ಬೆಂಗಳೂರು(ಮೇ.28): ರಾಜ್ಯದಲ್ಲಿ ಮಿಡತೆ ಹಾವಳಿ ಹೆಚ್ಚಾಗಿದ್ದರಿಂದ ರೈತರು ಸಂಕಷ್ಟಗಳನ್ನ ಎದುರಿಸುವಂತಾಗಿದೆ. ಹೌದು, ಬೆಳೆದ ಬೆಳೆಗಳ ಮೇಲೆ ಮಿಡತೆಗಳು ದಾಳಿ ಮಾಡುವುದದರಿಂದ ಫಸಲಿನ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹೀಗಾಗಿ ಮಿಡತೆ ಹಾವಳಿ ಹೆಚ್ಚಾದ ಪರಿಣಾಮ ರಾಜ್ಯ ಸರ್ಕಾರ‌ ಇದೀಗ ಎಚ್ಚೆತ್ತುಕೊಂಡಿದೆ.

ಇಂದು(ಗುರುವಾರ) ವಿಕಾಸಸೌಧದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಬೆಳೆಗಳ ಮೇಲೆ ಮಿಡತೆ ದಾಳಿ ಹೆಚ್ಚಾದ ಪರಿಣಾಮ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಕೃಷಿ ಇಲಾಖೆ ಮುಂದಾಗಿದೆ. ಹೀಗಾಗಿ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು, ಕೃಷಿ ವಿವಿಗಳ ಸಂಶೋಧಕರು ಮತ್ತು ಕೀಟ ಶಾಸ್ತ್ರಜ್ಞರು ಭಾಗವಹಿಸಲಿದ್ದಾರೆ.

ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ: ಲಾಕ್‌ಡೌನ್‌ ಮುಂದುವರಿಕೆ ಬೇಕಾ..?ಬೇಡ್ವಾ..?

ಮಿಡತೆ ಹಾವಳಿ ಸಂಬಂಧ ಕೃಷಿ ಸಚಿವ ಬಿ.ಸಿ.ಪಾಟೀಲ್‌ ಅವರಿಗೆ ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರು ಮಿಡತೆ ಸಮಸ್ಯೆ ಪರಿಹರಿಸಲು ಕೂಡಲೇ ಕ್ರಮ ಕೈಗೊಳ್ಳಲು ಪತ್ರ ಬರೆದಿದ್ದಾರೆ. ಇನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೂಡ ಸರ್ಕಾರ ರಾಜ್ಯದಲ್ಲಿ ರೈತರಿಗೆ ತೊಂದರೆಯಾಗದಂತೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ.