ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರ ತಂದೆಗೂ ಕೊರೋನಾ ಲಕ್ಷಣಗಳು ಕಂಡುಬಂದಿದ್ದು, ಅವರನ್ನ ಆಸ್ಪತ್ರೆಗೆ ದಾಖಲಾಗಿಸಿದೆ.
ಬೆಂಗಳೂರು, (ಜೂನ್.22): ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ಮನೆ ಕೆಲಸದ ಸಿಬ್ಬಂದಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರ ಬೆನ್ನಲ್ಲೇ ಸುಧಾಕರ್ ಅವರ ತಂದೆಗೂ ಕೊರೋನಾ ಲಕ್ಷಣಗಳಾದ ಜ್ವರ, ಕೆಮ್ಮು ಸಮಸ್ಯೆ ಕಂಡುಬಂದಿವೆ.
"
ಈ ಹಿನ್ನೆಲೆಯಲ್ಲಿ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಲ್ಯಾಬ್ ರಿಪೋರ್ಟ್‌ಗಾಗಿ ಕಾಯುತ್ತಿದ್ದೇವೆ ಎಂದು ಈ ಬಗ್ಗೆ ಸ್ವತಃ ಸಚಿವ ಸುಧಾಕರ್ ಅವರೇ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಸಚಿವ ಸುಧಾಕರ್ ಮನೆಗೂ ಕಾಲಿಟ್ಟ ಕೊರೋನಾ...!
ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ 82 ವರ್ಷದ ನನ್ನ ಪೂಜ್ಯ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಅವರು ಶೀಘ್ರ ಗುಣಮುಖರಾಗುವಂತೆ ನೀವೂ ಪ್ರಾರ್ಥಿಸಿ ಎಂದು ಕೋರಿಕೊಳ್ಳುತ್ತಿದ್ದೇನೆ. ನಿಮ್ಮ ಶುಭ ಹಾರೈಕೆಗಳಿರಲಿ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಬೆಂಗಳೂರಿನ ಸದಾಶಿವ ನಗರದಲ್ಲಿರೋ ನಿವಾಸದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಇದರ ಮಧ್ಯೆ ಸಚಿವ ಸುಧಾಕರ್ ಅವರ ತಂದೆಗೆ ಕೊರೋನಾ ಭೀತಿ ಶುರುವಾಗಿದೆ.
#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್
"
