ಆಳಂದ ತಾಲೂಕಿನ ಚಿಂಚನಸೂರು ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಸಣ್ಣ ಪ್ರಮಾಣದ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆ ದಾಖಲಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಲಬುರಗಿ (ಸೆ.12): ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ 8.17 ಗಂಟೆ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆಯಲ್ಲಿ ದಾಖಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸ್ಥಳಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ತಹಸೀಲ್ದಾರ್‌, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿಕೆ ನೀಡಿದ್ದು, ಭೂಕಂಪನ ಘಟನೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದೊಂದಿಗೆ ಸಂಪರ್ಕದಲ್ಲಿದ್ದೇನೆಂದು ಹೇಳಿದ್ದಾರೆ.

ಭೂಕಂಪನವು ಸಣ್ಣ ಪ್ರಮಾಣದ್ದಾಗಿದ್ದು, ಸಾರ್ವಜನಿಕರು ಹಾಗೂ‌ ಚಿಂಚನಸೂರು ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯ ಗ್ರಾಮಸ್ಥರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು‌ ಸಚಿವ ಖರ್ಗೆ ಅವರು ವಿನಂತಿಸಿದ್ದಾರೆ.

'ಭೂಮಿಯು ಸ್ವಲ್ಪ ನಡುಗಿದಂತೆ ಅನುಭವವಾಯ್ತು. ಆದರೆ ಯಾವುದೇ ಅನಾಹುತವಾಗಿಲ್ಲ ಎಂದು ಚಿಂಚನಸೂರು ಗ್ರಾಮಸ್ಥರು ಪ್ರತಿಕ್ರಿಯಿಸಿದ್ದಾರೆ. ಇದೇ ರೀತಿ, ಸುತ್ತಲಿನ ಗ್ರಾಮಗಳಲ್ಲೂ ಈ ರೀತಿಯ ಅನುಭವಗಳಾಗಿವೆ.

ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ 8.17 ಗಂಟೆ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆಯಲ್ಲಿ ದಾಖಲಾಗಿದೆ.