ಬೆಂಗಳೂರು (ಸೆ.09) : ಕೊರೋನಾ ಸೋಂಕಿಗೆ ತುತ್ತಾಗಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಅವರ ಪತ್ನಿ ಜಯಲಕ್ಷ್ಮಿ ಅವರು ಗುಣಮುಖರಾಗಿದ್ದಾರೆ.

ಮಣಿಪಾಲ್‌ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಸೆ.1ರಂದು ಕೊರೋನಾ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. 

ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಈಶ್ವರಪ್ಪ ಸಿಬ್ಬಂದಿಗೆ ಕೊರೋನಾ ಧೃಡಪಟ್ಟಿದ್ದರಿಂದ ಪರೀಕ್ಷೆ ಮಾಡಿಸಿಕೊಂಡಿದ್ದರು. ಈ ವೇಳೆ ಪಾಸಿಟಿವ್‌ ಕಾಣಿಸಿಕೊಂಡಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. 

ಒಂದು ವಾರಗಳ ಕಾಲ ದಂಪತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಗುಣಮುಖರಾಗಿ ಮನೆಗೆ ಹಿಂತಿರುಗಿದ್ದು, ಮನೆಯಲ್ಲಿಯೇ ಮುಂಜಾಗ್ರತಾ ಕ್ರಮಗಳನ್ನು ಮುಂದುವರಿಸಲಿದ್ದಾರೆ.