*  ಸ್ವಾಮೀಜಿ ಅವರನ್ನು ಭೇಟಿ ಮಾಡಿರುವುದರಲ್ಲಿ ವಿಶೇಷತೆ ಇಲ್ಲ* ರಮೇಶ್‌ ಜಾರಕಿಹೊಳಿ ನನ್ನ ಸ್ನೇಹಿತರು* ಬೆಂಗಳೂರಿನಲ್ಲಿ ಇಲ್ಲ ಎನ್ನುವ ಕಾರಣಕ್ಕೆ ಅವರನ್ನು ಭೇಟಿಯಾಗಿಲ್ಲ

ಬೆಂಗಳೂರು(ಜೂ.26): ಮಾಜಿ ಸಚಿವ ಹಾಗೂ ಶಾಸಕ ರಮೇಶ್‌ ಜಾರಕಿಹೊಳಿ ಸುತ್ತೂರು ಮಠದ ಶ್ರೀಗಳ ಭೇಟಿ ಮಾಡಿರುವುದರಲ್ಲಿ ವಿಶೇಷತೆ ಏನೂ ಇಲ್ಲ. ಅವರು ಸಚಿವ ಸ್ಥಾನದ ಬಗ್ಗೆ ನನ್ನ ಬಳಿ ಏನೂ ಚರ್ಚಿಸಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ. 

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿಯವರನ್ನು ನಾವೆಲ್ಲರೂ ಭೇಟಿ ಮಾಡುತ್ತೇವೆ. ಅನ್ನ ದಾಸೋಹ, ಅಕ್ಷರ ದಾಸೋಹದಲ್ಲಿ ತೊಡಗಿಸಿಕೊಂಡಿರುವ ಸ್ವಾಮೀಜಿ ಅವರನ್ನು ಭೇಟಿ ಮಾಡಿರುವುದರಲ್ಲಿ ವಿಶೇಷತೆ ಇಲ್ಲ ಎಂದು ತಿಳಿಸಿದ್ದಾರೆ. 

ದೇವೇಂದ್ರ ಫಡ್ನವೀಸ್‌ ನನ್ನ ಗಾಡ್‌ಫಾದರ್‌: ಜಾರಕಿಹೊಳಿ!

ಜಾರಕಿಹೊಳಿ ನನ್ನ ಸ್ನೇಹಿತರು. ಬೆಂಗಳೂರಿನಲ್ಲಿ ಇಲ್ಲ ಎನ್ನುವ ಕಾರಣಕ್ಕೆ ಅವರನ್ನು ಇತ್ತೀಚೆಗೆ ಭೇಟಿಯಾಗಿಲ್ಲ. ಇನ್ನೂ ಮಂತ್ರಿ ಸ್ಥಾನಕ್ಕೆ ಯತ್ನಿಸುತ್ತಿರುವ ವಿಚಾರವಾಗಿ ನನ್ನ ಜತೆ ಏನೂ ಚರ್ಚಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.