ಬೆಂಗಳೂರು(ಜು.29): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಶ್ಲಾಘನೆಗೆ ಪಾತ್ರರಾದ ಮಂಡ್ಯದ ದಾಸನದೊಡ್ಡಿ ಕಾಮೇಗೌಡರು ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚೇತರಿಸಿಕೊಂಡಿದ್ದಾರೆ. 

ಈ ಸಂಬಂಧ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅವರು, ಅನಾರೋಗ್ಯದಿಂದ ಬಳಲುತ್ತಿದ್ದ ಕಾಮೇಗೌಡರನ್ನು ಮಂಡ್ಯ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಚಿಕಿತ್ಸ ನೀಡುವಂತೆ ಸೂಚಿಸಿದ್ದೆ. ಕಾಮೇಗೌಡರು ಈಗ ಚೇತರಿಸಿಕೊಂಡಿರುವುದು ಸಂತಸದ ಸಂಗತಿ. ಮಂಡ್ಯ ಮೆಡಿಕಲ್ ಕಾಲೇಜಿನ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ. 

 

ಕಾಮೇಗೌಡರ ಆರೋಗ್ಯ ಬಗ್ಗೆ ಎಚ್‌ಡಿಕೆ ಆತಂಕ..! ಅಗತ್ಯ ಕ್ರಮ ಕೈಗೊಂಡಿದ್ದೇನೆ ಎಂದ ಸಚಿವ ಸುಧಾಕರ್

ಇದಕ್ಕೂ ಮುನ್ನ ಕಾಮೇಗೌಡರು ಕೊರೋನಾ ಸೋಂಕಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದರ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.