ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂಬ ಕಾರಣದಿಂದ ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, ಉಳಿದವರ ಸಮಸ್ಯೆ ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ

ವಿಧಾನ ಪರಿಷತ್‌ : ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂಬ ಕಾರಣದಿಂದ ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, ಉಳಿದವರ ಸಮಸ್ಯೆ ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯದಲ್ಲಿ ಸುಮಾರು 1.26 ಕೋಟಿ ಗೃಹಲಕ್ಷ್ಮೀ ಫಲಾನುಭವಿಗಳು

ಬಿಜೆಪಿಯ ಪಿ.ಎಚ್‌.ಪೂಜಾರ‌ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಸುಮಾರು 1.26 ಕೋಟಿ ಗೃಹಲಕ್ಷ್ಮೀ ಫಲಾನುಭವಿಗಳಿದ್ದು, ಕೆಲ ಫಲಾನುಭವಿಗಳು ಕೆಲವೊಂದು ವ್ಯವಹಾರ ನಡೆಸುವಾಗ ಜಿಎಸ್‌ಟಿ, ಆದಾಯ ತೆರಿಗೆ ವ್ಯಾಪ್ತಿಗೆ ಒಳಪಟ್ಟಿರುತ್ತಾರೆ.

ಬದಲಾವಣೆ ಮಾಡಲು ಸಾಧ್ಯವಿಲ್ಲ

ಗೃಹಲಕ್ಷ್ಮೀ ಯೋಜನೆ ಸಂಬಂಧ ರೂಪಿಸಿರುವ ಸಾಫ್ಟ್‌ವೇರ್‌ನಲ್ಲಿ ಜಿಎಸ್‌ಟಿ, ಆದಾಯ ತೆರಿಗೆ ಅಂತ ತೋರಿಸಿದರೆ ಬದಲಾವಣೆ ಮಾಡಲು ಸಾಧ್ಯವಿಲ್ಲ. ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಇಲಾಖೆಗಳ ದಾಖಲೆಯಲ್ಲೂ ಇದೇ ರೀತಿ ತೋರಿಸುತ್ತಿದೆ. ಇದರಲ್ಲಿ ಸರ್ಕಾರ ಅಥವಾ ಇಲಾಖೆಯ ಯಾವುದೇ ತಪ್ಪಿಲ್ಲ ಎಂದರು.

ಗೃಹಲಕ್ಷ್ಮೀ ಯೋಜನೆ ನಿರಂತರ ಪ್ರಕ್ರಿಯೆ, ಈಗಲೂ ಅರ್ಜಿ ಸಲ್ಲಿಸಿದವರಿಗೆ ಗೃಹ ಲಕ್ಷ್ಮೀ ಯೋಜನೆಯಡಿ ಹಣ ನೀಡಲಾಗುವುದು ಎಂದರು.