Asianet Suvarna News Asianet Suvarna News

ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಗ್ರೀನ್‌ ಸಿಗ್ನಲ್‌: ಹಂಡೆ ಹಾಲು ಕುಡಿದಷ್ಟೇ ಸಂತಸವೆಂದ ಸಚಿವ ಕಾರಜೋಳ

ಕಳಸಾ ಬಂಡೂರಿ ನಾಲಾ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಹಂಡೆ ಹಾಲು ಕುಡಿದಷ್ಟುಸಂತಸವಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

Minister Govind Karajol Congratulates Central Government For Granting Permission To Kalasa Banduri Project gvd
Author
First Published Dec 30, 2022, 3:32 AM IST

ವಿಧಾನಸಭೆ (ಡಿ.30): ಕಳಸಾ ಬಂಡೂರಿ ನಾಲಾ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಹಂಡೆ ಹಾಲು ಕುಡಿದಷ್ಟುಸಂತಸವಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಸದನದಲ್ಲಿ ಮಾತನಾಡಿದ ಅವರು, ‘ಕಳಸಾ ಬಂಡೂರಿ ನಾಲೆ ಆಗಬೇಕೆಂದು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿರದಿದ್ದಲ್ಲಿ ಈ ಯೋಜನೆಗೆ ಮುಕ್ತಿ ಸಿಗುತ್ತಿರಲಿಲ್ಲ. ಅವರು ಆಡಳಿತಗಾರರು, ತಾಂತ್ರಿಕ ಪರಿಣಿತರು, ನೀರಾವರಿ ತಜ್ಞರು ಹೌದು. ಬಸವರಾಜ ಬೊಮ್ಮಾಯಿ ಅವರ ಮಾರ್ಗದರ್ಶನದಲ್ಲಿ ಇಡೀ ಡಿಪಿಆರ್‌ನ್ನು ಪರಿಷ್ಕರಿಸಿದ್ದೇವೆ’ ಎಂದು ತಿಳಿಸಿದರು.

‘ಜಲಾಶಯದ ಎತ್ತರಗಳನ್ನು ಕಡಿಮೆ ಮಾಡಿ ನಮಗೆ ನಿಗದಿಯಾಗಿರುವ ಕಳಸಾ- 1.72 ಟಿಎಂಸಿ, ಬಂಡೂರಿ- 2.18 ಟಿಎಂಸಿ ಸೇರಿ ಒಟ್ಟು 3.90 ಟಿಎಂಸಿ ನೀರನ್ನು ಉಪಯೋಗ ಮಾಡಿಕೊಳ್ಳುವುದಕ್ಕೆ ಪರಿಷ್ಕೃತ ಡಿಪಿಆರ್‌ ಅನ್ನು ಸಲ್ಲಿಸಿದ್ದೆವು. ಅದಾದ ಮೇಲೆ ಹತ್ತಾರು ಬಾರಿ ದಿಲ್ಲಿಗೆ ಹೋಗಿ ಬಂದಿದ್ದೇವೆ. ಮುಖ್ಯಮಂತ್ರಿಗಳು ಸ್ವತಃ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹತ್ತಿರ ಅನೇಕ ಬಾರಿ ಭೇಟಿ ಮಾಡಿ ಈ ಯೋಜನೆಗೆ ಒಪ್ಪಿಗೆ ಪಡೆದುಕೊಂಡಿದ್ದಾರೆ’ ಎಂದರು.

ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಅಸ್ತು: ಹೋರಾಟ ಹಾದಿ ಮೆಲುಕು ಹಾಕಿದ ಗಣ್ಯರು

‘ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ನಮಗೆ ಜೊತೆ ಸಾಥ್‌ ನೀಡಿದ್ದರು. ಉತ್ತರ ಕರ್ನಾಟಕದ ಬೆಳಗಾವಿಯಲ್ಲೇ ಅಧಿವೇಶನ ನಡೆದಿರುವಾಗಲೇ ಕಳಸಾ ಬಂಡೂರಿ ನಾಲೆ ಯೋಜನೆಗೆ ಕೇಂದ್ರ ಅನುಮತಿ ನೀಡಿರುವುದು ಸಂತೋಷವಾಗಿದೆ. ಇದಕ್ಕೆ ಕಾರಣರಾದ ನಾಯಕರು ಹಾಗೂ ಅಧಿಕಾರಿಗಳು, ಹೋರಾಟಗಾರರಿಗೆ ಅಭಿನಂದನೆ’ ಎಂದರು.

