇ ಒತ್ತಡಗಳಾಗಲಿ ಇಲ್ಲ. ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಅಲ್ಲದೇ ಈ ಹಿಂದೆ ಗಣೇಶ್ ಹೆಸರು ರೌಡಿಶೀಟರ್ ಪಟ್ಟಿಯಲ್ಲಿದ್ದು, ತರುವಾಯ ರೌಡಿ ಶೀಟರ್ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಮತ್ತೊಮ್ಮೆ ಇಂತಹ ಘಟನೆಗಳು ಜರುಗಿದರೆ ಮತ್ತೆ ರೌಡಿಶೀಟರ್ ಪಟ್ಟಿಗೆ ಸೇರಿಸುವ ಬಗ್ಗೆ ಪೊಲೀಸರು ಸೂಚನೆ ನೀಡಿದರೆ ಅದರಂತೆ ಕ್ರಮ ಜರುಗಿಸಲಾಗುವುದು ಎಂದರು.