Minister Darshanapur statement: ಯಾದಗಿರಿಯಲ್ಲಿ ಮಾತನಾಡಿದ ಸಚಿವ ದರ್ಶನಾಪುರ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ ಮತ್ತು ಸಿದ್ದರಾಮಯ್ಯನವರೇ ಐದು ವರ್ಷ ಅಧಿಕಾರ ಪೂರ್ಣಗೊಳಿಸಲಿದ್ದಾರೆ.. ಬೇಕಿದ್ದರೆ ಸ್ಟಾಂಪ್ ಪೇಪರ್ ಮೇಲೆ ಬರೆದುಕೊಡುವುದಾಗಿ ಹೇಳಿದರು
ಯಾದಗಿರಿ (ಅ.13): ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗುವುದಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಐದು ವರ್ಷ ಅಧಿಕಾರ ಪೂರೈಸುತ್ತಾರೆ. ಬೇಕಿದ್ದರೆ, ಸ್ಟಾಂಪ್ ಪೇಪರ್ ಮೇಲೆ ಬರೆದು ಕೊಡುತ್ತೀನಿ ಎಂದು ಸಚಿವ ದರ್ಶನಾಪುರ ತಿಳಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಸಿಎಂ ಬದಲಾವಣೆ ಕುರಿತು ಪ್ರತಿಕ್ರಿಯಿಸಿ, ಐದು ವರ್ಷ ಸಿಎಂ ಆಗಿ ನಾನೇ ಇರುತ್ತೇನೆ ಎಂದು ಸಿದ್ದರಾಮಯ್ಯನವರೇ ಹೇಳಿದ್ದಾರೆ, ಡಿಕೆಶಿ ಕೂಡ ಇದೇ ಮಾತನ್ನು ಹೇಳಿದ್ದಾರೆ. ಹೈಕಮಾಂಡ್ ಕೂಡ ಎಲ್ಲಿಯೂ ಸಿಎಂ ಬದಲಾವಣೆ ಮಾಡುವುದಾಗಿ ಹೇಳಿಲ್ಲ ಎಂದರು.
ಇದನ್ನೂ ಓದಿ: ನಮ್ಮ ಸರ್ಕಾರ ಬಂದ್ರೆ ನೂರಕ್ಕೆ ನೂರರಷ್ಟು ಆರೆಸ್ಸೆಸ್ ಬ್ಯಾನ್ ಮಾಡ್ತೇವೆ: ಎಂ ಲಕ್ಷ್ಮಣ್
ಸಚಿವ ಸಂಪುಟ ಪುನರ್ ರಚನೆ ಕುರಿತು ಪ್ರತಿಕ್ರಿಯಿಸಿ, ಸಂಪುಟ ಪುನಾರಚನೆ ಸಿಎಂ ಪರಮಾಧಿಕಾರ. ಸಿಎಂ ಅವರು ಯಾವಾಗ ಬೇಕಾದರೂ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದರು.
ಇದನ್ನೂ ಓದಿ: ಬುದ್ಧ, ಬಸವ, ಅಂಬೇಡ್ಕರ್ ತತ್ವ ಅನುಷ್ಠಾನಗೊಳಿಸಲು ಸಿದ್ದರಾಮಯ್ಯ ಪ್ರಯತ್ನ
