ಗ್ಯಾರಂಟಿ ಸಮಾವೇಶದಲ್ಲಿ 'ಭಾರತ್ ಮಾತಾಕೀ ಜೈ' ಎಂದ ಸಚಿವ ಮಹದೇವಪ್ಪ!
ಇದೊಂದು ಐತಿಹಾಸಿಕ ಕಾರ್ಯಕ್ರಮ. ಇದೇ ಮೈದಾನದಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೆವು ಇದೀಗ ಗ್ಯಾರಂಟಿ ಸಮಾವೇಶವನ್ನು ಇದೇ ಮೈದಾನದಲ್ಲಿ ನಡೆಸುತ್ತಿದ್ದೇವೆ ಎಂದು ಸಚಿವ ಮಹದೇವಪ್ಪ ತಿಳಿಸಿದರು.
ಮೈಸೂರು (ಮಾ.15): ಇದೊಂದು ಐತಿಹಾಸಿಕ ಕಾರ್ಯಕ್ರಮ. ಇದೇ ಮೈದಾನದಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೆವು ಇದೀಗ ಗ್ಯಾರಂಟಿ ಸಮಾವೇಶವನ್ನು ಇದೇ ಮೈದಾನದಲ್ಲಿ ನಡೆಸುತ್ತಿದ್ದೇವೆ ಎಂದು ಸಚಿವ ಮಹದೇವಪ್ಪ ತಿಳಿಸಿದರು.
ಇಂದು ಸಿಎಂ ತವರು ಜಿಲ್ಲೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ 'ಭಾರತ್ ಮಾತಾ ಕೀ ಜೈ' ಎನ್ನುತ್ತಲೇ ಭಾಷಣ ಆರಂಭಿಸಿದ ಸಚಿವ ಮಹದೇವಪ್ಪ, ನಾವು ವಿಧಾನಸಭೆ ಚುನಾವಣೆಗೆ ಮೊದಲೇ ಗ್ಯಾರಂಟಿ ಕಾರ್ಡ್‌ಗಳನ್ನು ಹಂಚಿದ್ದೆವು ನಮ್ಮ ಕಾರ್ಯಕರ್ತರು ಮನೆ ಮನೆಗೆ ಹೋಗಿ ಗ್ಯಾರಂಟಿ ಕಾರ್ಡ್ ಹಂಚಿದ್ದರು. ನೀವೆಲ್ಲರೂ ನಮ್ಮ ಗ್ಯಾರಂಟಿ ಯೋಜನೆ ಮೆಚ್ಚಿ 135 ಸೀಟು ಕೊಟ್ರಿ. ನಾವು ಅಧಿಕಾರಕ್ಕೆ ಬಂದ ಬಳಿಕ ಮಾಡಿದ ಮೊದಲ ಕೆಲಸವೆಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದು, ಅ ಮೂಲಕ ನಾವು ನಿಮಗೆ ಕೊಟ್ಟಿದ್ದ ಮಾತನ್ನು ಉಳಿಸಿಕೊಂಡೆವು. ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದರು.
ಸಮಾವೇಶಕ್ಕೆ ಬಂದವರಿಗೆ ₹200 ಗ್ಯಾರಂಟಿ! ಕಾರ್ಯಕ್ರಮ ಮುಗಿದ ಬಳಿಕ ಹಣಕ್ಕಾಗಿ ಬಿಸಲಲ್ಲಿ ಕಾದು ಸುಸ್ತಾದ ಮಹಿಳೆಯರು!
ನಾವು ಬಡ ಕುಟುಂಬಗಳಿಗೆ ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೆವು. ಆದರೆ ಕೇಂದ್ರ ಸರ್ಕಾರ ನಮಗೆ ತೊಂದರೆ ಕೊಡುವ ಉದ್ದೇಶದಿಂದ ಅಕ್ಕಿ ಕೊಡಲಿಲ್ಲ. ಅಷ್ಟಕ್ಕೆ ನಾವು ಧೃತಿಗೆಡಲಿಲ್ಲ ಅಕ್ಕಿ ಬದಲಾಗಿ ಹಣ ನೀಡಲು ಮುಂದಾದೆವು. ಗೃಹಜ್ಯೋತಿ ಯೋಜನೆಯಡಿ ಎಲ್ಲಾ ಮನೆಗಳಿಗೂ 200ಯೂನಿಟ್ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಓಡಾಡಲಿಕ್ಕೆ ಸಿಎಂ ಅವಕಾಶ ಮಾಡಿಕೊಟ್ರು. ನಿರುದ್ಯೋಗ ಯುವಕ ಯುವತಿಯರಿಗೆ ಮಾಸಿಕ ಧನ ಸಹಾಯ ಕೊಡಲು ನಿರ್ಧರಿಸಿದೆವು. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ವರ್ಗದ ಜನರ ಅಭಿವೃದ್ಧಿ ಬಯಸಿದ್ದಾರೆ. ನಮ್ಮ ಸರ್ಕಾರ ಯಾವುದೇ ಒಂದು ಜಾತಿ ಧರ್ಮಕ್ಕೆ ಸೀಮಿತವಲ್ಲ. ನಾವು ಹೇಳಿದ್ದನ್ನು ಮಾಡದ್ದೇವೆ, ಮಾಡಿದ್ದನ್ನು ಹೇಳುತ್ತಿದ್ದೇವೆ ಎಂದರು.
ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ: ಗ್ಯಾರಂಟಿ ಸಮಾವೇಶದಲ್ಲಿ ಡಿಕೆ ಶಿವಕುಮಾರ ಭವಿಷ್ಯ!