ಹಾಲು ದರ 5 ರೂ ಹೆಚ್ಚಾಗಬೇಕು, ಇದು ನನ್ನ ವೈಯಕ್ತಿಕ ಅಭಿಪ್ರಾಯ: ಸಚಿವ ರಾಜಣ್ಣ

ರೈತರ ಹಿತ ಕಾಪಾಡಲು ಹಾಲಿನ ದರವನ್ನು ಲೀಟರ್‌ಗೆ 5ರಷ್ಟು ಏರಿಸಲು ಚಿಂತನೆ ನಡೆಸಿದ್ದೇವೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ದೂರಿದರು. ನಗರದ ಜಿಲ್ಲಾ​ಧಿಕಾರಿ ಕಚೇರಿ ಸಭಾಂಗಣದಲ್ಲಿ ಹಾಲಿನ ದರ ಹೆಚ್ಚ ಕುರಿತಾಗಿ ಶುಕ್ರವಾರ ಮಾಧ್ಯಮದೊಂದಿಗೆ ಮಾತನಾಡಿದರು.

minister kn rajanna reaction on milk price hike gvd

ಹಾಸನ (ಜೂ.24): ರೈತರ ಹಿತ ಕಾಪಾಡಲು ಹಾಲಿನ ದರವನ್ನು ಲೀಟರ್‌ಗೆ 5 ರಷ್ಟು ಏರಿಸಲು ಚಿಂತನೆ ನಡೆಸಿದ್ದೇವೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ದೂರಿದರು. ನಗರದ ಜಿಲ್ಲಾ​ಧಿಕಾರಿ ಕಚೇರಿ ಸಭಾಂಗಣದಲ್ಲಿ ಹಾಲಿನ ದರ ಹೆಚ್ಚ ಕುರಿತಾಗಿ ಶುಕ್ರವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಾಲಿನ ದರ ಏರಿಕೆ ಮಾಡಬೇಕು ಎನ್ನುವುದು ಸರ್ಕಾರದ ನಿರ್ಧಾರವಲ್ಲ. ಅದು ನನ್ನ ವೈಯಕ್ತಿಕ ಅಭಿಪ್ರಾಯ. 

ರೈತರಿಗೆ ಉತ್ಪಾದನಾ ವೆಚ್ಚ ಜಾಸ್ತಿ ಇರುವುದರಿಂದ 5 ಹೆಚ್ಚಿಗೆ ದೊರಕಿಸಿಕೊಡಬೇಕು ಅನ್ನುವುದು ನನ್ನ ಉದ್ದೇಶ. ರೈತರ ಬಗ್ಗೆ ಯಾರೂ ಮಾತನಾಡುತ್ತಿಲ್ಲ, ಕೇವಲ ಗ್ರಾಹಕರ ಕುರಿತಷ್ಟೇ ಹೇಳುತ್ತಿದ್ದಾರೆ. ರೈತರ ಹಿತ ಕಾಪಾಡುವುದೂ ಮುಖ್ಯ. ಈಗಾಗಲೇ ಜಾನುವಾರುಗಳ ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗಿದೆ. ರೋಗದಿಂದ ಜಾನುವಾರುಗಳು ಮೃತಪಟ್ಟು, ರೈತರು ನಷ್ಟಅನುಭವಿಸಿದ್ದಾರೆ ಎಂದರು. ಅಕ್ಕಿ ವಿಚಾರವಾಗಿ ಮಾತನಾಡಿದ ಅವರು, ಈ ಕುರಿತು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ. 

ಬಹುಪತ್ನಿತ್ವ ಕಡಿವಾಣಕ್ಕೆ ಏಕನಾಗರಿಕ ಸಂಹಿತೆ ಜಾರಿ: ಕೆ.ಎಸ್‌.ಈಶ್ವರಪ್ಪ

ಒಂದು ದಿನ ಅಕ್ಕಿ ಕೊಡುತ್ತೇವೆ ಎಂದು ಕೇಂದ್ರ ಪತ್ರ ಕೊಟ್ಟು, ಇನ್ನೊಂದು ದಿನ ಕೊಡಲ್ಲ ಅಂದರೆ ಏನರ್ಥ? ಎಂದರು. ಇದರಲ್ಲಿ ರಾಜಕೀಯ ಷಡ್ಯಂತ್ರ ಇದೆ. ಇದನ್ನು ನಾನು ಖಂಡಿಸುತ್ತೇನೆ. ಅವರೇನು ಪುಕ್ಸಟ್ಟೆಕೊಡಲ್ಲ. ಹಣ ಕೊಡುತ್ತೇವೆ. ಆದರೂ ಕೊಡುವುದಿಲ್ಲ ಎನ್ನುತ್ತಿದ್ದಾರೆ. ಹಾಗಾಗಿ ನಾವು ಛತ್ತೀಸ್‌ಗಢ, ಪಂಜಾಬ್‌ನಿಂದ ಖರೀದಿ ಮಾಡಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ಈ ನಿಟ್ಟಿನಲ್ಲಿ ಮಾತುಕತೆ ಮಾಡುತ್ತಿದ್ದೇವೆ. ಎರಡು ಕೆ.ಜಿ. ಜೋಳ ಎಲ್ಲಾ ಸೇರಿಸಿ ಅನ್ನಭಾಗ್ಯದಡಿ 10 ಕೆ.ಜಿ. ಆಹಾರ ಧಾನ್ಯ ಕೊಟ್ಟೇ ಕೊಡುತ್ತೇವೆ ಎಂದು ಹೇಳಿದರು.

