ಕೇಂದ್ರ ಸರ್ಕಾರವು ಎಸ್‌ಸಿಪಿಟಿಎಸ್‌ಪಿ ಯೋಜನೆಗಳಿಗೆ ಕಡಿಮೆ ಅನುದಾನ ನೀಡುವ ಮೂಲಕ ಎಸ್‌ಸಿ, ಎಸ್ಟಿ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ಸಚಿವ ಎಚ್‌ಸಿ ಮಹದೇವಪ್ಪ ಆರೋಪಿಸಿದ್ದಾರೆ. ರಾಜ್ಯ ಬಿಜೆಪಿ ನಾಯಕರು ಈ ಬಗ್ಗೆ ಮೌನವಾಗಿರುವುದನ್ನು ಅವರು ಟೀಕಿಸಿದ್ದಾರೆ.

ಚಾಮರಾಜನಗರ (ಮಾ.1): ಎಸ್‌ಸಿಪಿಟಿಎಸ್‌ಪಿ ಯೋಜನೆಗಳಿಗೆ 12 ಲಕ್ಷ ಕೋಟಿ ಬದಲು ಕೇವಲ 60 ಸಾವಿರ ಕೋಟಿ ನೀಡುವ ಮೂಲಕ ಕೇಂದ್ರ ಸರ್ಕಾರವೇ ಎಸ್‌ಸಿ, ಎಸ್ಟಿ ಸಮುದಾಯಕ್ಕೆ ಟೋಪಿ ಹಾಕಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್‌ಸಿ ಮಹದೇವಪ್ಪ ಗಂಭೀರ ಆರೋಪ ಮಾಡಿದರು.

ಇಂದು ಚಾಮರಾಜನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್‌ಸಿ ಎಸ್ಟಿ ಸಮುದಾಯಕ್ಕಾದ ಅನ್ಯಾಯದ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಪ್ರಶ್ನಿಸಬೇಕು ಆದರೆ ಮೌನವಾಗಿದ್ದಾರೆ ಎಂದು ಟೀಕಿಸಿದರು.

ಇದನ್ನೂ ಓದಿ: ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅರಸು ಅವಧಿಗಿಂತಲೂ ಹೆಚ್ಚಿರುತ್ತಾರೆ: ಸಚಿವ ಮಹದೇವಪ್ಪ

 ಕೇಂದ್ರ ಸರ್ಕಾರದಲ್ಲಿ 94 ಸಾವಿರ ಬ್ಯಾಕ್‌ಲಾಗ್ ಹುದ್ದೆಗಳು ಖಾಲಿ ಇವೆ. ಇದನ್ನೆಲ್ಲ ಭರ್ತಿ ಮಾಡುವ ಬಗ್ಗೆ ಪ್ರಶ್ನಿಸುವುದನ್ನು ಬಿಟ್ಟು ರಾಜ್ಯ ಬಿಜೆಪಿ ನಾಯಕರು ನಮ್ಮ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ನಾವು ಎಸ್‌ಸಿಪಿ ಟಿಎಸ್‌ಪಿ ಕಾಯ್ದೆ ಮಾಡಿದ್ದೇವೆ. ಗ್ಯಾರಂಟಿ ಯೋಜನೆಗಳಿಗೆ ಸಾರ್ವಜನಿಕವಾಗಿ ಎಸ್‌ಸಿಪಿ ಟಿಎಸ್‌ಪಿ ಹಣ ಬಳಸಲು ಸಾಧ್ಯವಿಲ್ಲ, ಬಳಸೋದೂ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Guarantee Schemes Controversy: ಪಕ್ಷದಲ್ಲಿ ಬಣ ಬಡಿದಾಟವಿದ್ರೂ ಹೋರಾಟದಲ್ಲಿ ಒಗ್ಗಟ್ಟು

ಬಿಜೆಪಿ ಸರ್ಕಾರ 8-10 ಸಾವಿರ ಕೋಟಿ ದುರ್ಬಳಕೆ:

ಎಸ್‌ಸಿಪಿ ಟಿಎಸ್‌ಪಿ ಯೋಜನೆ 8ರಿಂದ 10 ಸಾವಿರ ಕೋಟಿ ಬಿಜೆಪಿ ಸರ್ಕಾರದಿಂದ ದುರ್ಬಳಕೆಯಾಗಿದೆ. ಎಸ್ಸಿಪಿ ಟಿಎಸ್ಪಿ ಕಾಯ್ದೆ ಸೆಕ್ಷನ್ D ಅಡಿ ದುರುಪಯೋಗ ಮಾಡಿದಾಗ ರಾಜ್ಯ ಬಿಜೆಪಿ ನಾಯಕರಿಗೆ ಎಸ್ಸಿಎಸ್ಟಿ ಜನಾಂಗದ ಬಗ್ಗೆ ಕಾಳಜಿ ಇರಲಿಲ್ಲವೇ? ಈಗ ಆರೋಪ ಮಾಡ್ತಾ ಇರೋರೆ ಅಂದು ಸಮಾಜ ಕಲ್ಯಾಣ ಸಚಿವರಾಗಿದ್ದರು. ಅವರಿಗೆ ಎಸ್ಸಿಪಿ ಟಿಎಸ್ಪಿ ಕಾಯ್ದೆ ಬಗ್ಗೆ ಎಬಿಸಿಡಿನೂ ಗೊತ್ತಿಲ್ಲ ಬಿಡಿ ಎಂದೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ವಾಗ್ದಾಳಿ ನಡೆಸಿದರು.