ಬೆಂಗಳೂರಿನಲ್ಲಿ ಕೊರೋನಾ ಸೋಂಕು ಪರೀಕ್ಷೆ ವೇಳೆ ಸುಳ್ಳು ಹೆಸರು, ವಿಳಾಸ ಮತ್ತು ತಪ್ಪು ಮೊಬೈಲ್ ಸಂಖ್ಯೆ ನೀಡಿರುವ ಮೂರು ಸಾವಿರಕ್ಕೂ ಹೆಚ್ಚು ಮಂದಿ| ಕೊರೋನಾ ತಡೆಯಲು ಸರ್ಕಾರದ ಜೊತೆಗೆ ಜನರ ಸಹಕಾರವೂ ಅಷ್ಟೇ ಮುಖ್ಯ: ಸಚಿವ ಡಾ. ಕೆ. ಸುಧಾಕರ್|
ಬೆಂಗಳೂರು(ಜು.27): ಹೆಚ್ಚು ಕೋವಿಡ್ ಟೆಸ್ಟ್ ಮಾಡಿದರಷ್ಟೇ ಕೊರೋನಾ ನಿಯಂತ್ರಣ ಸುಲಭವಾಗುತ್ತದೆ. ರಾಜ್ಯದಲ್ಲಿ ಪ್ರತಿದಿನ 30-40 ಸಾವಿರ ಟೆಸ್ಟ್ ಮಾಡಲಾಗುತ್ತಿದೆ. ಕೆಲವರು ತಪ್ಪು ವಿಳಾಸ, ತಪ್ಪು ಮೊಬೈಲ್ ನಂಬರ್ ಕೊಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಡ್ಡಾಯವಾಗಿ ಆಧಾರ್, ಐಡಿ ಕಾರ್ಡ್ ತೋರಿಸಿ OTP ಬಂದ ಮೇಲೆ ಟೆಸ್ಟ್ ಮಾಡಲು ಸೂಚನೆ ನೀಡಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ಪರೀಕ್ಷೆ ವೇಳೆ ಬರೋಬ್ಬರಿ ಮೂರು ಸಾವಿರಕ್ಕೂ ಹೆಚ್ಚು ಮಂದಿ ಸುಳ್ಳು ಹೆಸರು, ವಿಳಾಸ ಮತ್ತು ತಪ್ಪು ಮೊಬೈಲ್ ಸಂಖ್ಯೆ ನೀಡಿರುವ ಪ್ರಕರಣಗಳು ಬೆಳಕಿಗೆ ಬಂದಿದೆ. ಈ ರೀತಿ ಸುಳ್ಳು ಮಾಹಿತಿ ನೀಡಿ ಹೋಗಿರುವುದರಿಂದ ಪರೀಕ್ಷೆಯಲ್ಲಿ ಕೊರೋನಾ ಸೋಂಕು ದೃಢಪಟ್ಟ 3388 ಮಂದಿಯನ್ನು ಪತ್ತೆ ಹಚ್ಚಲು ಬಿಬಿಎಂಪಿಗೆ ಇದುವರೆಗೂ ಸಾಧ್ಯವಾಗಿಲ್ಲ. ಹೀಗಾಗಿ ತಮ್ಮ ಬಳಿ ಇರುವ ವಿವರಗಳನ್ನು ಪೊಲೀಸರಿಗೆ ಒಪ್ಪಿಸಿರುವ ಬಿಬಿಎಂಪಿ, ಅವರನ್ನು ಪತ್ತೆ ಹಚ್ಚಿಕೊಡುವಂತೆ ಕೋರಿದೆ.
ಬೆಂಗಳೂರಲ್ಲಿ 3388 ಕೊರೋನಾ ಸೋಂಕಿತರು ನಾಪತ್ತೆ..!
ಹೀಗಾಗಿ ಸಾಮಾಜಿಕ ಜಾಲತಾಣ ಟ್ಟಿಟ್ಟರ್‌ನಲ್ಲಿ ಬರೆದುಕೊಂಡಿರುವ ಸಚಿವರು ಕೊರೋನಾ ವೈರಸ್ ಅಟ್ಟಹಾಸವನ್ನ ತಡೆಯಲು ಸರ್ಕಾರದ ಜೊತೆಗೆ ಜನರ ಸಹಕಾರವೂ ಅಷ್ಟೇ ಮುಖ್ಯವಾಗಿದೆ ಎಂದು ಹೇಳಿದ್ದಾರೆ.
