ಸರ್ಕಾರದ ವಿರುದ್ಧ ಈಗ ಔಷಧ ಪೂರೈಕೆದಾರರಿಂದ ಲಂಚ ದೂರು. ಬಾಕಿ ಪಾವತಿಗೆ ಹೋರಾಟ. ವೈದ್ಯಕೀಯ ಸರಬರಾಜು ನಿಗಮಕ್ಕೆ ಎಚ್ಚರಿಕೆ

ಬೆಂಗಳೂರು (ಸೆ.11): ರಾಜ್ಯದಲ್ಲಿ ಔಷಧ ಪೂರೈಕೆದಾರರಿಗೆ ಬಾಕಿ ಉಳಿಸಿಕೊಂಡಿರುವ ಕೋಟ್ಯಂತರ ರುಪಾಯಿಗಳನ್ನು ಪಾವತಿಸದಿದ್ದರೆ ಹೋರಾಟ ನಡೆಸುತ್ತೇವೆ. ಔಷಧ ಪೂರೈಕೆಯ ಟೆಂಡರ್‌ನಿಂದ ಹಿಡಿದು ಬಿಲ್‌ ಪಡೆಯುವವರೆಗೂ ಅಧಿಕಾರಿಗಳಿಗೆ ಲಂಚ ನೀಡಬೇಕಾಗಿ ಬಂದಿದೆ ಎಂದು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ (ಕೆಎಸ್‌ಎಂಎಸ್‌ಸಿಎಲ್‌)ದ ವಿರುದ್ಧ ಔಷಧ ಪೂರೈಕೆದಾರ ಕಂಪನಿಗಳು ಆಕ್ರೋಶ ವ್ಯಕ್ತಪಡಿಸಿವೆ. ಬಿಲ್‌ ಪಾವತಿಸಲು ಸಾಧ್ಯವಾಗದಿದ್ದರೆ, ನಾವು ಪೂರೈಸಿರುವ ಔಷಧಗಳನ್ನು ವಾಪಸ್‌ ನೀಡಿ ಎಂದು ಸರಬರಾಜುದಾರರು ಒತ್ತಾಯಿಸಿದ್ದಾರೆ. ಹತ್ತಾರು ವರ್ಷಗಳಿಂದ ಬಾಕಿ ಉಳಿದಿರುವ ಔಷಧ ಬಿಲ್‌ಗಳು, ಇಎಂಡಿ ಮತ್ತು ಭದ್ರತಾ ಠೇವಣಿಯನ್ನು ಹಿಂದಿರುಗಿಸುವಂತೆ ನಿರಂತರವಾಗಿ ಮನವಿ ಮಾಡಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕೋವಿಡ್‌ ಸಂದರ್ಭದಲ್ಲಿ ಪೂರೈಸಿರುವ ಔಷಧಗಳಿಗೂ ಹಣ ಪಾವತಿಸಿಲ್ಲ ಎಂದು ಕೆಎಸ್‌ಎಂಎಸ್‌ಸಿಎಲ್‌ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2021ರ ನ.29ರಂದು ನಿಗಮದಲ್ಲಿ ಇ-ಪಾವತಿ ವ್ಯವಸ್ಥೆ ಜಾರಿಯಾಗಿದ್ದರೂ, ಔಷಧ ಪೂರೈಕೆ ಕಂಪನಿಗಳಿಗೆ ಬಿಲ್‌ ಪಾವತಿಸಿಲ್ಲ. ಟೆಂಡರ್‌ ನಿಯಮಾನುಸಾರ 30 ದಿನದೊಳಗೆ ಔಷಧ ಪೂರೈಕೆಯ ಬಿಲ್‌ ಪಾವತಿ ಮಾಡಬೇಕಿದೆ. ನೆರೆಯ ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳಲ್ಲಿ ಸಕಾಲದಲ್ಲಿ ಬಿಲ್‌ ಪಾವತಿ ಮಾಡಲಾಗುತ್ತಿದೆ.

