Asianet Suvarna News Asianet Suvarna News

ಐದು ವರ್ಷ ಪಿಎಫ್​ಐ ಬ್ಯಾನ್: ನಿಷೇಧ ಕ್ರಮವನ್ನು ಸ್ವಾಗತಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹಿನ್ನೆಲೆ ನಿಷೇಧ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ ಮಾಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿರುವ ನಿರ್ಧಾರವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ವಾಗತಿಸಿದ್ದಾರೆ.

minister araga jnanendra reaction on banning pfi for 5 years gvd
Author
First Published Sep 28, 2022, 8:26 AM IST

ಬೆಂಗಳೂರು (ಸೆ.28): ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹಿನ್ನೆಲೆ ನಿಷೇಧ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ ಮಾಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿರುವ ನಿರ್ಧಾರವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ವಾಗತಿಸಿದ್ದಾರೆ. ಕೇಂದ್ರ ಸರಕಾರ ಮಹತ್ವದ ಬೆಳವಣಿಗೆಯೊಂದರಲ್ಲಿ, ಪಿಎಫ್‌ಐ ಹಾಗೂ ಅದರ ಇತರ ಸಹವರ್ತಿ ಸಂಸ್ಥೆಗಳನ್ನು, ಐದು ವರ್ಷಗಳ ವರೆಗೆ UAPA ಕಾಯಿದೆ ಅಡಿಯಲ್ಲಿ ನಿಷೇಧಿಸಿದೆ. ಇದನ್ನು ನಾನು ಸ್ವಾಗತಿಸುತ್ತೇನೆ. 

ದೇಶದಲ್ಲಿ ಕೋಮು ಸೌಹಾರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ, ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹಿನ್ನೆಲೆ ನಿಷೇಧ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ ಮಾಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿ ಹಾಗೂ ಅದರ ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ. ಕೇಂದ್ರ ಸರಕಾರ ಬಲವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ, ನಿಷೇಧ ಕ್ರಮ ಕೈಗೊಂಡಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

PFI Ban: 5 ವರ್ಷಗಳ ಕಾಲ ನಿಷೇಧ; ಕೇಂದ್ರ ಸರ್ಕಾರದ ಮಾಸ್ಟರ್‌ ಸ್ಟ್ರೋಕ್‌

ಅಲರ್ಟ್ ಆದ ಬೆಂಗಳೂರು ಸಿಟಿ ಪೊಲೀಸರು: ದೇಶದಲ್ಲಿ ಪಿಎಫ್ಐ ಬ್ಯಾನ್ ಹಿನ್ನೆಲೆಯಲ್ಲಿ ಬೆಂಗಳೂರು ಸಿಟಿ ಪೊಲೀಸರು ಅಲರ್ಟ್ ಆಗಿದ್ದು, ಕೆಜಿ ಹಳ್ಳಿ, ಡಿಜೆ ಹಳ್ಳಿ, ಬ್ಯಾಟರಾಯನಪುರ, ಪುಲಕೇಶಿನಗರ, ಶಿವಾಜಿ ನಗರ, ಜೆ‌ಜೆ ನಗರ, ತಲಘಟ್ಟಪುರ ಸೇರಿದಂತೆ ನಗರದ ಸೂಕ್ಷ್ಮ ಪ್ರದೇಶಗಳುಳ್ಳ ಜಾಗಗಳಲ್ಲಿ ಪೊಲೀಸ್ ಗಸ್ತು ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯನ್ನು ವಹಿಸಲಾಗಿದ್ದು, ಪ್ರತೀ ಏರಿಯಾದಲ್ಲೂ ಪೊಲೀಸರು ಗಸ್ತು ತಿರುಗಲಿದ್ದಾರೆ. ಈಬಗ್ಗೆ ಆಯಾ ಡಿಸಿಪಿಗಳಿಗೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೂಚನೆ ನೀಡಿದ್ದು, ಏಷ್ಯಾನೆಟ್ ಸುವರ್ಣನ್ಯೂಸ್‌ಗೂ ಸಹ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.



ಇನ್ನು ಕೇಂದ್ರ ಸರ್ಕಾರದಿಂದ ಪಿಎಫ್‌ಐ ಬ್ಯಾನ್ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯಿಸಿದ್ದು, ಕೆಲ ಭಯೋತ್ಪಾದನಾ ಕೃತ್ಯದಲ್ಲಿ ಪಿಎಫ್‌ಐ ಭಾಗಿಯಾಗಿತ್ತು. ಪಿಎಫ್‌ಐ ಬ್ಯಾನ್ ಸ್ವಾಗತರ್ಹ ವಿಚಾರ, ದೇಶದಲ್ಲಿ ಕೆಲ ಆತಂಕದ ಘಟನೆ ನಡೆಯುವ ಮಾಹಿತಿ ಇತ್ತು. ಅದಕ್ಕೆ ಎನ್‌ಐಎ ದಾಳಿ ಮಾಡಿತ್ತು ಎಂದು ತಿಳಿಸಿದ್ದಾರೆ.

ಬ್ಯಾನ್‌ ಯಾಕೆ?: ಇಸ್ಲಾಂ ಸಂಘಟನೆಯ ವಿರುದ್ಧ ದೇಶದ  ಹಲವು ರಾಜ್ಯಗಳಲ್ಲಿ ಎನ್‌ಐಎ ರೇಡ್‌ ನಡೆಸಿತ್ತು. ಅಲ್ಲದೆ, PFI ಯೊಂದಿಗೆ ಸಂಬಂಧ ಹೊಂದಿರುವ 200 ಕ್ಕೂ ಹೆಚ್ಚು ಜನರನ್ನು ಬಂಧಿಸಿದ ನಂತರ ಕೇಂದ್ರ ಸರ್ಕಾರ ಈ ಅಧಿಸೂಚನೆ ಹೊರಡಿಸಿದೆ. ಉತ್ತರ ಪ್ರದೇಶ, ಕರ್ನಾಟಕ, ಗುಜರಾತ್, ದೆಹಲಿ, ಮಹಾರಾಷ್ಟ್ರ, ಅಸ್ಸಾಂ ಮತ್ತು ಮಧ್ಯಪ್ರದೇಶದಲ್ಲಿ ರಾತ್ರೋರಾತ್ರಿ ಹಲವರನ್ನು ಬಂಧಿಸಲಾಗಿತ್ತು. ಇದಕ್ಕೂ ಮುನ್ನ, ಸೆಪ್ಟೆಂಬರ್ 22 ರಂದು, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನೇತೃತ್ವದ ಬಹು-ಏಜೆನ್ಸಿ ತಂಡಗಳು ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸಿದ ಆರೋಪದ ಮೇಲೆ 15 ರಾಜ್ಯಗಳಲ್ಲಿ PFI ನ 106 ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಿದವು.

Follow Us:
Download App:
  • android
  • ios