ವೀಕೆಂಡ್ ಕರ್ಫ್ಯೂ ಮುಂದುವರಿಯುತ್ತಾ? ಇಲ್ಲಾ? ಬೊಮ್ಮಾಯಿ ಹೇಳಿದ್ದು ಹೀಗೆ
ವೀಕೆಂಡ್ ಕರ್ಫ್ಯೂ ಮುಂದುವರಿಸಬೇಕೋ? ಬೇಡವೋ ಎನ್ನುವ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ...
ಬೆಂಗಳೂರು, (ಏ.25): ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಕಟ್ಟಿಹಾಕಲು ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದೆ. ಆದ್ರೂ ಸಹ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ.
ಇನ್ನು ವೀಕೆಂಡ್ ಕರ್ಫ್ಯೂ ಮುಂದುವರಿಕೆ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ವೀಕೆಂಡ್ ಕರ್ಫ್ಯೂ ಮುಂದುವರಿಸುವ ಬಗ್ಗೆ ಸದ್ಯಕ್ಕೆ ಯಾವುದೇ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಸದ್ಯ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದೆ. ಕೇಂದ್ರ ಸರ್ಕಾರ ರಾಜ್ಯದ ಆಕ್ಸಿಜನ್ ಪಾಲನ್ನ ಹೆಚ್ಚಾಸಿದೆ, 300 ಮೆಟ್ರಿಕ್ ಟನ್ಗಳಿಂದ 800 ಮೆಟ್ರಿಕ್ ಟನ್ ಆಕ್ಸಿಜನ್ನನ್ನು ರಾಜ್ಯಕ್ಕೆ ಹೆಚ್ಚುವರಿಯಾಗಿ ನೀಡಲು ಕೇಂದ್ರ ಒಪ್ಪಿದೆ. ನಿನ್ನೆ (ಶನಿವಾರ) ಸಂಜೆ ಮುಖ್ಯಮಂತ್ರಿಗಳ ಜೊತೆ ಈ ಸಂಬಂಧ ಸಭೆ ನಡೆಸಲಾಯಿತು, ಈ ವೇಳೆಯೇ ಕೇಂದ್ರ ಸರ್ಕಾರದಿಂದ ಭರವಸೆ ಸಿಕ್ಕಿರುವ ಬಗ್ಗೆ ಸಿಎಂ ಮಾಹಿತಿ ನೀಡಿದರು ಎಂದು ಹೇಳಿದರು..
ಕರ್ನಾಟಕದಲ್ಲಿ ಮತ್ತಷ್ಟು ಟಫ್ ರೂಲ್ಸ್: ಮುಂಬೈ ಮಾದರಿಯಲ್ಲಿ ಕ್ರಮ!
ನಿನ್ನೆ (ಶನಿವಾರ) ನಡೆದ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ. ಈಗಿರುವ ಮಾರ್ಗಸೂಚಿಗಳೇ ಮುಂದುವರಿಯಲಿವೆ, ರೆಮಿಡಿಸಿವರ್ ಸಮಸ್ಯೆ ಬಗೆಹರಿಸಿದ್ದೇವೆ ಎಂದು ತಿಳಿಸಿದರು.
ಕೋವ್ಯಾಕ್ಸಿನ್, ಕೋವಿಡ್ ಶೀಲ್ಡ್ ಲಸಿಕೆ ಎರಡನೇ ಡೋಸ್ ಕೊರತೆ ವಿಚಾರವಾಗಿ ಮಾತನಾಡಿ ,ಇದು ನಮ್ಮ ಗಮನಕ್ಕೆ ಬಂದಿದೆ. ಈ ಸಮಸ್ಯೆ ಕೂಡ ಬಗೆಹರಿಯಲಿದೆ. ಮೇ 1 ರಿಂದ 18 ವರ್ಷದ ಮೇಲ್ಪಟ್ಟವರಿಗೆ ಮೊದಲನೇ ಡೋಸ್ ವಿತರಣೆಯಾಗಲಿದೆ. 45 ನೇ ವರ್ಷ ವಯಸ್ಕರಿಗೆ ಎರಡನೇ ಹಂತದ ಲಸಿಕೆ ನೀಡುತ್ತೇವೆ. ರೆಮ್ಡಿಸಿವರ್ ಇಂಜೆಕ್ಷನ್ ಕೂಡ ಎಲ್ಲಾ ಜಿಲ್ಲೆಗಳಿಗೆ ಪೂರೈಕೆ ಮಾಡ್ತೇವೆ ಎಂದರು.