ಆದರೆ, ನಮ್ಮಲ್ಲಿ ವಿಳಂಬ ಮಾಡಲಾಗುತ್ತಿದೆ. ಟೆಂಡರ್‌ನಿಂದ ಹಿಡಿದು ಬಿಲ್‌ ಚುಕ್ತಾ ಮಾಡಿಸಿಕೊಳ್ಳುವರೆಗೂ ಅಧಿಕಾರಿಗಳಿಗೆ ಲಂಚ ಕೊಡಬೇಕು. ಇಲ್ಲದಿದ್ದರೆ, ಅನಗತ್ಯ ಕಾರಣ ನೀಡಿ ಟೆಂಡರ್‌ ಪ್ರಕ್ರಿಯೆ ನಡೆಯದಂತೆ ನೋಡಿಕೊಳ್ಳುತ್ತಾರೆ. ಎಚ್‌ಐವಿ ಪರೀಕ್ಷಾ ಕಿಟ್‌, ಡಿಸ್ಪೋಸಬಲ್‌ ಮಾಸ್‌್ಕ ಟೆಂಡರ್‌ಗಳನ್ನು ಅಧಿಕಾರಿಗಳು ಅರ್ಹತೆ ಇಲ್ಲದ ಕಂಪನಿಗಳಿಗೆ ನೀಡಿದ್ದಾರೆ. ನಾವು ಪೂರೈಸಿರುವ ಔಷಧಗಳಿಗೆ ಹಣ ಪಾವತಿಸದಿದ್ದರೆ ಬೃಹತ್‌ ಮಟ್ಟದಲ್ಲಿ ಹೋರಾಟ ನಡೆಸುತ್ತೇವೆ ಎಂದು ಸರಬರಾಜುದಾರರು ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ 400 ಹಾಸಿಗೆಯ ಜಯದೇವ ಆಸ್ಪತ್ರೆ
ಹುಬ್ಬಳ್ಳಿಯಲ್ಲಿ 400 ಹಾಸಿಗೆಯ ಆಸ್ಪತ್ರೆ ಮತ್ತು ಬೆಂಗಳೂರಿನ ಮಲ್ಲೇಶ್ವರಂನ ಕೆ.ಸಿ. ಜನರಲ್‌ ಆಸ್ಪತ್ರೆಯಲ್ಲಿ 50 ಹಾಸಿಗೆಯ ಜಯದೇವ ಹೃದ್ರೋಗ ಕೇಂದ್ರಗಳನ್ನು ತೆರೆಯಲಾಗುತ್ತಿದೆ ಎಂದು ಸಂಸ್ಥೆಯ ನಿರ್ದೇಶಕ ಪದ್ಮಶ್ರೀ ಡಾ.ಸಿ.ಎನ್‌. ಮಂಜುನಾಥ್‌ ತಿಳಿಸಿದರು.

ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಶುಕ್ರವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಭಾಗವಾರು ಆಸ್ಪತ್ರೆಗಳನ್ನು ತೆರೆಯುತ್ತಿದ್ದೇವೆ. ಬೆಂಗಳೂರು ಮೈಸೂರು ನಂತರ ಹುಬ್ಬಳ್ಳಿಯಲ್ಲಿ ಈಗ ತರೆಯುತ್ತಿದ್ದು, ಮುಂದೆ ಬೆಳಗಾವಿಯಲ್ಲಿ ತೆರೆಯುವ ಉದ್ದೇಶವಿದೆ. ಆದರೆ ಜಿಲ್ಲಾವಾರು ತೆರೆಯುತ್ತ ಹೋದರೆ ನಿರ್ವಹಣೆ ಸಾಧ್ಯವಾಗದೆ ಬಾಗಿಲು ಮುಚ್ಚಬೇಕಾಗುತ್ತದೆ ಈ ಬಗ್ಗೆ ಸರ್ಕಾರ ಕೂಡ ಚಿಂತನೆ ನಡೆಸಬೇಕು ಎಂದರು.

ಇಸ್ಫೋಸಿಸ್‌ ಸಂಸ್ಥೆಯು 350 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಬೆಂಗಳೂರಿನಲ್ಲಿ ನಿರ್ಮಿಸಿಕೊಟ್ಟಿದ್ದಾರೆ. ಇದರ ಸೇವೆಯನ್ನು ತಲುಪಿಸಬೇಕು. ನಮ್ಮಲ್ಲಿ ಮೊದಲು ಸೇವೆ, ನಂತರ ಉಳಿದದ್ದು. ಬೇರೆ ಆಸ್ಪತ್ರೆಗಳಂತೆ ಹಣ ಪಾವತಿಸಲೇಬೇಕು, ದಾಖಲಾತಿ ಕಡ್ಡಾಯ ಎಂಬುದೆಲ್ಲ ಇಲ್ಲ. ಮೊದಲು ಸೇವೆ ಎಂದು ಅವರು ಹೇಳಿದರು.

