ಕಾವೇರಿ ಕಣಿವೆ, ಕರಾವಳಿ ಮತ್ತು ಕಾಫಿನಾಡಿನಲ್ಲಿ ಭಾರಿ ಮಳೆ: ಯಲ್ಲೋ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

ರಾಜ್ಯದ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಮಂಡ್ಯ ಸೇರಿದಂತೆ ಕಾವೇರಿ ಕಣಿವೆ ಹಾಗೂ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ.

Meteorological Department declared yellow alert heavy rain in Kaveri Valley and Chikkamagaluru sat

ಬೆಂಗಳೂರು (ನ.04): ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ (ನವೆಂಬರ್‌ 5 ಮತ್ತು ನವೆಂಬರ್‌ 6ರಂದು) ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ, ಕರಾವಳಿಯ ಎಲ್ಲಾ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ  ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ  ಭಾರಿ ಮಳೆಯಾಗುವ ಸಾಧ್ಯತೆ ಇದೆ.  ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ  ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ತಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಈ ವೇಳೆ ಕೊಡಗು ಸೇರಿದಂತೆ ಗುಡ್ಡ ಕುಸಿತದ ಸ್ಥಳಗಳಲ್ಲಿ ಇರುವವರು ಹಾಗೂ ನದಿ ಪಾತ್ರದ ಸ್ಥಳಗಳಲ್ಲಿ ಇರುವವರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಬೆಂಗಳೂರಿನ ಮುಸ್ಲಿಂ ಏರಿಯಾದಲ್ಲಿ 2 ದಿನ ನಿಷೇಧಾಜ್ಞೆ ಜಾರಿ: ಪೊಲೀಸ್‌ ಕಮಿಷನರ್ ದಯಾನಂದ್‌ ಆದೇಶ

ಬೆಂಗಳೂರಿನಲ್ಲಿ ಹಗುರ ಮಳೆ: ಬೆಂಗಳೂರಿನಲ್ಲಿಯೂ ಕೂಡ ಮುಂದಿನ 2 ದಿನಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ  ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ತುಂತುರುವಿನಿಂದ ಸಾಧಾರಣ ಮಳೆ ಬರುವ ಸಾಧ್ಯತೆ : ಹವಾಮಾನ ಇಲಾಖೆ

ಕೊಡಗು ಭಾಗದಲ್ಲಿ ಮಳೆ ಮಾಹಿತಿ: ಇನ್ನು ಶುಕ್ರವಾರದಿಂದ ಶನಿವಾರ ಮಧ್ಯಾಹ್ನವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ  ಒಣಹವೆ ಇತ್ತು. ಭಾಗಮಂಡಲ (ಕೊಡಗು ಜಿಲ್ಲೆ) 4 ಸೆಂ.ಮೀ, ಹಾರಂಗಿ (ಕೊಡಗು ಜಿಲ್ಲೆ), ಸಾಲಿಗ್ರಾಮ (ಮೈಸೂರು ಜಿಲ್ಲೆ) ತಲಾ 3 ಸೆಂ.ಮೀ, ಪುತ್ತೂರು (ದಕ್ಷಿಣ ಕನ್ನಡ ಜಿಲ್ಲೆ), ಮಡಿಕೇರಿ (ಕೊಡಗು ಜಿಲ್ಲೆ), ಸರಗೂರು (ಮೈಸೂರು ಜಿಲ್ಲೆ) ತಲಾ 2 ಸೆಂ.ಮೀ. ಹಾಗೂ ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ), ಮೂರ್ನಾಡು, ನಾಪೋಕ್ಲು, ವಿರಾಜಪೇಟೆ (ಕೊಡಗು ಜಿಲ್ಲೆ) ತಲಾ 1 ಸೆಂಟಿ ಮೀಟರ್‌ ಮಳೆಯಾಗಿದೆ.

Latest Videos
Follow Us:
Download App:
  • android
  • ios