ಅನ್ನಭಾಗ್ಯ ಅಕ್ಕಿ ಹಣ ಬಿಡುಗಡೆಗೆ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಚಿವ ಮುನಿಯಪ್ಪ

ಇಲಾಖೆಯಲ್ಲಿ ಇರುವ ಲೋಪದೋಷಗಳನ್ನು ಸರಿಪಡಿಸಬೇಕು. ಹೊಸ ಪಡಿತರ ಚೀಟಿ ಕೋರಿ ಕಳೆದ ಐದು ವರ್ಷಗಳಿಂದ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಎಪಿಎಲ್‌, ಬಿಪಿಎಲ್‌ ಕಾರ್ಡ್‌ಗಳನ್ನು ಗುರುತಿಸಿ ವಿಲೇವಾರಿ ಮಾಡಬೇಕು. ಇಲಾಖೆಯಲ್ಲಿ ಪಡಿತರ ದಾರರಿಗೆ ಸರಬರಾಜು ಆಗುತ್ತಿರುವ ಅಕ್ಕಿ, ರಾಗಿ, ಜೋಳ ಇತ್ಯಾದಿ ಧಾನ್ಯಗಳ ಗುಣಮಟ್ಟ ಇರುವಂತೆ ಎಚ್ಚರವಿರಬೇಕು ಎಂದು ಸೂಚಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ
 

Minister KH Muniyappa Instruct For Release of Annabhagya Rice Money within every month grg

ಬೆಂಗಳೂರು(ಜೂ.25):  ಪ್ರತಿ ತಿಂಗಳ ಅಂತ್ಯದೊಳಗೆ ಹೆಚ್ಚುವರಿ ಐದು ಕೆ.ಜಿ. ಅಕ್ಕಿಯ ಹಣ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಸಂದಾಯವಾಗುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಸೋಮವಾರ ಆಹಾರ ನಿಗಮದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಇಲಾಖೆಯ ಪ್ರಗತಿ ಪರಿಶೀಲಿಸಿದರು. ಈ ವೇಳೆ ಇಲಾಖೆ ಯೋಜನೆಗಳು ಮತ್ತು ಕಾರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. 

3 ತಿಂಗಳಿಂದ ಅನ್ನಭಾಗ್ಯದ ಹಣ ಸ್ಥಗಿತ..!

ನಂತರ ಮಾತನಾಡಿದ ಸಚಿವರು, ಇಲಾಖೆಯಲ್ಲಿ ಇರುವ ಲೋಪದೋಷಗಳನ್ನು ಸರಿಪಡಿಸಬೇಕು. ಹೊಸ ಪಡಿತರ ಚೀಟಿ ಕೋರಿ ಕಳೆದ ಐದು ವರ್ಷಗಳಿಂದ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಎಪಿಎಲ್‌, ಬಿಪಿಎಲ್‌ ಕಾರ್ಡ್‌ಗಳನ್ನು ಗುರುತಿಸಿ ವಿಲೇವಾರಿ ಮಾಡಬೇಕು. ಇಲಾಖೆಯಲ್ಲಿ ಪಡಿತರ ದಾರರಿಗೆ ಸರಬರಾಜು ಆಗುತ್ತಿರುವ ಅಕ್ಕಿ, ರಾಗಿ, ಜೋಳ ಇತ್ಯಾದಿ ಧಾನ್ಯಗಳ ಗುಣಮಟ್ಟ ಇರುವಂತೆ ಎಚ್ಚರವಿರಬೇಕು ಎಂದು ಸೂಚಿಸಿದ್ದಾರೆ.

Latest Videos
Follow Us:
Download App:
  • android
  • ios