Home Remedies: ಪದೇ ಪದೇ ಕಾಡೋ ವಾಕರಿಕೆಗೆ ಇಲ್ಲಿವೆ ಸಿಂಪಲ್ ಮದ್ದು, ಏನ್ಮಾಡಬಹುದು?

ಹೃದಯಾಘಾತದ ಕುರಿತು ಮುಂಜಾಗ್ರತೆ ಅಗತ್ಯ. ಮೇಲ್ನೋಟಕ್ಕೆ ಎಲ್ಲವೂ ಸರಿ ಇರುತ್ತದೆ. ಆದರೆ ಸಮಸ್ಯೆ ತೀವ್ರವಾಗಿರುತ್ತದೆ. ವ್ಯಾಯಾಮದಲ್ಲಿಯೂ ಮಿತಿ ಇರಬೇಕು. ಏಕಾಏಕಿ ವ್ಯಾಯಾಮ ಹೆಚ್ಚಿಸುವುದು, ಹೆಚ್ಚು ತಿಂದಿದ್ದೇನೆ ಎಂದು ಹೆಚ್ಚು ಬಾರ ಎತ್ತುವುದು ಮಾಡಬಾರದು. ಕಾಲಕಾಲಕ್ಕೆ ಪರೀಕ್ಷೆಗೆ ಒಳಗಾಗಬೇಕು, ಮುಖ್ಯವಾಗಿ ಜಿಮ್‌ ಸೇರುವ ಮುನ್ನ ಪರೀಕ್ಷೆ ಮಾಡಿಸಿಕೊಂಡರೆ ಒಳ್ಳೆಯದು ಎಂದು ಅವರು ತಿಳಿಸಿದರು.

Gadag; ಔಷಧ ಉಗ್ರಾಣಕ್ಕೆ ಹೊಕ್ಕ ಮಳೆ ನೀರು, ಅಂದಾಜು 4 ಕೋಟಿ ರೂ ಮೌಲ್ಯದ ಔಷಧಿ ಜಲಾವೃತ

ಹಿಂದೆ ಮಕ್ಕಳು ತಮ್ಮ ಪೋಷಕರನ್ನು ಆಸ್ಪತ್ರೆಗೆ ಕರೆತರುತ್ತಿದ್ದರು. ಆದರೆ ಇಂದು ತಂದೆ, ತಾಯಂದಿರು ಮಕ್ಕಳನ್ನು ಆಸ್ಪತ್ರೆಗೆ ಕರೆತರುತ್ತಿದ್ದಾರೆ. ಪಟ್ಟಣ ಹಾಗೂ ಹಳ್ಳಿಯ ಜೀವನ ಶೈಲಿ ಒಂದೇ ಆಗಿದೆ. ಹೃದಯ ಸಮಸ್ಯೆ ಅನುವಂಶೀಯತೆಯಿಂದಲೂ ಬರುತ್ತದೆ. ತಂದೆ- ತಾಯಿ ಸುಮಾರು 80 ವರ್ಷ ಯಾವುದೇ ಕಾಯಿಲೆ ಇಲ್ಲದೆ ಬದುಕಿದರೆ ಅದೂ ಮಕ್ಕಳಿಗೆ ಕೊಡುವ ಭಾಗ್ಯ. ಒತ್ತಡ ಈಗ ಒಂದು ಹೊಸ ಧೂಮಪಾನವಾಗಿದೆ. ಅಳತೆ ಮೀರಿದ ಅಪೇಕ್ಷೆಗಳನ್ನೇ ಒತ್ತಡ ಎಂದು ಕರೆಯುತ್ತೇವೆ. ಚಿಕ್ಕ ಮಕ್ಕಳಿಗೆ ನಿದ್ರೆ ಇಲ್ಲದೆ ಒತ್ತಡ ನೀಡುತ್ತಿದ್ದೇವೆ. ಇಂದಿನ ಜನರಿಗೆ ತಾಳ್ಮೆ ಇಲ್ಲದಂತಾಗಿದೆ. ತುಂಬ ಕೋಪ ಮಾಡಿಕೊಳ್ಳುವುದು ರಕ್ತದ ಒತ್ತಡಕ್ಕೆ ಕಾರಣವಾಗುತ್ತದೆ ಎಂದರು.