ಬೆಂಗಳೂರು(ಆ.02):ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಮತ್ತು ಬೌರಿಂಗ್‌ ಆಸ್ಪತ್ರೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿದ ಖಾಯಂ ಶುಶ್ರೂಷಕ ಅಧಿಕಾರಿಗಳ ಬೇಡಿಕೆಗಳಿಗೆ ಸ್ಪಂದಿಸಿರುವ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ. ಕೆ.ಸುಧಾಕರ್‌ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.

ಕೊರೋನಾ ಸೋಂಕಿತರ ಆರೈಕೆಯಲ್ಲಿ ನಿರತರಾಗಿರುವ ಶುಶ್ರೂಷಕರು ವಿವಿಧ ಸೌಲಭ್ಯಗಳು ನೀಡಬೇಕು ಎಂದು ಆಗ್ರಹಿಸಿ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿರುವುದು ಗಮನಕ್ಕೆ ಬಂದಿದೆ. ಸಿಬ್ಬಂದಿಯ ಬೇಡಿಕೆಗಳ ಬಗ್ಗೆ ಕೂಡಲೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಬಳಿ ಚರ್ಚೆ ಮಾಡಲಾಗುವುದು. ಆದಷ್ಟುಶೀಘ್ರವಾಗಿ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೊರೋನಾ ಚಿಕಿತ್ಸೆ: ಗುತ್ತಿಗೆ ಆಧಾರದಲ್ಲಿ 578 ವೈದ್ಯಕೀಯ ಸಿಬ್ಬಂದಿ ನೇಮಕ

ಸಿಬ್ಬಂದಿಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿರುವುದರಿಂದ ಸಿಬ್ಬಂದಿ ಕೆಲಸಕ್ಕೆ ಮರಳಿ ಕಾರ್ಯಪ್ರವೃತ್ತರಾಗಬೇಕು. ಶುಶ್ರೂಷಕರ ಸಮಸ್ಯೆಗಳನ್ನು ಎಲ್ಲವನ್ನೂ ಗಮನದಲ್ಲಿರಿಸಿಕೊಂಡು ಸರ್ಕಾರವು ಸಿಬ್ಬಂದಿಯ ಬೇಡಿಕೆಗಳನ್ನು ಈಡೇರಿಸಲಿದೆ ಎಂದು ಸಚಿವರು ತಮ್ಮ ಸರಣಿ ಟ್ವೀಟ್‌ಗಳ ಮೂಲಕ ಆಶ್ವಾಸನೆ ನೀಡಿದ್ದಾರೆ.