ಸಚಿವರಿಂದ ಸಿಹಿ ಸಂಭ್ರಮ: ಕಳಸಾ- ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ಅಸ್ತು ಎಂದಿರುವುದಕ್ಕೆ ಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟ ಸಹೋದ್ಯೋಗಿಗಳು ಪರಸ್ಪರ ಸಿಹಿ ತಿನಿಸುವ ಮೂಲಕ ಸಂಭ್ರಮಿಸಿದರು. ಅಧಿವೇಶನ ಮುಗಿದ ಬಳಿಕ ಮಾಧ್ಯಮಗಳಿಗೆ ಕಳಸಾ- ಬಂಡೂರಿ ಯೋಜನೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವರಣೆ ನೀಡಿದರು. ಈ ವೇಳೆ ಸಚಿವ ಸಂಪುಟದ ಸಹೋದ್ಯೋಗಿಗಳಾದ ಗೋವಿಂದ ಕಾರಜೋಳ, ಶಂಕರ ಪಾಟೀಲ ಮುನೇನಕೊಪ್ಪ, ಸಿ.ಸಿ.ಪಾಟೀಲ ಸೇರಿದಂತೆ ಹಲವರಿದ್ದರು. ಬಳಿಕ ಕಳಸಾ- ಬಂಡೂರಿ ಹೋರಾಟದಲ್ಲಿ ತೊಡಗಿದ್ದ ಸಚಿವ ಮುನೇನಕೊಪ್ಪ ಸೇರಿದಂತೆ ಹಲವರಿಗೆ ಗೋವಿಂದ ಕಾರಜೋಳ ಸಿಹಿ ತಿನಿಸುವ ಮೂಲಕ ಅಭಿನಂದನೆ ಸಲ್ಲಿಸಿದರು.

ಪ್ರಧಾನಿಗೆ ಅಭಿನಂದಿಸಿದ ತೇಲ್ಕೂರ್‌: ಉತ್ತರ ಕರ್ನಾಟಕ ಭಾಗದ ಮಹತ್ವಾಕಾಂಕ್ಷೆಯ ಯೋಜನೆಯಾದ ಕಳಸಾ ಬಂಡೂರಿ ನಾಲಾ ವಿಸ್ತ7ತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದಕ್ಕೆ ಸಂತಸ ಸೂಚಿಸಿದ ಬಿಜೆಪಿ ರಾಜ್ಯ ವಕ್ತಾರ, ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಅವರು ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಮರ್ಪಿಸಿದ್ದಾರೆ. ಕಳಸಾ ಬಂಡೂರಿ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ. 

ಟಿಕೆಟ್‌ ನಿರ್ಧಾರ ಜನರದ್ದು, ಬಿ ಫಾರ್ಮ್‌ ನಿರ್ಧಾರ ನನ್ನದು: ಎಚ್‌.ಡಿ.ದೇವೇಗೌಡ

ಈ ಮೂಲಕ ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಮತ್ತು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರಿಗೆ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ. ಈ ಹಿಂದೆ ಕಳಸಾ ಬಂಡೂರಿ ಯೋಜನೆಗೆ ನಾವು ಹೋರಾಟ ಮಾಡಿದ್ದೇವೆ. ಇದೀಗ ಯೋಜನಾ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವೂ ಅತ್ಯಂತ ಶ್ರಮ ಹಾಕಿದೆ. ಬಸವರಾಜ ಬೊಮ್ಮಾಯಿ, ಸಚಿವರಾದ ಗೋವಿಂದ ಕಾರಜೋಳ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

Follow Us:
Download App:
  • android
  • ios