ಬೆಂಗಳೂರು :  ಹಿಂದೆ ಬಿಜೆಪಿ ಜತೆಗೆ ರಚಿಸಿದ್ದ ಮೈತ್ರಿಯೇ ಚೆನ್ನಾಗಿತ್ತು ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ಹೇಳಿದ್ದಾರೆ.

2006ರಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ಉತ್ತಮವಾಗಿ ಆಡಳಿತ ನೀಡಿದ್ದೇವೆ. ಜನರು ಸಹ ಮೆಚ್ಚಿಕೊಂಡಿದ್ದರು. ಮೈತ್ರಿ ವಿಷಯದಲ್ಲಿ ಕಾಂಗ್ರೆಸ್ಸಿಗಿಂತ ಬಿಜೆಪಿ ಜೊತೆಗಿನ ಮೈತ್ರಿಯೇ ಉತ್ತಮವಾಗಿದೆ ಎಂದರು.

ಈಗಿನ ಕಾಂಗ್ರೆಸ್‌ ಜತೆಗಿನ ಮೈತ್ರಿ ಸರ್ಕಾರದಲ್ಲಿ ಹೆಜ್ಜೆಹೆಜ್ಜೆಗೂ ತಕರಾರು ಮಾಡಲಾಗುತ್ತಿದೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂಬುದಾಗಿ ಹೇಳಬೇಕಾದರೆ ಅವರಿಗೆ ಎಷ್ಟು ನೋವಿರಬೇಕು ಎಂಬುದನ್ನು ಜನರು ಗಮನಿಸಬೇಕು. 

ಕಾಂಗ್ರೆಸ್‌ ಮುಖಂಡರು ಇದೇ ರೀತಿ ಮಾತನಾಡುತ್ತಿದ್ದರೆ ಮುಂದಿನ ಪರಿಣಾಮ ಬೇರೆಯೇ ಆಗಿರುತ್ತದೆ ಎಂದು ಎಚ್ಚರಿಕೆ ನೀಡಿದರು.