ಬೆಂಗಳೂರು, (ಜೂನ್.22): ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರ ತಂದೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.ಈ ಬಗ್ಗೆ ಸ್ವತಃ ಸಚಿವ ಸುಧಾಕರ್ ಅವರೇ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.

ಸಚಿವ ಸುಧಾಕರ್ ಮನೆಗೂ ಕಾಲಿಟ್ಟ ಕೊರೋನಾ...! 

ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ಟ್ವೀಟ್ ಮಾಡಿದ್ದಾರೆ.

ಸಚಿವ ಡಾ. ಸುಧಾಕರ್ ತಂದೆಗೆ ಕೊರೋನಾ ಭೀತಿ, ಆಸ್ಪತ್ರೆಗೆ ದಾಖಲು

ಬೆಂಗಳೂರಿನ ಸದಾಶಿವ ನಗರದಲ್ಲಿರೋ ನಿವಾಸದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿತ್ತು. ಇದರ ಬೆನ್ನಲ್ಲೇ ಸಚಿವ ಸುಧಾಕರ್ ಅವರ ತಂದೆಗೆ ಕೊರೋನಾ ಲಕ್ಷಣಗಳಾದ ಇಜ್ವರ, ಕೆಮ್ಮು ಸಮಸ್ಯೆ ಕಂಡುಬಂದಿದ್ದವು. 

 ಹಿನ್ನಲೆಯಲ್ಲಿ 82 ವರ್ಷದ ಸುಧಾಕರ್ ತಂದೆಯವರನ್ನ ಆಸ್ಪತ್ರೆಗೆ ದಾಖಲಿಸಿ ಕೋವಿಡ್ ಪರೀಕ್ಷೆಗೂ ಒಳಪಡಿಸಲಾಗಿತ್ತು. ಇದೀಗ ಆ ವರದಿ ಬಂದಿದ್ದು, ಸೋಂಕು ಇರುವುದು ದೃಢವಾಗಿದೆ. ಈ ಮೂಲಕ ಇನ್ನುಳಿದ ಮನೆ ಸದಸ್ಯರಲ್ಲೂ ಆತಂಕ ಮನೆ ಮಾಡಿದೆ.