ಬಾಲ್ಯ ವಿವಾಹದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ ನಾಚಿಕೆಗೇಡು: ಸಚಿವೆ ಹೆಬ್ಬಾಳ್ಕರ್
ಪಂಚಾಯ್ತಿ, ಶಾಲೆಗಳು, ಎಸ್‌ಡಿಎಂಸಿ, ಕಾನೂನು, ಆರೋಗ್ಯ, ಪೊಲೀಸ್ ಇಲಾಖೆಗಳ ಸಹಕಾರದಿಂದ ಬಾಲ್ಯ ವಿವಾಹ ತಡೆಯಲು ಸಾಧ್ಯವಿದೆ. ರಾಜ್ಯದಲ್ಲಿ ಬಳ್ಳಾರಿ ಮತ್ತು ಬೆಳಗಾವಿ ಮುಂಚೂಣಿಯಲ್ಲಿದೆ ಎಂದು ಹೇಳಲು ನಾಚಿಕೆಯಾಗುತ್ತಿದೆ. ಇದಕ್ಕೆ ಮೂಢನಂಬಿಕೆ ಅಥವಾ ಬೇರೇ ಕಾರಣವಿದೆಯೇ ಎಂಬುದು ಗೊತ್ತಾಗಿಲ್ಲಎಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಮಂಗಳೂರು(ಜು.14): ಬಾಲ್ಯ ವಿವಾಹದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿರುವ ಬಗ್ಗೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ. ಇದು ದುರದೃಷ್ಟಕರವಾಗಿದ್ದು, ಜವಾಬ್ದಾರಿಯುತ ಸಚಿವೆಯಾಗಿ ನಾವೆಲ್ಲರೂ ತಲೆತಗ್ಗಿಸುವ ವಿಚಾರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪಂಚಾಯ್ತಿ, ಶಾಲೆಗಳು, ಎಸ್‌ಡಿಎಂಸಿ, ಕಾನೂನು, ಆರೋಗ್ಯ, ಪೊಲೀಸ್ ಇಲಾಖೆಗಳ ಸಹಕಾರದಿಂದ ಬಾಲ್ಯ ವಿವಾಹ ತಡೆಯಲು ಸಾಧ್ಯವಿದೆ. ರಾಜ್ಯದಲ್ಲಿ ಬಳ್ಳಾರಿ ಮತ್ತು ಬೆಳಗಾವಿ ಮುಂಚೂಣಿಯಲ್ಲಿದೆ ಎಂದು ಹೇಳಲು ನಾಚಿಕೆಯಾಗುತ್ತಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಏರಿಕೆ, ಬೆಂಗ್ಳೂರಲ್ಲೇ ಹೆಚ್ಚು..!
ಇದಕ್ಕೆ ಮೂಢನಂಬಿಕೆ ಅಥವಾ ಬೇರೇ ಕಾರಣವಿದೆಯೇ ಎಂಬುದು ಗೊತ್ತಾಗಿಲ್ಲ. ಆದರೆ, ಇಂತಹ ಪ್ರಕರಣ ಗಮನಕ್ಕೆ ಬಂದ ಕೂಡಲೇ ದೂರು ದಾಖಲು ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಬಾಲ್ಯ ವಿವಾಹವನ್ನು ತಳಮಟ್ಟದಿಂದ ಹೋಗಲಾಡಿಸಲು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.