ಸರಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್ |ಕ್ಯಾನ್ಸರ್ನಿಂದ ಬಳಲುತ್ತಿದ್ದ ಸ್ನೇಹಿತನ ಚಿಕಿತ್ಸೆಗಾಗಿ ಕಳ್ಳತನ
ಬೆಂಗಳೂರು(ಜ.05): ಅನಾರೋಗ್ಯಕ್ಕೀಡಾಗಿದ್ದ ಸ್ನೇಹಿತನ ಚಿಕಿತ್ಸೆಗಾಗಿ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿ.ವಿ.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯದ ಮಳವಳ್ಳಿ ಮೂಲದ ಮಂಜುನಾಥ್ ಮತ್ತು ಮೈಸೂರಿನ ನರಸೀಪುರ ನಿವಾಸಿ ಮರಿಸ್ವಾಮಿ ಬಂಧಿತರು. ಆರೋಪಿಗಳಿಂದ ಒಂದು ಚಿನ್ನದ ಸರ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಇತ್ತೀಚೆಗೆ ವಿವಿಪುರಂನ ಸಜ್ಜನ್ರಾವ್ ರಸ್ತೆ ಬಳಿ ಆರೋಪಿಗಳಿಬ್ಬರು ಅನುಮಾನಾಸ್ಪದವಾಗಿ ನಿಂತಿದ್ದರು. ಇದೇ ವೇಳೆ ಗಸ್ತಿನಲ್ಲಿದ್ದ ಎಎಸ್ಐ ಶಿವಕುಮಾರ್ ವಿಚಾರಣೆ ನಡೆಸಿದ್ದು, ಗೊಂದಲದ ಹೇಳಿಕೆ ನೀಡಿದ್ದರು.
ಏಪ್ರಿಲ್ನಿಂದ ಮತ್ತಷ್ಟು ತೆರಿಗೆ ಭಾರ: ಶೇ.2ರಷ್ಟು ಹೊಸದಾಗಿ ಭೂ ಸಾರಿಗೆ ಉಪ ಕರ
ಅನುಮಾನಗೊಂಡು ಠಾಣೆಗೆ ಕರೆದೊಯ್ದು ಪ್ರಶ್ನಿಸಿದಾಗ ಸ್ನೇಹಿತ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಆತನ ಚಿಕಿತ್ಸೆಗಾಗಿ ಸರಗಳ್ಳತನ ಮಾಡುತ್ತಿರುವುದಾಗಿ ಹೇಳಿಕೆ ನೀಡಿದ್ದರು. ಆದರೆ, ಈ ಬಗ್ಗೆ ಯಾವುದೇ ದಾಖಲೆಗಳು ಇಲ್ಲ
ಚಾಮರಾಜನಗರ ಜಿಲ್ಲೆಯಲ್ಲಿ ಚಿನ್ನದ ಸರ ಕಳವು ಮಾಡಿ, ಬೆಂಗಳೂರಿನಲ್ಲಿ ಮಾರಾಟಕ್ಕೆ ಸಿದ್ಧತೆ ನಡೆಸಿದ್ದರು ಎಂಬುದು ಗೊತ್ತಾಗಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 5, 2021, 7:56 AM IST