Asianet Suvarna News Asianet Suvarna News

ರಾಜ್ಯ ಸರ್ಕಾರದಿಂದ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಒತ್ತು: ದಿನೇಶ್ ಗುಂಡೂರಾವ್

ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ವಿಪಕ್ಷ ಕಂಗೆಟ್ಟಿದ್ದು, ಮುಂದಿನ ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಾಶ್ವತ ಯುವನಿಧಿಗೆ ಚಾಲನೆ ನೀಡಲಾಗುವುದು. ಕಾರ್ಯಕರ್ತರು ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕ್ ಪಂಚಾಯಿತಿ ಹಾಗೂ ಲೋಕಸಭಾ ಚುನಾವಣೆಗೆ ಸಿದ್ಧರಾಗಬೇಕು ಎಂದ ಸಚಿವ ದಿನೇಶ್‌ ಗುಂಡೂರಾವ್‌

Minister Dinesh Gundu Rao Talks Corruption Free Administration in Karnataka grg
Author
First Published Dec 23, 2023, 4:00 AM IST

ಮೂಲ್ಕಿ(ಡಿ.23): ರಾಜ್ಯ ಸರ್ಕಾರ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಒತ್ತು ನೀಡುತ್ತಿದ್ದು, ಕಾರ್ಯಕರ್ತರು ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಕಾರ್ಯ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ರಾಜ್ಯ ಆರೋಗ್ಯ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮೂಲ್ಕಿ ತಾಲೂಕು ಭೇಟಿ ಸಂದರ್ಭ ಹಳೆಯಂಗಡಿಯ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಆಗಮಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

‘ಇಂಡಿಯಾ’ ಒಕ್ಕೂಟ ದೇಶದ ಕ್ಷಮೆ ಯಾಚಿಸಲಿ: ಶಾಸಕ ವೇದವ್ಯಾಸ್‌ ಕಾಮತ್‌

ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ವಿಪಕ್ಷ ಕಂಗೆಟ್ಟಿದ್ದು, ಮುಂದಿನ ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಾಶ್ವತ ಯುವನಿಧಿಗೆ ಚಾಲನೆ ನೀಡಲಾಗುವುದು. ಕಾರ್ಯಕರ್ತರು ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕ್ ಪಂಚಾಯಿತಿ ಹಾಗೂ ಲೋಕಸಭಾ ಚುನಾವಣೆಗೆ ಸಿದ್ಧರಾಗಬೇಕು ಎಂದರು. ಮೂಲ್ಕಿ ಬ್ಲಾಕ್ ಕಾಂಗ್ರೆಸ್‌ ವತಿಯಿಂದ ಸಚಿವರನ್ನು ಗೌರವಿಸಲಾಯಿತು.

ಈ ಸಂದರ್ಭ ಮಾಜಿ ಸಚಿವ ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕಾಂಗ್ರೆಸ್ ನಾಯಕರಾದ ಪ್ರಮೋದ್ ಕುಮಾರ್ ಕಿನ್ನಿಗೋಳಿ, ಉಲ್ಲಾಸ್ ಪೆರ್ಮುದೆ ಮತ್ತಿತರರು ಉಪಸ್ಥಿತರಿದ್ದರು.

Follow Us:
Download App:
  • android
  • ios