Asianet Suvarna News Asianet Suvarna News

ತಮಿಳುನಾಡು ಸರ್ಕಾರದ ನಡೆಗೆ ಬಸವರಾಜ್ ಬೊಮ್ಮಾಯಿ ಬೇಸರ

* ತಮಿಳುನಾಡು ಸರ್ಕಾರದ ನಡೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಸಮಾಧಾನ
* ರಾಜಕೀಯ ಸಾಹಸ ಪ್ರದರ್ಶನ ಮಾಡುತ್ತಿದೆ ಎಂದ ಬಸವರಾಜ್ ಬೊಮ್ಮಾಯಿ
* ಕಾನೂನು ಹೋರಾಟವನ್ನು ಮುಂದುವರಿಸುವ ಎಚ್ಚರಿಕೆ

Minister basavaraj bommai Un Happy On Tamilnadu Gvt rbj
Author
Bengaluru, First Published Jul 4, 2021, 10:35 PM IST

ಬೆಂಗಳೂರು, (ಜುಲೈ.04) : ತಮಿಳುನಾಡು ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಸರ್ಕಾರ ಸಣ್ಣ ವಿಷಯಗಳನ್ನು ದೊಡ್ಡದಾಗಿ ಬಿಂಬಿಸುವ ಮೂಲಕ ರಾಜಕೀಯ ಸಾಹಸ ಪ್ರದರ್ಶನ ಮಾಡುತ್ತಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು (ಭಾನುವಾರ) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮಿಳುನಾಡು ನೀರಿನ ವಿಷಯವಾಗಿ ಯಾವಾಗಲೂ ಕರ್ನಾಟಕದೊಂದಿಗೆ ತಕರಾರು ಮಾಡುತ್ತಲೇ ಬಂದಿದೆ.ಅದು ಕಾವೇರಿ ನದಿನೀರು ಹಂಚಿಕೆ ಇರಬಹುದು, ಕಾವೇರಿ ಕಣಿವೆಯಲ್ಲಿ ನಡೆಯುತ್ತಿರುವ ನೀರಾವರಿ ಯೋಜನೆಗಳೇ ಆಗಿರಬಹುದು. ಅವುಗಳ ಬಗ್ಗೆ ತಮಿಳುನಾಡು ತಕರಾರು ಮಾಡುತ್ತಲೇ ಬಂದಿದೆ. ಕಾವೇರಿ ನ್ಯಾಯ ಮಂಡಳಿ ರಚನೆ ಆದ ಮೇಲೆ ಅವರಿಗೆ ಕಷ್ಟವಾಗುತ್ತಿದೆ ಎಂದು ಹೇಳಿದರು.

ಮೇಕೆದಾಟು; BSYಗೆ ಸ್ಟಾಲಿನ್ ಉತ್ತರ, ಮತ್ತೆ ತಮಿಳುನಾಡು ಕ್ಯಾತೆ! 

ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕೂ ಅನುಕೂಲವಾಗುತ್ತದೆ. ತಮಿಳುನಾಡು ರಾಜ್ಯಕ್ಕೂ ಅನುಕೂಲ ಆಗುತ್ತದೆ. ಅವರ ಪಾಲಿನ ನೀರು ಹರಿಸಲಾಗುವುದು. ಅದಕ್ಕೆಎಲ್ಲಿಯೂ ತಡೆ ಉಂಟಾಗುವುದಿಲ್ಲ. ಹೆಚ್ಚುವರಿ ನೀರನ್ನು ಮಾತ್ರ ಕರ್ನಾಟಕ ಬಳಕೆ ಮಾಡುತ್ತದೆ. ಉಭಯ ರಾಜ್ಯಗಳಿಗೆ ಯೋಜನೆಯಿಂದ ಲಾಭವಾಗುತ್ತದೆ. ಆದರೂ ಕೂಡ ಈ ಯೋಜನೆಯನ್ನು ತಮಿಳುನಾಡು ಸರ್ಕಾರ ವಿರೋಧಿಸುತ್ತಿದೆ ಎಂದರು.

ಅದೇ ರೀತಿ ಮಾರ್ಕಂಡೇಯ ಯೋಜನೆಗೆ ತಮಿಳುನಾಡಿನ ತಕರಾರು ಮೊದಲಿನಿಂದಲೂ ಇದೆ. ಅಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದೊಂದು ರಾಜಕೀಯ ಸಾಹಸ. ಸಣ್ಣ ವಿಷಯಗಳನ್ನು ದೊಡ್ಡದು ಮಾಡಿ ರಾಜಕೀಯ ಸಾಹಸ ಪ್ರದರ್ಶನ ಮಾಡಲಾಗುತ್ತಿದೆ. ರಾಜಕೀಯಕ್ಕೆ ಏನು ಬೇಕು ಅದನ್ನು ತಮಿಳುನಾಡು ಮಾಡುತ್ತಿದೆ. ಆದರೆ ನಾವು ಕಾನೂನಾತ್ಮಕವಾಗಿ ಸರಿಯಾಗಿ ಇದ್ದೇವೆ. ಕಾನೂನು ಹೋರಾಟವನ್ನು ಮುಂದುವರಿಸುತ್ತೇವೆ ಎಂದು ತಿಳಿಸಿದರು.

Follow Us:
Download App:
  • android
  • ios