ನಂದಿನಿ ಹಾಲಿನ ದರ ಹೆಚ್ಚಳದ ಸುಳಿವು: ಕೆಎಂಎಫ್‌ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಭೀಮನಾಯ್ಕ್‌ ಮತ್ತು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರು ನಂದಿನಿ ಹಾಲಿನ ದರ ಹೆಚ್ಚಳದ ಸುಳಿವು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಎಂಎಫ್‌ ಅಧ್ಯಕ್ಷ ಭೀಮ ನಾಯ್ಕ್‌ ಅವರು, ರಾಜ್ಯ ಸರ್ಕಾರ ಹಾಲು ಉತ್ಪಾದಕರ ರೈತರಿಗೆ ಪ್ರೋತ್ಸಾಹ ಧನವಾಗಿ ಪ್ರತಿ ಲೀಟರ್‌ಗೆ 5 ರು. ನೀಡುತ್ತಿದೆ. ಇನ್ನು 2 ರು.ಹೆಚ್ಚಳ ಮಾಡುವ ಬಗ್ಗೆ ತೀರ್ಮಾನ ಇದೆ. ಪ್ರಸ್ತುತ ಎಲ್ಲ ಹಾಲು ಒಕ್ಕೂಟಗಳು ಪ್ರತಿ ಲೀಟರ್‌ಗೆ 5 ರು.ಬೆಲೆ ಹೆಚ್ಚಿಸುವಂತೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಕೆಎಂಎಫ್‌ ಹಿರಿಯರ ಶ್ರಮದಿಂದ ಈ ಮಟ್ಟಕ್ಕೆ ಬೆಳೆದು ನಿಂತಿದೆ. ನಂದಿನಿ ರಾಷ್ಟ್ರ ಮಟ್ಟದ ಬ್ರಾಂಡ್‌ ಆಗಿದ್ದು, ಖಾಸಗಿಯವರಿಗೆ ಸ್ಪರ್ಧೆ ನೀಡುವ ಕೆಲಸವನ್ನು ಸಂಸ್ಥೆ ಮಾಡಲಿದೆ. ಸರ್ಕಾರದ ಮಾರ್ಗದರ್ಶನದ ಜೊತೆಗೆ ರೈತರು, ಗ್ರಾಹಕರ ಸಹಕಾರ ಪಡೆದು ಕೆಎಂಎಫ್‌ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಕೆಲ ತಿಂಗಳಿನಿಂದ ರಾಸುಗಳಿಗೆ ಚರ್ಮಗಂಟು ರೋಗ ಬಂದಿದ್ದರಿಂದ ಹಾಲು ಉತ್ಪಾದನೆ ಕಡಿಮೆಯಾಗಿತ್ತು. ಹೀಗಾಗಿ ತುಪ್ಪದ ಕೊರತೆಯೂ ಹೆಚ್ಚಾಗಿತ್ತು. ಈಗ ಮಳೆಗಾಲ ಆರಂಭಗೊಂಡಿದ್ದು ಹಸಿರು ಮೇವು ಯಥೇಚ್ಛವಾಗಿ ಸಿಗುವುದರಿಂದ ಹಾಲಿನ ಉತ್ಪಾದನೆ ಜಾಸ್ತಿಯಾಗಲಿದೆ ಎಂದರು.

ಬಸ್‌ಗಳಲ್ಲಿ ಸ್ತ್ರೀಯರ ‘ಶಕ್ತಿ ಪ್ರದರ್ಶನ’: ವೃದ್ಧೆಗೆ ಕಪಾಳಮೋಕ್ಷ ಮಾಡಿದ ಲೇಡಿ ಕಂಡಕ್ಟರ್

ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಮಾತನಾಡಿ, ರಾಜ್ಯದಲ್ಲಿ ಖಾಸಗಿ ಹಾಲು ಸಂಸ್ಥೆಗಳು ರೈತರಿಂದ ಹೆಚ್ಚು ಹಣ ಕೊಟ್ಟು ಹಾಲು ಖರೀದಿ ಮಾಡುತ್ತಿವೆ. ಹೀಗಾಗಿ ನಾವು ಕೂಡ ಹೈನುಗಾರರಿಗೆ ಹೆಚ್ಚು ಹಣ ಕೊಡಬೇಕಾಗುತ್ತದೆ. ಹಾಗಾಗಿ ಹಾಲು ಉತ್ಪಾದಕರಿಗೆ ನೀಡುವ ಮೊತ್ತ ಏರಿಕೆಗೆ ಚಿಂತನೆ ನಡೆಸಲಾಗಿದೆ. ರೈತರಿಂದ ಖರೀದಿಸುವ ಹಾಲಿನ ದರ ಏರಿಕೆಗೆ ಚಿಂತನೆ ನಡೆದಿದ್ದು ರೈತರಿಗೆ ಹೆಚ್ಚಿನ ಲಾಭ ನೀಡುವ ಕಡೆಗೆ ಗಮನ ಹರಿಸುತ್ತೇವೆ. ಮುಖ್ಯಮಂತ್ರಿಗಳ ಜತೆಗೆ ಚರ್ಚಿಸಿ ರೈತರಿಗೆ ಅನುಕೂಲವಾಗುವಂತೆ ಮಾಡುತ್ತೇವೆ. ಗ್ರಾಹಕರು ಖರೀದಿಸುವ ನಂದಿನಿ ಹಾಲಿನ ದರ ಏರಿಕೆ ಬಗ್ಗೆಯೂ ಚರ್ಚೆ ಆಗುತ್ತಿದೆ ಎಂದು ತಿಳಿಸಿದರು.

Latest Videos
Follow Us:
Download App:
  • android
  • ios